AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ದಿನಕ್ಕೆ ಎಷ್ಟಾಯಿತು ‘ಟಾಕ್ಸಿಕ್’ ಸಿನಿಮಾದ ಕಲೆಕ್ಷನ್? ಇಲ್ಲಿದೆ ಲೆಕ್ಕ

‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ‘ಟಾಕ್ಸಿಕ್’ ಸಿನಿಮಾ ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗಿದೆ. ಆಗಸ್ಟ್ 26ರಂದು ತೆರೆಕಂಡ ಈ ಸಿನಿಮಾಗೆ ನಾಲ್ಕು ದಿನಗಳಲ್ಲಿ ಎಷ್ಟು ಕಲೆಕ್ಷನ್ ಆಗಿದೆ ಎಂಬ ಮಾಹಿತಿ ಸಿಕ್ಕಿದೆ. ಯಶ್, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ, ನಯನತಾರಾ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

4 ದಿನಕ್ಕೆ ಎಷ್ಟಾಯಿತು ‘ಟಾಕ್ಸಿಕ್’ ಸಿನಿಮಾದ ಕಲೆಕ್ಷನ್? ಇಲ್ಲಿದೆ ಲೆಕ್ಕ
Toxic
ಮದನ್​ ಕುಮಾರ್​
|

Updated on: Aug 30, 2026 | 9:12 AM

Share

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆ ಆಗಿ 4 ದಿನ ಕಳೆದಿದೆ. ಮಿಶ್ರ ಪ್ರತಿಕ್ರಿಯೆಗಳ ನಡುವೆಯೂ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. 4ನೇ ದಿನವಾದ ಶನಿವಾರ (ಆಗಸ್ಟ್ 29) ಭಾರತದಲ್ಲಿ ಈ ಸಿನಿಮಾದ ಕಲೆಕ್ಷನ್‌ನಲ್ಲಿ (Toxic Box Office Collection) ಶುಕ್ರವಾರಕ್ಕೆ ಹೋಲಿಸಿದರೆ ಸಣ್ಣ ಕುಸಿತ ಕಂಡುಬಂದಿದೆ. ವಿಶ್ವದಾದ್ಯಂತ ಸಿನಿಮಾ ಒಟ್ಟು 254.75 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ ಎಂದು ‘ಸಾಕ್ನಿಲ್ಕ್’ ವರದಿ ಪ್ರಕಟಿಸಿದೆ.

ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ಅವರ ನಟನೆಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಒಟ್ಟಾರೆಯಾಗಿ ಸಿನಿಮಾ ಮೂಡಿಬಂದಿರುವ ರೀತಿಯ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಕಾರಣದಿಂದ ಮೊದಲ ದಿನಕ್ಕೆ ಹೋಲಿಸಿದರೆ ನಂತರದ ದಿನಗಳಲ್ಲಿ ಕಲೆಕ್ಷನ್ ಇಳಿಕೆ ಆಗಿದೆ.

ಸಾಕ್ನಿಲ್ಕ್ ವರದಿಯ ಪ್ರಕಾರ, ‘ಟಾಕ್ಸಿಕ್’ ಸಿನಿಮಾ ಶನಿವಾರ ಭಾರತದಲ್ಲಿ ಅಂದಾಜು ರೂ 24.50 ಕೋಟಿ ರೂಪಾಯಿ ನೆಟ್ ಗಳಿಕೆ ಮಾಡಿದೆ. ದೇಶಾದ್ಯಂತ ಒಟ್ಟು 17,612 ಶೋಗಳಿಂದ ಈ ಮೊತ್ತ ಸಂಗ್ರಹವಾಗಿದೆ. ಶುಕ್ರವಾರ (27.20 ಕೋಟಿ) ಕಲೆಕ್ಷನ್‌ಗೆ ಹೋಲಿಸಿದರೆ ಶನಿವಾರದ ಕಲೆಕ್ಷನ್‌ನಲ್ಲಿ ಶೇಕಡ 9.9ರಷ್ಟು ಇಳಿಕೆ ಆಗಿದೆ. ಇದರೊಂದಿಗೆ, ಚಿತ್ರ ಬಿಡುಗಡೆಯಾದ ಮೊದಲ 4 ದಿನಗಳಲ್ಲಿ ಭಾರತದಲ್ಲಿ ಒಟ್ಟು 190.45 ಕೋಟಿ ರೂಪಾಯಿ ನೆಟ್ ಮತ್ತು 227.50 ಕೋಟಿ ರೂಪಾಯಿ ಗ್ರಾಸ್ ಗಳಿಕೆ ಕಂಡಿದೆ.

‘ಟಾಕ್ಸಿಕ್’ ಸಿನಿಮಾ ಮೊದಲ ದಿನ (ಆಗಸ್ಟ್ 26) ಭಾರತದಲ್ಲಿ ಭರ್ಜರಿ 101.10 ಕೋಟಿ ರೂಪಾಯಿ ಗಳಿಸುವ ಮೂಲಕ ಶುಭಾರಂಭ ಮಾಡಿತ್ತು. ಎರಡನೇ ದಿನವಾದ ಗುರುವಾರ 37.65 ಕೋಟಿ ಹಾಗೂ ಮೂರನೇ ದಿನವಾದ ಶುಕ್ರವಾರ ರೂ 27.20 ಕೋಟಿ ಕಲೆಕ್ಷನ್ ಮಾಡಿತ್ತು. ನಾಲ್ಕನೇ ದಿನವಾದ ಶನಿವಾರ ಅಂದಾಜು ರೂ 24.50 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಆಗಿದೆ. ಈ ಮೂಲಕ ಚಿತ್ರವು ಬಿಡುಗಡೆಯಾದ ಮೊದಲ 4 ದಿನಗಳಲ್ಲಿ ಭಾರತದಲ್ಲಿ ಒಟ್ಟಾರೆಯಾಗಿ ರೂ 190.45 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಬೋಲ್ಡ್ ದೃಶ್ಯಕ್ಕೆ ರುಕ್ಮಿಣಿ ವಸಂತ್ ಟ್ರೋಲ್: ನಟಿಯ ಬೆಂಬಲಕ್ಕೆ ನಿಂತ ಫ್ಯಾನ್ಸ್

ಐದೂ ಭಾಷೆಗಳ ಪೈಕಿ ಕನ್ನಡ ಆವೃತ್ತಿಯಲ್ಲೇ ಅತಿ ಹೆಚ್ಚು ಅಂದರೆ ಶೇಕಡ 47.23ರಷ್ಟು ಆಕ್ಯುಪೆನ್ಸಿ ದಾಖಲಾಗಿದೆ. ಅದರಲ್ಲೂ ಕನ್ನಡದ ನೈಟ್ ಶೋಗಳು ಹಲವು ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಂಡಿವೆ. ಹಿಂದಿ ಆವೃತ್ತಿಯು ಶೇಕಡ 26.19ರಷ್ಟು ಆಕ್ಯುಪೆನ್ಸಿ ಹೊಂದಿದೆ. ಮಲಯಾಳಂ, ತಮಿಳು, ತೆಲುಗಿನಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ