AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ದಿನವೂ ಅಬ್ಬರಿಸಿದ ‘ಟಾಕ್ಸಿಕ್’; ಭರ್ಜರಿ ಗಳಿಕೆ ಮಾಡಿದ ಯಶ್ ಸಿನಿಮಾ

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರ ಮುಂದುವರಿಸಿದೆ. ಎರಡನೇ ದಿನ ಕೆಲಸದ ದಿನವಾದರೂ ಭರ್ಜರಿ ಗಳಿಕೆ ಮಾಡಿದ್ದು, ವಿಶ್ವದಾದ್ಯಂತ ಬರೋಬ್ಬರಿ 190.75 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಹಿಂದಿ ಆವೃತ್ತಿಯಲ್ಲೇ ಸಿಂಹಪಾಲು ಗಳಿಕೆಯಾಗಿದ್ದು, ವಾರಾಂತ್ಯದಲ್ಲಿ ಚಿತ್ರದ ಬಾಕ್ಸ್ ಆಫೀಸ್ ಗಳಿಕೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಎರಡನೇ ದಿನವೂ ಅಬ್ಬರಿಸಿದ ‘ಟಾಕ್ಸಿಕ್’; ಭರ್ಜರಿ ಗಳಿಕೆ ಮಾಡಿದ ಯಶ್ ಸಿನಿಮಾ
ಟಾಕ್ಸಿಕ್ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Aug 28, 2026 | 7:03 AM

Share

ಮುಖ್ಯಾಂಶಗಳು

  • ಎರಡನೇ ದಿನವೂ ‘ಟಾಕ್ಸಿಕ್’ ಧೂಳೆಬ್ಬಿಸುವ ಕಲೆಕ್ಷನ್
  • 200 ಕೋಟಿ ಗಡಿಯತ್ತ ಯಶ್ ಸಿನಿಮಾ
  • ಹಿಂದಿ ಬೆಲ್ಟ್‌ನಲ್ಲಿ ಯಶ್ ಅಬ್ಬರ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ (Toxic Movie) ಬಾಕ್ಸ್ ಆಫೀಸ್‌ನಲ್ಲಿ ತನ್ನ ಅಬ್ಬರದ ಗಳಿಕೆಯನ್ನು ಮುಂದುವರಿಸಿದೆ. ಕೇವಲ ಎರಡೇ ದಿನಗಳಲ್ಲಿ ವಿಶ್ವದಾದ್ಯಂತ ಬರೋಬ್ಬರಿ 190.75 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ ಹೊಸ ದಾಖಲೆಯತ್ತ ಮುನ್ನುಗ್ಗುತ್ತಿದೆ. ಮಿಶ್ರ ಪ್ರತಿಕ್ರಿಯೆ ಸಿಕ್ಕರೂ ಸಿನಿಮಾ ಪ್ರೇಮಿಗಳು ಥಿಯೇಟರ್​ಗೆ ತೆರಳಿ ಚಿತ್ರ ವೀಕ್ಷಣೆ ಮಾಡುತ್ತಿದ್ದಾರೆ.

ಮೊದಲ ದಿನ ಸಿನಿಮಾ ಸುಮಾರು 150 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆಗಸ್ಟ್ 27 ಗುರುವಾರ ಸಾಮಾನ್ಯ ಕೆಲಸದ ದಿನವಾಗಿದ್ದರಿಂದ ಸಹಜವಾಗಿಯೇ ಗಳಿಕೆಯಲ್ಲಿ ಶೇಕಡಾ 64.0 ರಷ್ಟು ಕುಸಿತ ಕಂಡುಬಂದಿದೆ. ಆದಾಗ್ಯೂ ಸಿನಿಮಾ ತನ್ನ ಎರಡನೇ ದಿನದ ಕೊನೆಯಲ್ಲಿ ಭಾರತದಾದ್ಯಂತ 22,629 ಶೋಗಳಿಂದ ಬರೋಬ್ಬರಿ 36.40 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡುವ ಮೂಲಕ ತನ್ನ ಗಟ್ಟಿ ಹಿಡಿತವನ್ನು ಸಾಬೀತುಪಡಿಸಿದೆ.

ಎರಡನೇ ದಿನದ ಭಾರತದ ಒಟ್ಟು ಗಳಿಕೆಯಲ್ಲಿ ಹಿಂದಿ ಆವೃತ್ತಿಯ ಕೊಡುಗೆಯೇ ಅತ್ಯಂತ ದೊಡ್ಡದಾಗಿದ್ದು, ಬರೋಬ್ಬರಿ 23.00 ಕೋಟಿ ರೂಪಾಯಿ ಗಳಿಸಿದೆ. ಇನ್ನುಳಿದಂತೆ ಕನ್ನಡದಲ್ಲಿ 8.50 ಕೋಟಿ ರೂಪಾಯಿ, ತೆಲುಗಿನಲ್ಲಿ 3.00 ಕೋಟಿ ರೂಪಾಯಿ, ತಮಿಳಿನಲ್ಲಿ 1.50 ಕೋಟಿ ರೂಪಾಯಿ ಹಾಗೂ ಮಲಯಾಳಂನಲ್ಲಿ 40 ಲಕ್ಷ ರೂಪಾಯಿ ಕಲೆಕ್ಷನ್ ಆಗಿದೆ. ವಿದೇಶದಲ್ಲೂ ಜಾದೂ ಮುಂದುವರಿದಿದ್ದು, ಎರಡನೇ ದಿನ 10.00 ಕೋಟಿ ರೂಪಾಯಿ ಬಾಚಿಕೊಳ್ಳುವ ಮೂಲಕ ಒಟ್ಟು ಓವರ್‌ಸೀಸ್ ಗ್ರಾಸ್ ಕಲೆಕ್ಷನ್ 26.25 ಕೋಟಿ ರೂಪಾಯಿಗೆ ತಲುಪಿದೆ. ಇದರೊಂದಿಗೆ ಭಾರತದಲ್ಲಿ ಚಿತ್ರದ ಒಟ್ಟು ನೆಟ್ ಗಳಿಕೆ 137.50 ಕೋಟಿ (ಗ್ರಾಸ್ 164.50 ಕೋಟಿ ರೂಪಾಯಿ) ತಲುಪಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾ ವಿಮರ್ಶೆ ಮಾಡಿದ ಯೂಟ್ಯೂಬರ್‌ಗೆ ಲೀಗಲ್ ನೋಟಿಸ್ ನೀಡಿದ ಚಿತ್ರತಂಡ

ಗುರುವಾರ ವರ್ಕಿಂಗ್ ಡೇ ಆದ ಕಾರಣ ಗಳಿಕೆಯಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ವಾರಾಂತ್ಯದಲ್ಲಿ ಟಿಕೆಟ್ ಬುಕಿಂಗ್ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಹೀಗಾಗಿ ಬರುವ ದಿನಗಳಲ್ಲಿ ‘ಟಾಕ್ಸಿಕ್’ ಬಾಕ್ಸ್ ಆಫೀಸ್ ಗಳಿಕೆ ಮತ್ತಷ್ಟು ಹೆಚ್ಚಲಿದ್ದು, ಹಲವು ದೊಡ್ಡ ದಾಖಲೆಗಳನ್ನು ಉಡಾಯಿಸುವುದು ಖಚಿತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!