ಹುಲಿ ಉಗುರು ಪ್ರಕರಣ: ನಿಖಿಲ್ ಕುಮಾರಸ್ವಾಮಿ ಮನೆಗೆ ಅರಣ್ಯಾಧಿಕಾರಿಗಳ ಭೇಟಿ

Nikhil Kumaraswamy: ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರು ಧರಿಸಿದ್ದರೆಂಬ ಆರೋಪ ಕೇಳಿಬಂದಿದ್ದು, ಇದೇ ಕಾರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ನಿಖಿಲ್ ನಿವಾಸಕ್ಕೆ ಭೇಟಿ ನೀಡಿ ನೊಟೀಸ್ ನೀಡಿದ್ದಾರೆ.

ಹುಲಿ ಉಗುರು ಪ್ರಕರಣ: ನಿಖಿಲ್ ಕುಮಾರಸ್ವಾಮಿ ಮನೆಗೆ ಅರಣ್ಯಾಧಿಕಾರಿಗಳ ಭೇಟಿ
ನಿಖಿಲ್ ಕುಮಾರಸ್ವಾಮಿ
Follow us
ಮಂಜುನಾಥ ಸಿ.
| Updated By: Digi Tech Desk

Updated on:Oct 26, 2023 | 12:34 PM

ಬಿಗ್​ಬಾಸ್ (Bigg Boss) ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ (Varthur Santhosh) ಹುಲಿ ಉಗುರು ಧರಿಸಿದ್ದು ಸುದ್ದಿಯಾಗಿ ಅವರ ಬಂಧನವಾದ ಬೆನ್ನಲ್ಲೆ ಯಾವೆಲ್ಲ ಸಿನಿಮಾ ಸೆಲೆಬ್ರಿಟಿಗಳು ಹುಲಿ ಉಗುರು ಧರಿಸಿದ್ದರೋ ಅವರುಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ನೊಟೀಸ್ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಟ ದರ್ಶನ್ ಹಾಗೂ ಜಗ್ಗೇಶ್ ಮನೆಗೆ ಇಂದು (ಅಕ್ಟೋಬರ್ 25) ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದರ ಬೆನ್ನಲ್ಲೆ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ನಿವಾಸಕ್ಕೂ ಸಹ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ನೊಟೀಸ್ ನೀಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು ಮದುವೆ ಸಮಯದಲ್ಲಿ ಹುಲಿಯ ಉಗುರಿನ ಸರವೊಂದನ್ನು ಕೊರಳಿಗೆ ಧರಿಸಿದ್ದ ಚಿತ್ರಗಳು ವೈರಲ್ ಆಗಿತ್ತು ಹಾಗಾಗಿ ಅವರ ವಿರುದ್ಧವೂ ಕೆಲ ಸಂಘಟನೆಗಳು ದೂರು ನೀಡಿದ್ದವು. ಇಂದು ಅರಣ್ಯಾಧಿಕಾರಿಗಳು ನಿಖಿಲ್ ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ನಾಲ್ವರು ಅರಣ್ಯ ಇಲಾಖೆ ಅಧಿಕಾರಿಗಳು ನಿಖಿಲ್ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ್ದರು. ಆದರೆ ಈ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಆಗಲಿ ಅಥವಾ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಅವರಾಗಲಿ ಮನೆಯಲ್ಲಿರಲಿಲ್ಲ ಎನ್ನಲಾಗಿದೆ. ಅನಿತಾ ಕುಮಾರಸ್ವಾಮಿ ಅವರು ಈ ವೇಳೆ ಹಾಜರಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಅವರಿಗೆ ನೊಟೀಸ್ ನೀಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಬಿಗ್​ಬಾಸ್ 10: ಈ ವಾರ ಬಿಗ್​ಬಾಸ್ ಮನೆಯಿಂದ ಹೊರಗೆ ಬಂದಿದ್ದು ಯಾರು?

ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಚೈನ್ ಧರಿಸಿದ್ದರೆಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹಬ್ಬುತ್ತಿದ್ದಂತೆ ಈ ಸಂಬಂಧ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯೆ ನೀಡಿದ್ದ ನಿಖಿಲ್ ಕುಮಾರಸ್ವಾಮಿ, ತಾವು ಧರಿಸಿದ್ದು ನಿಜವಾದ ಹುಲಿ ಉಗುರನ್ನು ಬದಲಿಗೆ ಅದೇ ಮಾದರಿಯ ಚೈನು ಎಂದಿದ್ದಾರೆ.

” ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ ನಿಖಿಲ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Wed, 25 October 23