AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಸಿನಿಮಾ ಟೈಟಲ್ ವಿವಾದ; ನಾಗಾಭರಣ ವಿರುದ್ಧ ದೂರು

ನಾಡಪ್ರಭು ಕೆಂಪೇಗೌಡ ಕಾಪಿರೈಟ್ಸ್ ನಮ್ಮದು‌ ಎಂದು ನಾಗಾಭರಣ ಹೇಳಿಕೊಂಡಿದ್ದಾರೆ. ಜೊತೆಗೆ ಕಿರಣ್ ಅವರಿಗೆ ನಿರ್ಬಂಧಕ ನೋಟಿಸ್ ಕಳುಹಿಸಿದ್ದಾರೆ. ಜೂನ್ 27 ಕ್ಕೆ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ' ಚಿತ್ರದ ಮುಹೂರ್ತ ಸಮಾರಂಭ ಇಟ್ಟುಕೊಳ್ಳಲಾಗಿತ್ತು. ಈಗ ಈ ಎಲ್ಲಾ ಬೆಳವಣಿಗೆಯಿಂದ ಮುಹೂರ್ತ ಮುಂದಕ್ಕೆ ಹೋಗಿದೆ.

ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಸಿನಿಮಾ ಟೈಟಲ್ ವಿವಾದ; ನಾಗಾಭರಣ ವಿರುದ್ಧ ದೂರು
ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಸಿನಿಮಾ ಟೈಟಲ್ ವಿವಾದ;
ರಾಚಪ್ಪಾಜಿ ನಾಯ್ಕ್
| Edited By: |

Updated on: Jun 22, 2024 | 7:14 AM

Share

ಸ್ಯಾಂಡಲ್​ವುಡ್​ನಲ್ಲಿ ಸದ್ಯ ಎಲ್ಲೆಲ್ಲೂ ದರ್ಶನ್ (Darshan) ವಿಚಾರವೇ ಚರ್ಚೆ ಆಗುತ್ತಿದೆ. ಈ ಮಧ್ಯೆ ಟೈಟಲ್​ಗಾಗಿ ಕಿತ್ತಾಟ ಶುರುವಾಗಿದೆ. ನಿರ್ದೇಶಕ‌ ನಾಗಾಭರಣ ವಿರುದ್ಧ ಪೊಲೀಸ್ ಠಾಣೆಗೆ ದೂರು ದಾಖಲು ಮಾಡಲಾಗಿದೆ. ನಿರ್ಮಾಪಕ ಕಿರಣ್ ತೋಟಂಬೈಲೆ ಅವರು ನಾಗಾಭರಣ ವಿರುದ್ಧ ದೂರು ನೀಡಿದವರು. ಇದಕ್ಕೆ ಕಾರಣವಾಗಿದ್ದು ‘ನಾಡಪ್ರಭು ಕೆಂಪೇಗೌಡ’ ಟೈಟಲ್. ಅಷ್ಟಕ್ಕೂ ಏನಿದು ಕಿತ್ತಾಟ ಎನ್ನುವ ಪ್ರಶ್ನೆಗೆ ಈ ಸ್ಟೋರಿಯಲ್ಲಿದೆ ಉತ್ತರ

ಕಿರಣ್ ಅವರು ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಹೆಸರಿನ ಸಿನಿಮಾ ಘೋಷಣೆ ಮಾಡಿ ಕೆಲವು ತಿಂಗಳು ಕಳೆದಿದೆ. ನಿರ್ದೇಶಕ ಬಾಬು ಅವವರು ಈ ಚಿತ್ರವನ್ನು ನಿರ್ದೇನ ಮಾಡುತ್ತಿದ್ದಾರೆ. ಇತ್ತ, ನಾಗಾಭರಣ ಅವರು ‘ನಾಡಪ್ರಭು ಕೆಂಪೇಗೌಡ’ ಟೈಟಲ್ ರಿಜಿಸ್ಟರ್ ಮಾಡಿಸಿ, ಸಿನಿಮಾ ಘೋಷಿಸಿದ್ದಾರೆ. ಇದಕ್ಕೆ ಡಾಲಿ ಧನಂಜಯ್ ಹೀರೋ.

ನಾಡಪ್ರಭು ಕೆಂಪೇಗೌಡ ಕಾಪಿರೈಟ್ಸ್ ನಮ್ಮದು‌ ಎಂದು ನಾಗಾಭರಣ ಹೇಳಿಕೊಂಡಿದ್ದಾರೆ. ಜೊತೆಗೆ ಕಿರಣ್ ಅವರಿಗೆ ನಿರ್ಬಂಧಕ ನೋಟಿಸ್ ಕಳುಹಿಸಿದ್ದಾರೆ. ಜೂನ್ 27 ಕ್ಕೆ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಚಿತ್ರದ ಮುಹೂರ್ತ ಸಮಾರಂಭ ಇಟ್ಟುಕೊಳ್ಳಲಾಗಿತ್ತು. ಈಗ ಈ ಎಲ್ಲಾ ಬೆಳವಣಿಗೆಯಿಂದ ಮುಹೂರ್ತ ಮುಂದಕ್ಕೆ ಹೋಗಿದೆ.

ಇದನ್ನೂ ಓದಿ: ಕೆಂಪೇಗೌಡರ ಬಗ್ಗೆ ಮಾಡ್ತಿರೋ ಸಿನಿಮಾಗೆ ತಡೆ ತಂದ ನಾಗಾಭರಣ

ಸದ್ಯ ಇರುವ ಸ್ಟೇ ವೆಕೇಟ್ ಮಾಡಲು ಕೋರ್ಟ್​ನಲ್ಲಿ ಕಿರಣ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ‘ನಾಡಪ್ರಭು ಅನ್ನುವುದು ಸಾರ್ವತ್ರಿಕ ಹೆಸರು. ಅದರ ಮೇಲೆ ಸ್ಟೇ ತರಲು ಸಾಧ್ಯವಿಲ್ಲ. ಅವರು ಕಾಪಿರೈಟ್ಸ್ ರಿಜಿಸ್ಟರ್ ಮಾಡಿಸಿಯೇ ಇಲ್ಲ. ಕೋರ್ಟ್​ಗೆ ಸುಳ್ಳು ದಾಖಲೆ ನೀಡಿದ್ದಾರೆ’ ಎಂದಿದ್ದಾರೆ ಕಿರಣ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್