ನಕಲಿ ನಂಬರ್​ ಪ್ಲೇಟ್​ ಇರುವ ಕಾರಿನಲ್ಲಿ ಬಂದು ಸುದೀಪ್​ಗೆ ಬೆದರಿಕೆ ಪತ್ರ ಪೋಸ್ಟ್​ ಮಾಡಿರುವ ಕಿಡಿಗೇಡಿಗಳು

Kichcha Sudeep: ಕೆಂಗೇರಿ ಬಳಿಯ ವ್ಯಕ್ತಿಯೊಬ್ಬರಿಗೆ ಸೇರಿದ ಸ್ವಿಫ್ಟ್ ಕಾರನ್ನು ಕಿಡಿಗೇಡಿಗಳು ಬಳಸಿರುವುದು ಗೊತ್ತಾಗಿದೆ. ನಂಬರ್ ಪ್ಲೇಟ್​ ಬದಲಿಸಿ ಈ ಕೆಲಸ ಮಾಡಲಾಗಿದೆ.

ನಕಲಿ ನಂಬರ್​ ಪ್ಲೇಟ್​ ಇರುವ ಕಾರಿನಲ್ಲಿ ಬಂದು ಸುದೀಪ್​ಗೆ ಬೆದರಿಕೆ ಪತ್ರ ಪೋಸ್ಟ್​ ಮಾಡಿರುವ ಕಿಡಿಗೇಡಿಗಳು
ಕಿಚ್ಚ ಸುದೀಪ್
Follow us
|

Updated on:Apr 09, 2023 | 2:58 PM

ನಟ ಕಿಚ್ಚ ಸುದೀಪ್​ (Kichcha Sudeep) ಅವರು ಬಿಜೆಪಿ ಜೊತೆ ಗುರುತಿಸಿಕೊಂಡ ಬೆನ್ನಲ್ಲೇ ಅವರಿಗೆ ಬೆದರಿಕೆ ಪತ್ರ ಬಂತು. ಅವರ ಖಾಸಗಿ ವಿಡಿಯೋಗಳನ್ನು ವೈರಲ್​ ಮಾಡುವುದಾಗಿ ಬೆದರಿಕೆ ಹಾಕಲಾಗಿರುವ ಈ ಪತ್ರಗಳ ಹಿಂದಿನ ಕಿಡಿಗೇಡಿಗಳು ಯಾರು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. ಸದ್ಯಕ್ಕೆ ತನಿಖೆ ಚುರುಕುಗೊಂಡಿದೆ. ಬೆದರಿಕೆ ಪತ್ರ ರವಾನೆ ಆಗಿರುವುದು ದೊಮ್ಮಲೂರು ಅಂಚೆ ಕಚೇರಿಯಿಂದ ಎಂಬುದು ಗೊತ್ತಾಗಿದೆ. ಅದರ ಜಾಲ ಹುಡುಕಿ ಹೊರಟಾಗ ಇನ್ನಷ್ಟು ವಿವರಗಳು ಲಭ್ಯವಾಗಿವೆ. ದುಷ್ಕರ್ಮಿಗಳು ಸ್ವಿಫ್ಟ್ ಕಾರಿನಲ್ಲಿ ಬಂದು ಪೋಸ್ಟ್ ಬಾಕ್ಸ್​ಗೆ ಬೆದರಿಕೆ ಪತ್ರ (Threat Letter) ಹಾಕಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಈ ಕಾರಿನ ನಂಬರ್​ ಪ್ಲೇಟ್​ ನಕಲಿ ಎಂಬುದು ಕೂಡ ತಿಳಿದುಬಂದಿದೆ.

ಕೆಂಗೇರಿ ಬಳಿಯ ವ್ಯಕ್ತಿಯೊಬ್ಬರಿಗೆ ಸೇರಿರುವ ಸ್ವಿಫ್ಟ್ ಕಾರನ್ನು ಕಿಡಿಗೇಡಿಗಳು ಬಳಸಿರುವುದು ಗೊತ್ತಾಗಿದೆ. ಆದರೆ ಬೆದರಿಕೆ ಪತ್ರಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಆ ವ್ಯಕ್ತಿ ಹೇಳಿದ್ದಾರೆ. ನಂಬರ್ ಪ್ಲೇಟ್​ ಬದಲಿಸಿ ಕಿಡಿಗೇಡಿಗಳು ಈ ಕೆಲಸ ಮಾಡಿದ್ದಾರೆ. ಬೆದರಿಕೆ ಪತ್ರ ಬರೆದ ದುಷ್ಕರ್ಮಿಗಳಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಆದಷ್ಟು ಬೇಗ ಕಿಡಿಗೇಡಿಗಳು ಪತ್ತೆಯಾಗಲಿ ಎಂದು ಸುದೀಪ್​ ಫ್ಯಾನ್ಸ್​ ಕಾಯುತ್ತಿದ್ದಾರೆ.

ಬೆದರಿಕೆ ಪತ್ರದ ಬಗ್ಗೆ ಸುದೀಪ್​ ಹೇಳಿದ್ದೇನು?

ಬೆದರಿಕೆ ಪತ್ರ ಬಂದಿರುವುದರ ಹಿಂದೆ ರಾಜಕೀಯದವರ ಕೈವಾಡ ಇರಬಹುದು ಎಂದು ಊಹಿಸಲಾಗಿತ್ತು. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದೀಪ್​ ಅವರು ಏಪ್ರಿಲ್​ 5ರಂದು ಪ್ರತಿಕ್ರಿಯೆ ನೀಡಿದ್ದರು. ಬೆದರಿಕೆ ಪತ್ರ ಬರೆದಿರುವುದು ರಾಜಕೀಯದವರಲ್ಲ ಎಂದು ಸುದೀಪ್​ ಸ್ಪಷ್ಟನೆ ನೀಡಿದ್ದರು. ‘ಖಂಡಿತ ಇದನ್ನ ಚಿತ್ರರಂಗದವರೇ ಮಾಡಿಸಿದ್ದಾರೆ. ಯಾರು ಅಂತ ಗೊತ್ತಿದ್ದರೂ ಕೂಡ ಈಗ ಸೈಲೆಂಟಾಗಿ ಇರುತ್ತೇನೆ. ಅದಕ್ಕೆ ಹೇಗೆ ಉತ್ತರ ಕೊಡಬೇಕು ಅಂತ ನನಗೆ ಗೊತ್ತಿದೆ. ಇವೆಲ್ಲ ಕಾನೂನಿನ ಪ್ರಕಾರ ಹೋದರೆ ಒಳ್ಳೆಯದು’ ಎಂದು ಸುದೀಪ್​ ಹೇಳಿದ್ದರು.

ಇದನ್ನೂ ಓದಿ
Image
‘ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ, ಯಾರಿಗೂ ಟಿಕೆಟ್ ಕೇಳಿಲ್ಲ’; ಸುದೀಪ್ ಸ್ಪಷ್ಟನೆ
Image
Kiccha Sudeep: ತೆರೆಮೇಲೆ ಸುದೀಪ್​ ರಾಜಕಾರಣಿ ಪಾತ್ರ ಮಾಡಿದ್ದು ಒಮ್ಮೆ ಮಾತ್ರ; ‘ಕಿಚ್ಚ’ ಚಿತ್ರದಲ್ಲಿತ್ತು ಪಕ್ಕಾ ಪೊಲಿಟಿಕಲ್​ ಕಥೆ​
Image
‘ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’; ಸುದೀಪ್ ಬಿಜೆಪಿ ಸೇರ್ತಾರೆ ಎನ್ನುವ ವಿಚಾರದಲ್ಲಿ ಪ್ರಕಾಶ್ ರಾಜ್ ಪ್ರತಿಕ್ರಿಯೆ
Image
Kichcha Sudeep: ನಟ ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಇದನ್ನೂ ಓದಿ: ಬೊಮ್ಮಾಯಿಗೆ ಮಾಮ ಅಂತ ಸುದೀಪ್​ ಕರೆಯೋದು ಯಾಕೆ? ಇಲ್ಲಿದೆ ಕಿಚ್ಚ ನೀಡಿದ ವಿವರಣೆ

‘ಇಂಥ ಕೆಲಸ ಮಾಡುವ ಬೇರೆಯವರಿಗೂ ಇದು ಒಂದು ಪಾಠ ಆಗಬೇಕಿದೆ. ವಿಳಾಸ ಗೊತ್ತಿದೆ ಎಂದಮಾತ್ರಕ್ಕೆ ಯಾರು ಬೇಕಾದರೂ ಒಂದು ಪೋಸ್ಟ್​ ಮಾಡುತ್ತಾರೆ. ಇದಕ್ಕೂ ರಾಜಕೀಯದಲ್ಲಿ ಇರುವವರಿಗೂ ಯಾವುದೇ ಸಂಬಂಧ ಇಲ್ಲ. ಚಿತ್ರರಂಗದಲ್ಲಿ ಇರುವವರೇ ಇದನ್ನು ಮಾಡಿದ್ದಾರೆ. ಅವರು ಯಾರು ಎಂಬುದು ಕೂಡ ನನಗೆ ಗೊತ್ತು. ಆ ಬಗ್ಗೆ ನಾನು ಇವತ್ತು ಮಾತನಾಡಲ್ಲ. ಸರಿಯಾದ ದಾರಿಯಲ್ಲೇ ಅದು ಬರಲಿ. ಒಂದು ವಿಚಾರ ತಿಳಿದುಕೊಳ್ಳಿ. ನಾನು ಯಾವುದಕ್ಕೂ ಹೆದರುವವನಲ್ಲ. ಅದಂತೂ ಸತ್ಯ’ ಎಂದಿದ್ದರು ಸುದೀಪ್​.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:58 pm, Sun, 9 April 23

ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ