ಹುಲಿ ಉಗುರು: ವರ್ತೂರು ಸಂತೋಷ್​ ಬಳಿಕ ದರ್ಶನ್​, ವಿನಯ್​ ಗುರೂಜಿ ವಿರುದ್ಧ ದೂರು ದಾಖಲು

ನ್ಯಾಯಾಲಯದ ಆದೇಶದಂತೆ ವರ್ತೂರು ಸಂತೋಷ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅದಾದ ಬಳಿಕ ಹುಲಿ ಉಗುರು ಧರಿಸಿದ ಇನ್ನಿತರ ಸೆಲೆಬ್ರಿಟಿಗಳ ಫೋಟೋ ಕೂಡ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ನಟ ದರ್ಶನ್​ ಹಾಗೂ ವಿನಯ್​ ಗುರೂಜಿ ಅವರ ವಿರುದ್ಧವೂ ದೂರು ದಾಖಲು ಮಾಡಲಾಗಿದೆ.

ಹುಲಿ ಉಗುರು: ವರ್ತೂರು ಸಂತೋಷ್​ ಬಳಿಕ ದರ್ಶನ್​, ವಿನಯ್​ ಗುರೂಜಿ ವಿರುದ್ಧ ದೂರು ದಾಖಲು
ದರ್ಶನ್ ವೈರಲ್​ ಫೋಟೋ
Follow us
TV9 Web
| Updated By: Digi Tech Desk

Updated on:Oct 26, 2023 | 12:37 PM

ರಾಜ್ಯದಲ್ಲೀಗ ಹುಲಿ ಉಗುರಿನ ವಿವಾದ ಸಾಕಷ್ಟು ಸದ್ದು ಮಾಡುತ್ತಿದೆ. ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ ಬಾಸ್​ ಮನೆಯಲ್ಲಿದ್ದ ವರ್ತೂರು ಸಂತೋಷ್​ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಬಳಿಕ ಇನ್ನುಳಿದ ಸೆಲೆಬ್ರಿಟಿ ಮೇಲೂ ಕಣ್ಣು ಬಿದ್ದಿದೆ. ಖ್ಯಾತ ನಟ ದರ್ಶನ್​ ಅವರು ಕೂಡ ಹುಲಿ ಉಗುರಿನ ಲಾಕೆಟ್​ (Tiger Claw Pendant) ಧರಿಸಿದ್ದಾರೆ ಎಂಬ ಆರೋಪ ಎದುರಾಗಿದೆ. ಅಲ್ಲದೇ ವಿನಯ್​ ಗುರೂಜಿ (Vinay Guruji) ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್​ ಅವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಇದರಿಂದ ದರ್ಶನ್​ (Darshan) ಹಾಗೂ ವಿನಯ್​ ಗುರೂಜಿಗೆ ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

‘ದರ್ಶನ್ ಬಂಗಾರದ ಚೈನ್ ಹಾಕಿದ್ದಾರೆ. ಅದರಲ್ಲಿ ಹುಲಿಯ ಉಗುರು ಇದೆ. ಅವರಿಂದ ಕಾನೂನಿನ ಉಲ್ಲಂಘನೆ ಆಗಿದೆ. ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ. ಹುಲಿಯ ಉಗುರು ಇದ್ದ ಕಾರಣಕ್ಕೆ ವರ್ತೂರು ಸಂತೋಷ ಅವರನ್ನು ಬಂಧಿಸಿದ್ದೀರಿ. ಅದೇ ರೀತಿ ನಟ ದರ್ಶನ್, ವಿನಯ್ ಗುರೂಜಿಯನ್ನೂ ಕರೆಸಿ ವಿಚಾರಿಸಿ. ಅವರು ಧರಿಸಿದ್ದು ಅಸಲಿನೋ ಅಥವಾ ನಕಲಿಯೋ ಎಂಬುದು ಅಧಿಕಾರಿಗಳು ಪರಿಶೀಲಿಸಬೇಕು. ದರ್ಶನ್ ಅವರು ಅರಣ್ಯ ರಾಯಭಾರಿ ಆಗಿದ್ದಾರೆ. ಅವರಿಗೆ ಕನಿಷ್ಠ ಪ್ರಜ್ಞೆ ಇಲ್ಲವೇ? ಅವರು ಧರಿಸಿದ ಹುಲಿ ಉಗುರು ಅಸಲಿಯೋ ಅಥವಾ ನಕಲಿಯೋ ಅನ್ನೋದನ್ನು ಪರಿಶೀಲನೆ ಮಾಡೋದು ಅರಣ್ಯಾಧಿಕಾರಿಗಳ ಕಾರ್ಯ’ ಎಂದು ಶಿವಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಕೇಸ್: ಚಿನ್ನದಂಗಡಿ ಮಾಲೀಕನಿಗೂ ಎದುರಾಯ್ತು ಸಂಕಷ್ಟ

ಹಳ್ಳಿಕಾರ್ ತಳಿ ಸಂರಕ್ಷಣೆ ಮಾಡುತ್ತಾ ಹೆಸರುವಾಸಿ ಆಗಿರುವ ವರ್ತೂರು ಸಂತೋಷ್​ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ರಲ್ಲಿ ಸ್ಪರ್ಧಿ ಆಗಿದ್ದರು. ಅವರು ಹುಲಿ ಉಗುರು ಇರುವ ಲಾಕೆಟ್​ ಧರಿಸಿದ್ದರು. ಅದಕ್ಕೆ ಸಂಧಿಸಿದಂತೆ ದೂರು ದಾಖಲಾದ ಪರಿಣಾಮವಾಗಿ ಅರಣ್ಯಾಧಿಕಾರಿಗಳು ಬಿಗ್​ ಬಾಸ್​ ಮನೆಗೆ ಹೋಗಿ ಸಂತೋಷ್ ಅವರನ್ನು ಬಂಧಿಸಿದರು. ನಂತರ ನ್ಯಾಯಾಲಯದ ಆದೇಶದಂತೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅದಾದ ಬಳಿಕ ಹುಲಿ ಉಗುರು ಧರಿಸಿದ ಇನ್ನಿತರ ಸೆಲೆಬ್ರಿಟಿಗಳ ಫೋಟೋ ಕೂಡ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಎಷ್ಟು ಗ್ರಾಂ ಚಿನ್ನ ಧರಿಸುತ್ತಿದ್ದರು?

ಈ ಹಿಂದೆ ದರ್ಶನ್​ ಮತ್ತು ರಾಕ್​ಲೈನ್​ ವೆಂಕಟೇಶ್​ ಅವರು ಹುಲಿ ಉಗುರಿನ ಲಾಕೆಟ್​ ಧರಿಸಿದ್ದರು. ಆ ಫೋಟೋಗಳನ್ನು ಇಟ್ಟುಕೊಂಡು ಈಗ ಸೋಶಿಯಲ್​ ಮೀಡಿಯಾದಲ್ಲಿ ಟೀಕೆ ಮಾಡಲಾಗುತ್ತಿದೆ. ಈಗ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಾ ಎಂಬುದನ್ನು ಕಾದು ನೋಡಬೇಕು. ಇನ್ನೂ ಹಲವು ಸೆಲೆಬ್ರಿಟಿಗಳ ಫೋಟೋಗಳು ಕೂಡ ಹೊರಬರುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:40 pm, Tue, 24 October 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ