AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ವಿರುದ್ಧ ಸಾಕ್ಷಿ ಹೇಳಲು ನಿಂತ ಆ ಮೂವರು ಯಾರು?

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ. ದರ್ಶನ್ ವಿರುದ್ಧ ಸಾಕ್ಷಿ ಹೇಳಲು ಮೂವರು ಸಿದ್ಧರಾಗಿದ್ದಾರೆ. ಅವರು ಯಾರು? ಅವರು ಏನು ಹೇಳಿದ್ದಾರೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ವಿರುದ್ಧ ಸಾಕ್ಷಿ ಹೇಳಲು ನಿಂತ ಆ ಮೂವರು ಯಾರು?
ದರ್ಶನ್ ವಿರುದ್ಧ ಸಾಕ್ಷಿ ಹೇಳಲು ನಿಂತು ಆ ಮೂವರು ಯಾರು?
Jagadisha B
| Edited By: |

Updated on:Sep 05, 2024 | 10:49 AM

Share

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಸಂಕಷ್ಟ ಅನುಭವಿಸುತ್ತಿದ್ದಾರೆ. ಅವರು ಜೈಲು ಸೇರಿ ಮೂರು ತಿಂಗಳು ಕಳೆಯುತ್ತಾ ಬಂದಿದ್ದು, ಅವರ ವಿರುದ್ಧ ಚಾರ್ಜ್​​ಶೀಟ್ ಕೂಡ ಸಲ್ಲಿಕೆ ಆಗಿದೆ. ಈ ಪ್ರಕರಣದಲ್ಲಿ ಬರೋಬ್ಬರಿ 3991 ಪುಟಗಳ ಚಾರ್ಜ್​ಶೀಟ್ ನ್ಯಾಯಾಲಯದ ಕೈ ಸೇರಿದೆ. ದರ್ಶನ್ ವಿರುದ್ಧ ಸಾಕ್ಷಿ ಹೇಳಲು ಮೂವರು ಸಿದ್ಧರಾಗಿದ್ದಾರೆ. ಅವರು ಯಾರು? ಅವರು ಏನು ಹೇಳಿದ್ದಾರೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಕೋರ್ಟ್​ನಲ್ಲಿ ಮಹತ್ವ ಪಡೆದುಕೊಳ್ಳುತ್ತವೆ. ಈಗ ದರ್ಶನ್ ವಿರುದ್ಧ 3 ಜನರು ಸಾಕ್ಷಿ ಹೇಳಲು ರೆಡಿ ಆಗಿದ್ದಾರೆ. ಅದರಲ್ಲಿ ಸಾಕ್ಷಿ ನಂಬರ್​ 1 ಶೆಡ್ಡಿನ ವಾಚ್​ಮ್ಯಾನ್. ದರ್ಶನ್ ಶೆಡ್​ಗೆ ಬಂದಿದ್ದು, ಹೋಗಿದ್ದು ಸೇರಿ ಎಲ್ಲಾ ಮಾಹಿತಿ ಬಗ್ಗೆ ಅವರು ಹೇಳಿಕೆ ನೀಡಿದ್ದಾರೆ. ಘಟನೆ ನಡೆದ ಸಮಯದಲ್ಲಿ ಯಾರು ಬಂದರು, ಯಾವಾಗ ಬಂದರು, ಯಾವ ವಾಹನಗಳು ಬಂದಿದ್ದವು ಎಂದು ಮಾಹಿತಿ ನೀಡಿದ್ದಾರೆ. ರೇಣುಕಾ ಸ್ವಾಮಿ ಬದುಕಿದ್ದಾಗ ವಾಚ್​ ಮ್ಯಾನ್ ನೋಡಿದ್ದರು ಎನ್ನಲಾಗಿದೆ.

ಶೆಡ್​​ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಎರಡು ಹಾಗೂ ಮೂರನೇ ಪ್ರತ್ಯಕ್ಷ ಸಾಕ್ಷಿ ಎಂದು ಪರಿಗಣಿಸಲಾಗಿದೆ. ರೇಣುಕಾ ಸ್ವಾಮಿಗೆ ಎಷ್ಟು ಸಮಯ ಹೊಡೆದರು, ಯಾರು ಏನು ಮಾಡಿದರು ಎಂಬ ಸಂಪೂರ್ಣ ಮಾಹಿತಿಯನ್ನು ಸಾಕ್ಷಿದಾರರು ನೀಡಿದ್ದಾರೆ. ಇವುಗಳು ದರ್ಶನ್​ಗೆ ಮುಳುವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ದರ್ಶನ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ; ರೇಣುಕಾ ಸ್ವಾಮಿ ತಂದೆ ಮೊದಲ ರಿಯಾಕ್ಷನ್

ದರ್ಶನ್ ಸೇರಿ ಬಂಧನಕ್ಕೆ ಒಳಗಾದ 17 ಮಂದಿಯಲ್ಲಿ ಯಾರು ಕೊಲೆ ಮಾಡಿದ್ದು ಎಂಬುದು ಇನ್ನೂ ಸಾಬೀತಾಗಿಲ್ಲ. ಸದ್ಯ ಎಲ್ಲರ ಭಾಗಿದಾರತ್ವ ಇರುವ ಬಗ್ಗೆ ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದೆ. ಈ ಪೈಕಿ ಯಾರು ತಪ್ಪು ಮಾಡಿದ್ದಾರೆ, ಯಾರ ಪಾತ್ರ ಎಷ್ಟಿದೆ ಎನ್ನುವ ವಿಚಾರ ಕೋರ್ಟ್ ವಿಚಾರಣೆ ಬಳಿಕ ಗೊತ್ತಾಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:25 am, Thu, 5 September 24

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ