AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tabaahi Song: ಭಟ್ಟರ ಸಾಹಿತ್ಯದಲ್ಲಿ ಬಂತು ಟಾಕ್ಸಿಕ್ ‘ತಬಾಹಿ’ ಸಾಂಗ್; ಹೇಗಿದೆ ನೀವು ಕೇಳಿ

Toxic Movie Song: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ 'ತಬಾಹಿ' ಹಾಡು ಬಿಡುಗಡೆಯಾಗಿದೆ. ಹೋಳಿ ಹಬ್ಬದ ಸಂಭ್ರಮ ಹೆಚ್ಚಿಸಿದೆ. ಈ ಚಿತ್ರದಲ್ಲಿ ಒಟ್ಟು ಆರು ಹಾಡುಗಳಿದ್ದು, ಐವರು ಸಂಗೀತ ಸಂಯೋಜಕರು ಕೆಲಸ ಮಾಡಿದ್ದಾರೆ. ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರದಲ್ಲಿ ನಯನತಾರಾ, ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ.

Tabaahi Song: ಭಟ್ಟರ ಸಾಹಿತ್ಯದಲ್ಲಿ ಬಂತು ಟಾಕ್ಸಿಕ್ ‘ತಬಾಹಿ’ ಸಾಂಗ್; ಹೇಗಿದೆ ನೀವು ಕೇಳಿ
ಯಶ್-ಕಿಯಾರಾ
ರಾಜೇಶ್ ದುಗ್ಗುಮನೆ
|

Updated on:Mar 02, 2026 | 1:14 PM

Share

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಗೆ (Toxic Movie) ಭರ್ಜರಿ ಪ್ರಚಾರ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳಿಂದ ಸಿನಿಮಾ ಬಗ್ಗೆ ಒಂದಲ್ಲ ಒಂದು ಅಪ್​​​ಡೇಟ್​ ನೀಡುತ್ತಲೇ ಬರಲಾಗುತ್ತಿದೆ. ಈಗ ಚಿತ್ರದ ‘ತಬಾಹಿ’ ಹಾಡು ರಿಲೀಸ್ ಆಗಿದೆ. ಹೋಳಿ ಹಬ್ಬಕ್ಕೂ ಒಂದು ದಿನ ಮೊದಲು ಈ ಸಾಂಗ್ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ. ಈ ಹಾಡು ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಿದೆ.

‘ಟಾಕ್ಸಿಕ್’ ಚಿತ್ರದ ಕಡೆಯಿಂದ ಪೋಸ್ಟರ್, ಟೀಸರ್ ರಿಲೀಸ್ ಆಗಿತ್ತು. ಈಗ ಚಿತ್ರದ ಮೊದಲ ಹಾಡು ‘ತಬಾಹಿ’ ತೆರೆಗೆ ಬಂದಿದೆ. ಈ ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದಾರೆ. ವಿಶಾಲ್ ಮಿಶ್ರಾ ಸಂಗೀತ ಸಂಯೋಜನೆ ಮಾಡಿ ಹಾಡನ್ನು ಹಾಡಿದ್ದಾರೆ. ಸದ್ಯ ಲಿರಿಕಲ್ ಸಾಂಗ್ ಮಾತ್ರ ಬಿಡುಗಡೆ ಕಂಡಿದೆ.

‘ಟಾಕ್ಸಿಕ್’ ಚಿತ್ರದಲ್ಲಿ ಮ್ಯೂಸಿಕ್​ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ಚಿತ್ರದಲ್ಲಿ ಒಟ್ಟೂ ಆರು ಹಾಡುಗಳು ಇವೆ ಎನ್ನಲಾಗಿದೆ. ಈ ಸಿನಿಮಾಗಾಗಿ ಐದು ಸಂಗೀತ ಸಂಯೋಜಕರು ಕೆಲಸ ಮಾಡಿದ್ದಾರೆ. ಬಾಲಿವುಡ್​ನ ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ಮಿಶ್ರಾ ಅವರು 4 ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ತನಿಷ್ಕ್ ಬಾಗ್ಜಿ ಅವರು ಅರ್ಸ್ಲಾನ್ ನಿಜಾಮಿ ಮತ್ತು ಫಹೀಮ್ ಅಬ್ದುಲ್ಲಾ ಜೊತೆ ಸೇರಿ ಒಂದು ಹಾಡಿಗೆ ಸಂಗೀತ ನೀಡಿದ್ದಾರೆ. ರವಿ ಬಸ್ರೂರು ಅವರು ಒಂದು ಹಾಡಿಗೆ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

ಇದನ್ನೂ ಓದಿ: ಅಬ್ಬಬ್ಬಾ.. ‘ಟಾಕ್ಸಿಕ್’ ಚಿತ್ರಕ್ಕಾಗಿ ಕಿಯಾರಾ ಪಡೆದ ಸಂಭಾವನೆ ಇಷ್ಟೊಂದಾ?

‘ಟಾಕ್ಸಿಕ್’ ಚಿತ್ರವನ್ನು ಗೀತು ಮೋಹನ್ ದಾಸ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಹುತೇಕ ಕೆಲಸ ಪೂರ್ಣಗೊಂಡಿದ್ದು, ರಿಲೀಸ್ ಮಾತ್ರ ಬಾಕಿ ಉಳಿದುಕೊಂಡಿದೆ. ಈ ಸಿನಿಮಾಗೆ ಶೀಘ್ರವೇ ಸೆನ್ಸಾರ್ ಪ್ರಕ್ರಿಯೆ ಕೂಡ ಪೂರ್ಣಗೊಳ್ಳಲಿದೆ. ಮೊದಲ ದಿನ ಈ ಚಿತ್ರ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡುತ್ತದೆ ಎನ್ನುವ ಕುತೂಹಲ ಮೂಡಿದೆ. ನಯನತಾರಾ, ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:03 pm, Mon, 2 March 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ