‘ನಾನು ಧರಿಸಿದ್ದು ನಿಜವಾದ ಹುಲಿ ಉಗುರಲ್ಲ, ಬೇಕಿದ್ದರೆ ಪರಿಶೀಲಿಸಿ’; ನಿಖಿಲ್ ಕುಮಾರ್ ಸ್ಪಷ್ಟನೆ
‘ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ’ ಎಂದು ನಿಖಿಲ್ ಪೋಸ್ಟ್ ಆರಂಭಿಸಿದ್ದಾರೆ.
ನಿಖಿಲ್ ಕುಮಾರ್ (Nikhil Kumar) ಅವರು ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿದ್ದರು ಎನ್ನಲಾದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಸೋಶಿಯಲ್ ಮೀಡಿಯಾದಲ್ಲಿ ನಿಖಿಲ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ‘ಇದು ಸತ್ಯಕ್ಕೆ ದೂರವಾದುದ್ದು’ ಎಂದು ಅವರು ಹೇಳಿದ್ದಾರೆ. ಜೊತೆಗೆ ಸಂಬಂಧ ಪಟ್ಟ ಅಧಿಕಾರಿಗಳು ಇದನ್ನು ಪರಿಶೀಲಿಸಬಹುದು ಎಂದಿದ್ದಾರೆ.
‘ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ’ ಎಂದು ನಿಖಿಲ್ ಪೋಸ್ಟ್ ಆರಂಭಿಸಿದ್ದಾರೆ.
‘ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ’ ಎಂದು ಅವರು ಮನವಿ ಮಾಡಿದ್ದಾರೆ.
ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ. 1/2
— Nikhil Kumar (@Nikhil_Kumar_k) October 25, 2023
ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಎಷ್ಟು ಗ್ರಾಂ ಚಿನ್ನ ಧರಿಸುತ್ತಿದ್ದರು?
ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಮೊದಲು ಬಂಧಿಸಲಾಯಿತು. ಆ ಬಳಿಕ ಹಲವು ಸೆಲೆಬ್ರಿಟಿಗಳು ಹುಲಿ ಉಗುರು ಧರಿಸಿದ್ದ ಫೋಟೋ ವೈರಲ್ ಆದವು. ನಟ ದರ್ಶನ್, ಜಗ್ಗೇಶ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸೇರಿ ಅನೇಕರ ಕತ್ತಿನಲ್ಲಿ ಹುಲಿ ಉಗುರು ಇರುವ ಪೆಂಡೆಂಟ್ ಕಂಡಿದೆ. ಇವರಲ್ಲಿ ಯಾರ್ಯಾರು ಧರಿಸಿದ್ದು ನಿಜವಾದುದ್ದು, ಯಾರ್ಯಾರು ಧರಿಸಿದ್ದು ಡುಪ್ಲಿಕೇಟ್ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:38 pm, Wed, 25 October 23