AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿ ಉಗುರು: ದರ್ಶನ್​ ವಿರುದ್ಧ ದೂರು ನೀಡಿದವರಿಗೆ ಅಭಿಮಾನಿಗಳಿಂದ ಕೊಲೆ ಬೆದರಿಕೆ

Tiger Claw Pendant Case: ದರ್ಶನ್​ ಅಭಿಮಾನಿಗಳಿಂದ ಕೊಲೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಶಿವಕುಮಾರ್​ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್​ ಬಿ. ದಯಾನಂದ್​ಗೆ ಶಿವಕುಮಾರ್ ದೂರು ನೀಡಿದ್ದಾರೆ. ಆಡಿಯೋ ಮತ್ತು ವಿಡಿಯೋ ಕಾಲ್​ ಮೂಲಕ ತಮಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಹುಲಿ ಉಗುರು: ದರ್ಶನ್​ ವಿರುದ್ಧ ದೂರು ನೀಡಿದವರಿಗೆ ಅಭಿಮಾನಿಗಳಿಂದ ಕೊಲೆ ಬೆದರಿಕೆ
ದರ್ಶನ್​, ಶಿವಕುಮಾರ್​
ಮದನ್​ ಕುಮಾರ್​
|

Updated on: Oct 26, 2023 | 2:33 PM

Share

ನಟ ದರ್ಶನ್​ (Darshan) ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಹುಲಿ ಉಗುರು ಲಾಕೆಟ್​ (Tiger Claw Pendant) ಧರಿಸಿದ ಆರೋಪ ಅವರ ಮೇಲಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿಇರುವ ಅವರ ಮನೆಯಲ್ಲಿ ಈಗಾಗಲೇ ಅರಣ್ಯಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ದರ್ಶನ್​ ವಿರುದ್ಧ ವಂದೇ ಮಾತರಂ ಸಂಘಟನೆಯ ಮುಖಂಡ ಶಿವಕುಮಾರ್​ ಅವರು ದೂರು ನೀಡಿದ ನಂತರ ಇಷ್ಟೆಲ್ಲ ಬೆಳವಣಿಗೆ ನಡೆದಿದೆ. ಈಗ ದರ್ಶನ್​ ಅಭಿಮಾನಿಗಳಿಂದ (Darshan Fans) ಶಿವಕುಮಾರ್​ಗೆ ಕೊಲೆ ಬೆದರಿಕೆ ಬಂದಿದೆ. ಇದರಲ್ಲಿ ದರ್ಶನ್​ ಅವರ ಕೈವಾಡ ಇದೆ ಎಂದು ಶಿವಕುಮಾರ್​ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ಅಕ್ಟೋಬರ್​ 25ರಂದು ದರ್ಶನ್​ ವಿರುದ್ಧ ಅರಣ್ಯಾಧಿಕಾರಿಗೆ ದೂರು ಕೊಟ್ಟಿದ್ದೆವು. ದೂರು ನೀಡಿದ್ದಕ್ಕೆ ನಮಗೆ ಬೆದರಿಕೆ ಕರೆಗಳು ಬರುತ್ತಿವೆ. ಅವರ ಅಭಿಮಾನಿಗಳು ನಿನ್ನೆ ನನ್ನ ಕಾರನ್ನು ಹಿಂಬಾಲಿಸಿ ಟಚ್ ಮಾಡಿದ್ದಾರೆ. ದರ್ಶನ್​ ತಪ್ಪು ಮಾಡಿಲ್ಲ ಎಂಬುದಾದರೆ ಅಭಿಮಾನಿಗಳು ಯಾಕೆ ಈ ರೀತಿ ಮಾಡುತ್ತಿದ್ದಾರೆ? ದರ್ಶನ್ ಅಭಿಮಾನಿಗಳ ಸಂಘದವರೇ ಈ ಕೆಲಸ ಮಾಡುತ್ತಿದ್ದಾರೆ. ಬೆದರಿಕೆ ಕರೆ ಹಿಂದೆ ಶೇಕಡಾ 100ರಷ್ಟು ದರ್ಶನ್​ ಅವರ ಕೈವಾಡವಿದೆ’ ಎಂದು ಶಿವಕುಮಾರ್​ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ದರ್ಶನ್ ಬಳಿ ಇತ್ತು 8 ಹುಲಿ ಉಗುರಿನ ಮಾದರಿಯ ಪೆಂಡೆಂಟ್? ಇದ್ಯಾವುದೂ ಅಸಲಿ ಅಲ್ಲ?

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುತ್ತಿದ್ದ ವರ್ತೂರು ಸಂತೋಷ್​ ಅವರು ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾದರು. ಅದರ ಬೆನ್ನಲ್ಲೇ ಅನೇಕ ಸೆಲೆಬ್ರಿಟಿಗಳು ಹುಲಿ ಉಗುರು ಧರಿಸಿದ್ದ ಫೋಟೋ ಮತ್ತು ವಿಡಿಯೋ ವೈರಲ್​ ಆಯಿತು. ದರ್ಶನ್​ ಅವರು ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದಾರೆ ಮತ್ತು ವಿನಯ್​ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿವಕುಮಾರ್​ ದೂರು ನೀಡಿದ್ದರು.

ಇದನ್ನೂ ಓದಿ: ಜಗ್ಗೇಶ್ ಮತ್ತು ದರ್ಶನ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಲಿಲ್ಲ

ದರ್ಶನ್​ ಅಭಿಮಾನಿಗಳಿಂದ ಕೊಲೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಶಿವಕುಮಾರ್​ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್​ ಬಿ. ದಯಾನಂದ್​ಗೆ ಶಿವಕುಮಾರ್ ದೂರು ನೀಡಿದ್ದಾರೆ. ಆಡಿಯೋ ಮತ್ತು ವಿಡಿಯೋ ಕಾಲ್​ ಮೂಲಕ ತಮಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಸದ್ಯಕ್ಕಂತೂ ರಾಜ್ಯದಲ್ಲಿ ಹುಲಿ ಉಗುರಿನ ವಿಷಯ ಹೆಚ್ಚು ಚರ್ಚೆ ಆಗುತ್ತಿದೆ. ವರ್ತೂರು ಸಂತೋಷ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದ್ದು, ಜಾಮೀನಿಗಾಗಿ ಅವರು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: Darshan: ಹುಲಿ ಉಗುರು ಧರಿಸಿದ ಆರೋಪ; ನಟ ದರ್ಶನ್​ ಮನೆಯಲ್ಲಿ ಅಧಿಕಾರಿಗಳ ಪರಿಶೀಲನೆ

ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​, ನಟ ಜಗ್ಗೇಶ್​, ನಟ/ರಾಜಕಾರಣಿ ನಿಖಿಲ್​ ಕುಮಾರ್​ ಸೇರಿದಂತೆ ಅನೇಕರು ಹುಲಿ ಉಗುರಿನ ಲಾಕೆಟ್​ ಧರಿಸಿದ ಆರೋಪ ಎದುರಿಸುತ್ತಿದ್ದಾರೆ. ಹಲವರ ಮನೆಯಲ್ಲಿ ಈಗಾಗಲೇ ಪರಿಶೀಲನೆ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಜಗ್ಗೇಶ್​ ಅವರು ಹೈಕೋರ್ಟ್​ ಮೆಟ್ಟಿಲು ಏರಿದ್ದಾರೆ. ದಿನದಿಂದ ದಿನಕ್ಕೆ ಈ ಪ್ರಕರಣ ಬೇರೆ ಬೇರೆ ಸ್ವರೂಪ ಪಡೆದುಕೊಳ್ಳುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ