Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್​, ರಾಕ್​ಲೈನ್​ ವೆಂಕಟೇಶ್​ ಮನೆಯಲ್ಲಿ ಅರಣ್ಯಾಧಿಕಾರಿಗಳ ಶೋಧ; ಹುಲಿ ಉಗುರು ಕೇಸ್​ ತನಿಖೆ ಚುರುಕು

​Tiger Claw Pendant Case: ತಾವು ಧರಿಸಿರುವುದು ನಿಜವಾದ ಹುಲಿ ಉಗುರು ಎಂದು ಸ್ವತಃ ಜಗ್ಗೇಶ್​ ಅವರು ಹೇಳಿದ್ದರು. ಈ ಹಿಂದೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದರು. ರಾಕ್​ಲೈನ್​ ವೆಂಕಟೇಶ್​ ಅವರ ಫೋಟೋ ವೈರಲ್​ ಆಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಬೆಂಗಳೂರಿನಲ್ಲಿ ಶೋಧಕಾರ್ಯ ಆರಂಭಿಸಿದ್ದಾರೆ.

ಜಗ್ಗೇಶ್​, ರಾಕ್​ಲೈನ್​ ವೆಂಕಟೇಶ್​ ಮನೆಯಲ್ಲಿ ಅರಣ್ಯಾಧಿಕಾರಿಗಳ ಶೋಧ; ಹುಲಿ ಉಗುರು ಕೇಸ್​ ತನಿಖೆ ಚುರುಕು
ಜಗ್ಗೇಶ್​, ರಾಕ್​ಲೈನ್​ ವೆಂಕಟೇಶ್​
Follow us
TV9 Web
| Updated By: Digi Tech Desk

Updated on:Oct 26, 2023 | 12:34 PM

ಬೆಂಗಳೂರಿನ ಹಲವು ಕಡೆಗಳಲ್ಲಿ ಅರಣ್ಯಾಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ. ಹುಲಿ ಉಗುರು (​Tiger Claw Pendant) ಧರಿಸಿದ ಆರೋಪ ಎದುರಿಸುತ್ತಿರುವ ಅನೇಕ ಸೆಲೆಬ್ರಿಟಿಗಳ ಮನೆಯಲ್ಲಿ ತಪಾಸಣೆ ನಡೆಸಲಾಗಿದೆ. ಇಂದು (ಅಕ್ಟೋಬರ್​ 25) ಮಧ್ಯಾಹ್ನ ನಟ ದರ್ಶನ್​ ಅವರ ರಾಜರಾಜೇಶ್ವರಿ ನಿವಾಸಕ್ಕೆ ಅಧಿಕಾರಿಗಳು ಭೇಟಿ ನೀಡಿದರು. ಆ ಬಳಿಕ ನಟ ಜಗ್ಗೇಶ್​ (​Jaggesh) ಮತ್ತು ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ (Rockline Venkatesh) ಅವರ ಮನೆಯಲ್ಲೂ ಅರಣ್ಯಾಧಿಕಾರಿಗಳ ಶೋಧ ಕಾರ್ಯ ನಡೆದಿದೆ. ಈ ಪ್ರಕರಣದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಕೇಳಿಬರುತ್ತಿದೆ. ಅದರ ಪರಿಣಾಮವಾಗಿ ತನಿಖೆ ಚುರುಕುಗೊಂಡಿದೆ.

ತಾವು ಧರಿಸಿರುವುದು ನಿಜವಾದ ಹುಲಿ ಉಗುರು ಎಂದು ಸ್ವತಃ ಜಗ್ಗೇಶ್​ ಅವರು ಹೇಳಿದ್ದರು. ಈ ಹಿಂದೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದರು. ಆ ವಿಡಿಯೋ ವೈರಲ್​ ಆದ ಬಳಿಕ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಬೆಂಗಳೂರಿನ ಮಲ್ಲೇಶ್ವರದಲ್ಲಿ ಇರುವ ಅವರ ನಿವಾಸಕ್ಕೆ ಬಂದು ತಪಾಸಣೆ ನಡೆಸಿದ್ದಾರೆ.

ಇದನ್ನೂ ಓದಿ: Darshan: ಹುಲಿ ಉಗುರು ಧರಿಸಿದ ಆರೋಪ; ನಟ ದರ್ಶನ್​ ಮನೆಯಲ್ಲಿ ಅಧಿಕಾರಿಗಳ ಪರಿಶೀಲನೆ

ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಅವರು ಸದ್ಯ ವಿದೇಶಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಇದೆ. ಅವರ ಅನುಪಸ್ಥಿತಿಯಲ್ಲೇ ರಾಜಾಜಿನಗರದಲ್ಲಿ ಇರುವ ನಿವಾಸದಲ್ಲಿ ಪರಿಶೀಲನೆ ನಡೆಯುತ್ತಿದೆ. ಅವರ ಕಾರಿನ ಒಳಗೂ ಶೋಧ ಕಾರ್ಯ ನಡೆಸಲಾಗಿದೆ. ಈ ಸೆಲೆಬ್ರಿಟಿಗಳ ಬಳಿ ಇರುವುದು ನಿಜವಾದ ಹುಲಿ ಉಗುರು ಹೌದೋ ಅಲ್ಲವೋ ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ನಿಜವಾದ ಹುಲಿ ಉಗುರು ಹೊಂದಿರುವುದು ಪತ್ತೆಯಾದರೆ ಜಗ್ಗೇಶ್​, ದರ್ಶನ್​, ರಾಕ್​ಲೈನ್​ ವೆಂಕಟೇಶ್, ನಿಖಿಲ್​ ಕುಮಾರ್​ ಮುಂತಾದ ಸೆಲೆಬ್ರಿಟಿಗಳು ಕೂಡ ವರ್ತೂರು ಸಂತೋಷ್​ ರೀತಿಯೇ ಜೈಲು ವಾಸ ಅನುಭವಿಸಬೇಕಾದ ಪ್ರಸಂಗ ಎದುರಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Varthur Santhosh: ಪರಪ್ಪನ ಅಗ್ರಹಾರಕ್ಕೆ ವರ್ತೂರು ಸಂತೋಷ್​; ಬಿಗ್ ಬಾಸ್​ ಸ್ಪರ್ಧಿಗೆ 14 ದಿನಗಳ ನ್ಯಾಯಾಂಗ ಬಂಧನ

ನಟ ನಿಖಿಲ್​ ಕುಮಾರಸ್ವಾಮಿ ಅವರು ಕೂಡ ಹುಲಿ ಉಗುರಿನ ಲಾಕೆಟ್​ ಧರಿಸಿರುವ ಆರೋಪ ಎದುರಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಅವರ ನಿವಾಸದಲ್ಲೂ ಅರಣ್ಯಾಧಿಕಾರಿಗಳಿಂದ ಶೋಧ ಕಾರ್ಯ ನಡೆದಿದೆ. ಬೆಂಗಳೂರಿನ ಜೆ.ಪಿ. ನಗರದಲ್ಲಿ ಇರುವ ನಿಖಿಲ್ ಕುಮಾರಸ್ವಾಮಿ ಅವರ ನಿವಾಸಕ್ಕೆ ಅರಣ್ಯ ಇಲಾಖೆಯ ನಾಲ್ವರು ಅಧಿಕಾರಿಗಳ ತಂಡ ಬಂದಿದೆ. ಈ ವೇಳೆ ಮನೆಯಲ್ಲಿ ಕುಮಾರಸ್ವಾಮಿ ಹಾಗೂ ನಿಖಿಲ್ ಇಬ್ಬರೂ ಇರಲಿಲ್ಲ. ಹೆಚ್​ಡಿಕೆ ಪತ್ನಿ ಅನಿತಾ ಮಾತ್ರ ಮನೆಯಲ್ಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:24 pm, Wed, 25 October 23

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ