AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toofan Lyrical Video: ಬಂದೇ ಬಿಡ್ತು ತೂಫಾನ್​; ‘ಕೆಜಿಎಫ್​ ಚಾಪ್ಟರ್​ 2’ ಚಿತ್ರದ ಮೊದಲ ಲಿರಿಕಲ್​ ವಿಡಿಯೋ ರಿಲೀಸ್​

KGF Chapter 2 Song: ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ‘ತೂಫಾನ್​..’ ಹಾಡು ಬಿಡುಗಡೆ ಆಗಿದೆ. ಲಿರಿಕಲ್​ ಸಾಂಗ್​ ನೋಡಿ ಯಶ್​ ಫ್ಯಾನ್ಸ್​ ಖುಷಿಯಾಗಿದ್ದಾರೆ.

Toofan Lyrical Video: ಬಂದೇ ಬಿಡ್ತು ತೂಫಾನ್​; ‘ಕೆಜಿಎಫ್​ ಚಾಪ್ಟರ್​ 2’ ಚಿತ್ರದ ಮೊದಲ ಲಿರಿಕಲ್​ ವಿಡಿಯೋ ರಿಲೀಸ್​
ಯಶ್​
TV9 Web
| Edited By: |

Updated on:Mar 21, 2022 | 11:34 AM

Share

ಬಹುನಿರೀಕ್ಷಿತ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದಿಂದ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗುತ್ತಿದೆ. ಈವರೆಗೂ ಕೇವಲ ಒಂದಷ್ಟು ಪೋಸ್ಟರ್​ ಮತ್ತು ಒಂದು ಟೀಸರ್​ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಈ ಸಿನಿಮಾ ಈಗ ಮೊದಲ ಸಾಂಗ್​ ಬಿಡುಗಡೆ ಮಾಡಿದೆ. ‘ತೂಫಾನ್​..’  ಲಿರಿಕಲ್​ ವಿಡಿಯೋ (Toofan Lyrical Video) ರಿಲೀಸ್​ ಆಗಿದೆ. ಈ ಹಾಡನ್ನು ಬಿಡುಗಡೆ ಮಾಡುವ ಬಗ್ಗೆ ಎರಡು ದಿನ ಮುನ್ನವೇ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ತಿಳಿಸಲಾಗಿತ್ತು. ಆಗಲೇ ಜನರ ನಿರೀಕ್ಷೆ ಮುಗಿಲುಮುಟ್ಟಿತ್ತು. ಆ ನಿರೀಕ್ಷೆಗೆ ತಕ್ಕಂತೆಯೇ ‘ಕೆಜಿಎಫ್​ 2’ ಚಿತ್ರದಿಂದ ‘ತೂಫಾನ್​..’ ಹಾಡು ಮೂಡಿಬಂದಿದೆ. ಸಾಂಗ್​ ನೋಡಿದ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ಹಾಡಿಗೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಯಶ್​ (Yash) ಅವರನ್ನು ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ. ಪ್ರಶಾಂತ್​ ನೀಲ್​ ನಿರ್ದೇಶನದ ಈ ಸಿನಿಮಾ ಬಗ್ಗೆ ಹೈಪ್​ ಸೃಷ್ಟಿ ಆಗಲು ಹಲವು ಕಾರಣಗಳಿವೆ. ‘ತೂಫಾನ್​..’ ಲಿರಿಕಲ್​ ಸಾಂಗ್​ ಬಿಡುಗಡೆ ಆದ ಬಳಿಕ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಗ್ಗೆ ಇನ್ನಷ್ಟು ಟಾಕ್​ ಹೆಚ್ಚಾಗಿದೆ.

ಇಂದು (ಮಾ.21) ಬೆಳಗ್ಗೆ 11.07ಕ್ಕೆ ‘ತೂಫಾನ್​’ ಲಿರಿಕಲ್​ ವಿಡಿಯೋ ಬಿಡುಗಡೆ ಆಯಿತು. ರಿಲೀಸ್​ ಆದ ಕೆಲವೇ ನಿಮಿಷಗಳಲ್ಲಿ ಕನ್ನಡ ವರ್ಷನ್​ ಹಾಡು ಲಕ್ಷಾಂತರ ವೀವ್ಸ್​ ಪಡೆದುಕೊಂಡಿದೆ. ಆ ಮೂಲಕ ಚಿತ್ರದ ಬಗ್ಗೆ ಜನರಿಗೆ ಇರುವ ಕ್ರೇಜ್​ ಎಂಥದ್ದು ಎಂಬುದಕ್ಕೆ ಸಾಕ್ಷಿ ಸಿಕ್ಕಿದೆ. ಕನ್ನಡ ಮಾತ್ರವಲ್ಲದೇ, ಹಿಂದಿ, ಮಲಯಾಳಂ, ತಮಿಳು ಮತ್ತು ತೆಲುಗಿನಲ್ಲಿಯೂ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ಬಿಡುಗಡೆ ಆಗಲಿದೆ. ಆ ಎಲ್ಲ ಭಾಷೆಗಳಲ್ಲೂ ‘ತೂಫಾನ್​’ ಹಾಡಿನ ಲಿರಿಕಲ್​ ವಿಡಿಯೋ ರಿಲೀಸ್​ ಮಾಡಲಾಗಿದೆ. ಎಲ್ಲ ಭಾಷೆಯಲ್ಲೂ ಜನರಿಂದ ಸಖತ್​ ರಿಯಾಕ್ಷನ್​ ಸಿಗುತ್ತಿದೆ.

‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾ ಗೆಲ್ಲಲು ಹಾಡುಗಳು ಕೂಡ ಪ್ರಮುಖ ಕಾರಣ ಆಗಿದ್ದವು. ಸಖತ್​ ಮಾಸ್​ ಆದಂತಹ ಹಾಡುಗಳನ್ನು ರವಿ ಬಸ್ರೂರು ನೀಡಿದ್ದರು. ಈಗ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಸಾಂಗ್ಸ್​ ಮೇಲೆ ಅದೇ ಮಟ್ಟದ ನಿರೀಕ್ಷೆ ಇದೆ. ಸದ್ಯ ಮೊದಲ ಹಾಡು ಬಿಡುಗಡೆ ಆಗಿದ್ದು, ಅದಕ್ಕೆ ರವಿ ಬಸ್ರೂರು ಅವರೇ ಸಾಹಿತ್ಯ ಬರೆದಿದ್ದಾರೆ. ಇನ್ನುಳಿದ ಹಾಡುಗಳಿಗಾಗಿ ಫ್ಯಾನ್ಸ್​ ಕಾಯುವಂತಾಗಿದೆ. ಸದ್ಯ ರಿಲೀಸ್​ ಆಗಿರಯವ ‘ತೂಫಾನ್​’ ಹಾಡಿನಲ್ಲಿ ಕೆಲವು ಡೈಲಾಗ್​ಗಳು ಕೂಡ ಹೈಲೈಟ್​ ಆಗಿವೆ. ಅವುಗಳನ್ನು ಕೇಳಿ ಸಿನಿಪ್ರಿಯರು ಎಂಜಾಯ್​ ಮಾಡುತ್ತಿದ್ದಾರೆ.

ಏಪ್ರಿಲ್​ 14ರಂದು ‘ಕೆಜಿಎಫ್​: ಚಾಪ್ಟರ್ 2’ ಸಿನಿಮಾ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಈಗಾಗಲೇ ವಿದೇಶದ ಥಿಯೇಟರ್​ಗಳಲ್ಲಿ ನಿಲ್ಲಿಸಲು ಸ್ಟ್ಯಾಂಡಿಗಳನ್ನು ಸಿದ್ಧಪಡಿಸಲಾಗಿದೆ. ಸಂಜಯ್​ ದತ್​, ರವೀನಾ ಟಂಡನ್​ ನಟಿಸಿರುವುದರಿಂದ ಬಾಲಿವುಡ್​ ವಲಯದಲ್ಲೂ ‘ಕೆಜಿಎಫ್​ 2’ ಚಿತ್ರಕ್ಕೆ ದೊಡ್ಡ ಮಟ್ಟದ ಹೈಪ್​ ಸೃಷ್ಟಿ ಆಗಿದೆ. ಯಶ್​ಗೆ ನಾಯಕಿಯಾಗಿ ಶ್ರೀನಿಧಿ ಶೆಟ್ಟಿ ನಟಿಸಿದ್ದಾರೆ. ಪ್ರಕಾಶ್​ ರಾಜ್​, ಮಾಳವಿಕಾ ಅವಿನಾಶ್​, ರಾವ್​ ರಮೇಶ್​ ಮುಂತಾದ ಅನುಭವಿ ಕಲಾವಿದರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ:

ಅಕ್ಷಯ್​​ ಕುಮಾರ್ ನಟನೆಯ ‘ಬಚ್ಚನ್​ ಪಾಂಡೆ’ಯಲ್ಲಿ ‘ಕೆಜಿಎಫ್​’ ಚಿತ್ರದ ಬಗ್ಗೆ ಉಲ್ಲೇಖ; ಇಲ್ಲಿದೆ ವಿಡಿಯೋ

ವಿಶ್ವಾದ್ಯಂತ ‘ಕೆಜಿಎಫ್​ 2’ ಪ್ರಚಾರ ಮಾಡಲು ‘ಹೊಂಬಾಳೆ ಫಿಲ್ಮ್ಸ್​’ ಸಜ್ಜು; ಹೇಗಿದೆ ನೋಡಿ ತಯಾರಿ

Published On - 11:08 am, Mon, 21 March 22

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ