AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾನುವಾರ ‘ಟಾಕ್ಸಿಕ್’ ಸಿನಿಮಾ ಗಳಿಕೆ ಮಾಡಿದ್ದೆಷ್ಟು? ಇಲ್ಲಿದೆ ಸಂಪೂರ್ಣ ವಿವರ

ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ 5ನೇ ದಿನ ದೇಶಾದ್ಯಂತ ₹23 ಕೋಟಿ ಗಳಿಸಿದ್ದು, ಒಟ್ಟು ಜಾಗತಿಕ ಕಲೆಕ್ಷನ್ ₹285.20 ಕೋಟಿಗೆ ತಲುಪಿದೆ. ಆದರೆ, ಆರಂಭಿಕ ದಿನಕ್ಕೆ ಹೋಲಿಸಿದರೆ ದಿನದಿಂದ ದಿನಕ್ಕೆ ಕಲೆಕ್ಷನ್ ಮತ್ತು ಥಿಯೇಟರ್ ಆಕ್ಯುಪೆನ್ಸಿ ಗಣನೀಯವಾಗಿ ಇಳಿಕೆಯಾಗುತ್ತಿರುವುದು ಚಿತ್ರತಂಡ ಹಾಗೂ ಅಭಿಮಾನಿಗಳಲ್ಲಿ ತೀವ್ರ ಆತಂಕವನ್ನು ಮೂಡಿಸಿದೆ.

ಭಾನುವಾರ ‘ಟಾಕ್ಸಿಕ್’ ಸಿನಿಮಾ ಗಳಿಕೆ ಮಾಡಿದ್ದೆಷ್ಟು? ಇಲ್ಲಿದೆ ಸಂಪೂರ್ಣ ವಿವರ
ಯಶ್ ಟಾಕ್ಸಿಕ್
ರಾಜೇಶ್ ದುಗ್ಗುಮನೆ
|

Updated on: Aug 31, 2026 | 7:05 AM

Share

ಮುಖ್ಯಾಂಶಗಳು

  • 5ನೇ ದಿನಕ್ಕೆ 'ಟಾಕ್ಸಿಕ್' ಗಳಿಸಿದ್ದೆಷ್ಟು?
  • ಧೂಳೆಬ್ಬಿಸಿದ ಹಿಂದಿ-ಕನ್ನಡ ವರ್ಷನ್
  • ಶುರುವಾಯ್ತಾ ಕಲೆಕ್ಷನ್ ಕಂಠಕ?

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಚಿತ್ರಮಂದಿರಗಳಲ್ಲಿ ಪ್ರದರ್ಶನ ಮುಂದುವರಿಸಿದ್ದು, 5ನೇ ದಿನದ ಗಳಿಕೆಯ ವಿವರಗಳು ಹೊರಬಿದ್ದಿವೆ. ಐದನೇ ದಿನವಾದ ಭಾನುವಾರ 16,241 ಶೋಗಳಿಂದ ಸಿನಿಮಾ ದೇಶಾದ್ಯಂತ 23.00 ಕೋಟಿ ನೆಟ್ ಕಲೆಕ್ಷನ್ ಮಾಡಿದೆ. ದಿನಗಳು ಕಳೆದಂತೆ ಕಲೆಕ್ಷನ್​​ನಲ್ಲಿ ಇಳಿಕೆ ಕಂಡುಬಂದಿದೆ. ಅನೇಕರು ಕೊಟ್ಟ ನೆಗೆಟಿವ್ ವಿಮರ್ಶೆಯೇ ಇದಕ್ಕೆ ಕಾರಣ ಎಂದು ಬಾಕ್ಸ್ ಆಫೀಸ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ‘ಟಾಕ್ಸಿಕ್’ ಸಿನಿಮಾದ ಗ್ರಾಸ್ ಕಲೆಕ್ಷನ್ 255.95 ಕೋಟಿಗೆ ತಲುಪಿದ್ದು, ನೆಟ್ ಕಲೆಕ್ಷನ್ 214.10 ಕೋಟಿ ರೂಪಾಯಿಯಷ್ಟಾಗಿದೆ. ವಿದೇಶದಲ್ಲೂ ಸಿನಿಮಾ ಸಾಧಾರಣ ಗಳಿಕೆ ಕಾಣುತ್ತಿದ್ದು, 5ನೇ ದಿನ 2.00 ಕೋಟಿ ರೂಪಾಯಿ ಬಾಚಿಕೊಂಡಿದ್ದು, ಈ ಮೂಲಕ ಒಟ್ಟು ವಿದೇಶಿ ಗಳಿಕೆ 29.25 ಕೋಟಿ ರೂಪಾಯಿಗೆ ಏರಿಸಿಕೊಂಡಿದೆ. ಹೀಗಾಗಿ ‘ಟಾಕ್ಸಿಕ್’ ಜಾಗತಿಕವಾಗಿ ಬರೋಬ್ಬರಿ 285.20 ಕೋಟಿ ಕಲೆಕ್ಷನ್ ಮಾಡಿದೆ.

ದಿನ ಕಳೆದಂತೆ ಕಲೆಕ್ಷನ್ ಹಾಗೂ ಥಿಯೇಟರ್‌ಗಳಲ್ಲಿ ಆಕ್ಯುಪೆನ್ಸಿ ಕ್ರಮೇಣ ಕುಗ್ಗುತ್ತಿರೋದು ಚಿತ್ರತಂಡ ಹಾಗೂ ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಮೊದಲ ದಿನ ಬುಧವಾರ 101.10 ಕೋಟಿ ರೂಪಾಯಿ ಗಳಿಸಿ ಬೃಹತ್ ಆರಂಭ ಪಡೆದಿದ್ದ ಚಿತ್ರ, 2ನೇ ದಿನ 37.65 ಕೋಟಿ ರೂಪಾಯಿ(26.6% ಆಕ್ಯುಪೆನ್ಸಿ), 3ನೇ ದಿನ 27.20 ಕೋಟಿ ರೂಪಾಯಿ (25.5%), 4ನೇ ದಿನ 25.15 ಕೋಟಿ ರೂಪಾಯಿ (24.3%) ಹಾಗೂ 5ನೇ ದಿನ 23.00 ಕೋಟಿ ರೂಪಾಯಿ (25.3%) ಗಳಿಸಿದೆ. ಆರಂಭಿಕ ದಿನಕ್ಕೆ ಹೋಲಿಸಿದರೆ ಗಳಿಕೆಯಲ್ಲಿ ಭಾರೀ ಇಳಿಕೆ ಕಂಡುಬಂದಿದೆ.

ಇದನ್ನೂ ಓದಿ: ‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಮಾಡಿದವರ ಮೇಲೆ ಯಶ್ ತಾಯಿ ಗರಂ

ಐದನೇ ದಿನದ ಭಾಷಾವಾರು ಗಳಿಕೆಯನ್ನು ಗಮನಿಸಿದರೆ, ಹಿಂದಿ ಆವೃತ್ತಿಯು 11,734 ಶೋಗಳಿಂದ ₹14.50 ಕೋಟಿ ರೂಪಾಯಿ ಗಳಿಸಿ ಅಗ್ರಸ್ಥಾನದಲ್ಲಿದೆ. ಮೂಲ ಭಾಷೆಯಾದ ಕನ್ನಡದಲ್ಲಿ 1,297 ಶೋಗಳಿದ್ದರೂ ಶೇ. 50.0 ರಷ್ಟು ಉತ್ತಮ ಆಕ್ಯುಪೆನ್ಸಿಯೊಂದಿಗೆ 6.40 ಕೋಟಿ ರೂಪಾಯಿ ಹರಿದುಬಂದಿದೆ. ಉಳಿದಂತೆ ತೆಲುಗಿನಲ್ಲಿ 1.40 ಕೋಟಿ ರೂಪಾಯಿ, ತಮಿಳಿನಲ್ಲಿ 60 ಲಕ್ಷ ರೂಪಾಯಿ ಮತ್ತು ಮಲಯಾಳಂ ಆವೃತ್ತಿಯಲ್ಲಿ 10 ಲಕ್ಷ ರೂಪಾಯಿ ಗಳಿಕೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’