AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಓಂ ಪ್ರಕಾಶ್ ರಾವ್ ಕಂಬ್ಯಾಕ್ ಸಿನಿಮಾದಲ್ಲಿ ಮೂವರು ನಾಯಕಿಯರು

‘ಫೀನಿಕ್ಸ್’ ಓಂ ಪ್ರಕಾಶ್ ರಾವ್​ ನಿರ್ದೇಶನದ 49ನೇ ಸಿನಿಮಾ ಅನ್ನೋದು ವಿಶೇಷ. ಇದೊಂದು ಮಹಿಳಾ ಪ್ರಧಾನ ಸಿನಿಮಾ. ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ.

 ಓಂ ಪ್ರಕಾಶ್ ರಾವ್ ಕಂಬ್ಯಾಕ್ ಸಿನಿಮಾದಲ್ಲಿ ಮೂವರು ನಾಯಕಿಯರು
ಫೀನಿಕ್ಸ್ ಸಿನಿಮಾ ತಂಡ
ರಾಜೇಶ್ ದುಗ್ಗುಮನೆ
|

Updated on: Jul 31, 2023 | 11:02 AM

Share

ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತಿ ಓಂ ಪ್ರಕಾಶ್ ರಾವ್​ಗೆ (Om Prakash Rau) ಇದೆ. ಇತ್ತೀಚೆಗೆ ಅವರ ನಿರ್ದೇಶನದ ಯಾವುದೇ ಸಿನಿಮಾ ಬಂದಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇತ್ತು. ಈಗ ಈ ಬೇಸರ ದೂರವಾಗುತ್ತಿದೆ. ‘ಫೀನಿಕ್ಸ್’ ಹೆಸರಿನ ಸಿನಿಮಾ ಮೂಲಕ ಕಂಬ್ಯಾಕ್ ಮಾಡಲು ಓಂ ಪ್ರಕಾಶ್ ರಾವ್ ರೆಡಿ ಆಗಿದ್ದಾರೆ. ಶೀಘ್ರದಲ್ಲೇ ಈ ಚಿತ್ರಕ್ಕೆ ಶೂಟಿಂಗ್ ಆರಂಭವಾಗಲಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಕ್ಕಿದೆ.

ಶ್ರೀಗುರು ಚಿತ್ರಾಲಯ ಬ್ಯಾನರ್ ಅಡಿಯಲ್ಲಿ ತ್ರಿಶಾ ಪ್ರಕಾಶ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ‘ಫೀನಿಕ್ಸ್’ ಓಂ ಪ್ರಕಾಶ್ ರಾವ್​ ನಿರ್ದೇಶನದ 49ನೇ ಸಿನಿಮಾ ಅನ್ನೋದು ವಿಶೇಷ. ಇದೊಂದು ಮಹಿಳಾ ಪ್ರಧಾನ ಸಿನಿಮಾ. ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ. ನಿಮಿಕಾ ರತ್ನಾಕರ್, ಶಿಲ್ಪ ಶೆಟ್ಟಿ ಹಾಗೂ ಕೃತಿಕಾ ಲೋಬೋ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಭಾಸ್ಕರ್ ಶೆಟ್ಟಿ, ಜಗದೀಶ್ ಮತ್ತು ಪ್ರತಾಪ್ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪ್ರದೀಪ್ ರಾಹುತ್ ಅವರು ಈ ಚಿತ್ರದಲ್ಲಿ ಮುಖ್ಯ ವಿಲನ್ ಪಾತ್ರ ಮಾಡುತ್ತಿದ್ದಾರೆ. ಅನಿಲ್ ಕುಮಾರ್, ಸ್ವಸ್ತಿಕ್ ಶಂಕರ್ ಮುಂತಾದವರು ಪಾತ್ರವರ್ಗದಲ್ಲಿದ್ದಾರೆ. ಆಗಸ್ಟ್ ತಿಂಗಳಲ್ಲಿ ಶೂಟಿಂಗ್ ಆರಂಭ ಆಗಲಿದೆ. ಬೆಂಗಳೂರಿನ ಜೊತೆ ವಿದೇಶದಲ್ಲೂ ಶೂಟಿಂಗ್​​ಗೆ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಜರ್ಮನಿ ಮತ್ತು ಆಸ್ಟ್ರೀಯಾದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಓಂ ಪ್ರಕಾಶ್ ರಾವ್ ತಿಳಿಸಿದ್ದಾರೆ.

ಇದನ್ನೂ ಓದಿ: ಮೊದಲ ಮೂರು ದಿನಕ್ಕೆ ರಣವೀರ್-ಆಲಿಯಾ ಸಿನಿಮಾ ಗಳಿಸಿದ್ದು ಬರೀ ಇಷ್ಟೇನಾ? ಸೋಲಿನ ಮುನ್ಸೂಚನೆಯೇ?

ಸುಬ್ರಹ್ಮಣಿ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಓಂ ಪ್ರಕಾಶ್ ರಾವ್ ಅವರು ಚಿತ್ರಕಥೆ ಬರೆದಿದ್ದಾರೆ. ಈ ಚಿತ್ರಕ್ಕೆ ಸಾಧು ಕೋಕಿಲ ಅವರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ರವಿಕುಮಾರ್ ಅವರು ಕ್ಯಾಮೆರಾ ಕೆಲಸ ಮಾಡಲಿದ್ದಾರೆ. ಲಕ್ಷ್ಮಣ್ ರೆಡ್ಡಿ ಸಂಕಲನ ಹಾಗೂ ಸಾಹಸ ನಿರ್ದೇಶಕರಾಗಿ ವಿಜಯನ್ ಅವರು ಕೆಲಸ ಮಾಡುತ್ತಿದ್ದಾರೆ. ಎಂ.ಎಸ್ ರಮೇಶ್ ಸಂಭಾಷಣೆ ಚಿತ್ರಕ್ಕಿದೆ. ಓಂ ಪ್ರಕಾಶ್ ರಾವ್ ಜನ್ಮದಿನದ ಪ್ರಯುಕ್ತ ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ