AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಮೂವರು ಕನ್ನಡಿಗರು ಯಾರು?

ಈ ವರೆಗೆ 54 ಮಂದಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೇವಲ ಸಿನಿಮಾ ನಟ ನಟಿಯರು ಮಾತ್ರವೇ ಅಲ್ಲದೆ, ಸಿನಿಮಾ ರಂಗದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹಲವಾರು ತಂತ್ರಜ್ಞರು, ಕಲಾವಿದರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ. ಈ ವರೆಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿರುವ 54 ಮಂದಿ ಮಹನೀಯರಲ್ಲಿ ಮೂವರು ಮಾತ್ರವೇ ಕರ್ನಾಟಕದ ಕಲಾವಿದರಿದ್ದಾರೆ. ಯಾರದು?

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಮೂವರು ಕನ್ನಡಿಗರು ಯಾರು?
Dada Saheb Phalke
ಮಂಜುನಾಥ ಸಿ.
|

Updated on:Sep 16, 2026 | 9:13 PM

Share

ಮುಖ್ಯಾಂಶಗಳು

  • 54 ಮಂದಿಗೆ ಸಿಕ್ಕಿದೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ
  • 54 ಮಂದಿಯಲ್ಲಿ ಕೇವಲ ಮೂವರು ಮಾತ್ರ ಕನ್ನಡಿಗರು
  • ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಕನ್ನಡಿಗರು ಯಾರು?

ಭಾರತೀಯ ಸಿನಿಮಾ ರಂಗದಲ್ಲಿ ಸಲ್ಲಿಸಿದ ಸೇವೆಗೆ ಕೊಡಮಾಡುವ ಅತ್ಯುನ್ನತ ಪ್ರಶಸ್ತಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ. ಈ ಪ್ರಶಸ್ತಿಗೆ ಭಾಜನರಾಗುವುದು ಭಾರತದ ಬಹುತೇಕ ಎಲ್ಲ ಸಿನಿಮಾ ಕಲಾವಿದ, ತಂತ್ರಜ್ಞರ ಕನಸು. 1969 ರಲ್ಲಿ ಕೊಡಲಾರಂಭಿಸಿದ ಈ ಅತ್ಯುತ್ತನ ಪ್ರಶಸ್ತಿಗೆ ಈ ವರೆಗೆ 54 ಮಂದಿ ಭಾಜನರಾಗಿದ್ದಾರೆ. ಕೇವಲ ಸಿನಿಮಾ ನಟ ನಟಿಯರು ಮಾತ್ರವೇ ಅಲ್ಲದೆ, ಸಿನಿಮಾ ರಂಗದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹಲವಾರು ತಂತ್ರಜ್ಞರು, ಕಲಾವಿದರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ. ಈ ವರೆಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿರುವ 54 ಮಂದಿ ಮಹನೀಯರಲ್ಲಿ ಮೂವರು ಮಾತ್ರವೇ ಕರ್ನಾಟಕದ ಕಲಾವಿದರಿದ್ದಾರೆ. ಯಾರದು?

ಡಾ ರಾಜ್​​ಕುಮಾರ್

ಕನ್ನಡ ಚಿತ್ರರಂಗದ ಮೇರು ನಟ, ದಂತಕತೆ ಡಾ ರಾಜ್​​ಕುಮಾರ್, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ ಎನಿಸಿಕೊಂಡರು. ಡಾ ರಾಜ್​​ಕುಮಾರ್ ಅವರು ಚಿತ್ರರಂಗಕ್ಕೆ ಸಲ್ಲಿಸಿರುವ ಅಪರಿಮಿತ ಸೇವೆಯನ್ನು ಗುರುತಿಸಿ 1995ರಲ್ಲಿಯೇ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯ್ತು. ಈ ಅತ್ಯುನ್ನತ ಪ್ರಶಸ್ತಿಗೆ ಭಾಜನರಾದ ಮೊದಲ ಕನ್ನಡಿಗ ಎನಿಸಿಕೊಂಡರು ಡಾ ರಾಜ್​​ಕುಮಾರ್.

ವಿಕೆ ಮೂರ್ತಿ

ಕನ್ನಡ ಸಿನಿಮಾ ಪ್ರೇಮಿಗಳಿಗೆ ಬಹುತೇಕ ಅಪರಿಚಿತ ಹೆಸರು ವಿಕೆ ಮೂರ್ತಿ. ಅಸಲಿಗೆ ಇವರು ಮೈಸೂರಿನವರು ಆದರೆ ಮಿಂಚಿದ್ದು ಮಾತ್ರ ಹಿಂದಿ ಸಿನಿಮಾ ರಂಗದಲ್ಲಿ. ಹಿಂದಿ ಚಿತ್ರರಂಗದ ತಂತ್ರಜ್ಞರು ವಿಶೇಷವಾಗಿ ಸಿನಿಮಾಟೊಗ್ರಾಫರ್​​ಗಳು ಇಂದಿಗೂ ವಿಕೆ ಮೂರ್ತಿ ಅವರನ್ನು ಅಭ್ಯಾಸ ಮಾಡುತ್ತಾರೆ. ಹಿಂದಿ ಸಿನಿಮಾ ಸಿನಿಮಾಟೊಗ್ರಫಿಗೆ ಭಿನ್ನ ಭಾಷೆಯನ್ನೇ ಬರೆದುಕೊಟ್ಟವರು ವಿಕೆ ಮೂರ್ತಿ. ಗುರುದತ್ ಅವರೊಡನೆ ಸೇರಿ ಅವರು ಮಾಡಿದ ಪ್ರಯೋಗಗಳು ಇಂದಿಗೂ ಸಿನಿಮಾ ಶಾಲೆಯಲ್ಲಿ ಪಠ್ಯಗಳಾಗಿವೆ. ಕನ್ನಡಿಗರಾದ ವಿಕೆ ಮೂರ್ತಿ ಕೇವಲ ಒಂದು ಕನ್ನಡ ಸಿನಿಮಾಕ್ಕೆ ಕೆಲಸ ಮಾಡಿದ್ದಾರೆ ಅದುವೇ 1993ರಲ್ಲಿ ಬಿಡುಗಡೆ ಆದ ‘ಹೂವು ಹಣ್ಣು’. ಈ ಅದ್ಭುತ ಸಿನಿಮಾಟೊಗ್ರಾಫರ್​ಗೆ 2008 ರಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಯ್ತು.

ಇದನ್ನೂ ಓದಿ:ಐದು ದಶಕದ ಅವಿರತ ಕಲಾಸೇವೆ: ಅನಂತ್ ನಾಗ್ ಅವರ ಸಿನಿ ಪಯಣದ ಪಕ್ಷಿ ನೋಟ

ಅನಂತ್ ನಾಗ್

ಕನ್ನಡ ಚಿತ್ರರಂಗದ ಶ್ರೇಷ್ಠ ನಟರಲ್ಲಿ ಒಬ್ಬರಾಗಿರುವ ಅನಂತ್ ನಾಗ್ ಅವರಿಗೆ 2024ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 53 ವರ್ಷಗಳ ಕಾಲ ಅವರು ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದು, ಈ ವರೆಗೆ 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಅನಂತ್ ನಾಗ್ ಅವರು ಕನ್ನಡ ಮಾತ್ರವೇ ಅಲ್ಲದೆ ಹಿಂದಿ, ಮಲಯಾಳಂ, ತೆಲುಗು, ಮರಾಠಿ ಭಾಷೆಗಳ ಸಿನಿಮಾಗಳಲ್ಲೂ ನಟನೆ ಮಾಡಿದ್ದಾರೆ. ಅವರ ಅವಿರತ ಕಲಾಸೇವೆಯನ್ನು ಗುರುತಿಸಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಕೊಡಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Wed, 16 September 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!