Toxic Movie: ಟಾಕ್ಸಿಕ್ ಗ್ಲಿಂಪ್ಸ್ ರಿಲೀಸ್; ಮಸ್ತ್ ಆಗಿ ಕ್ಲಬ್ಗೆ ಎಂಟ್ರಿ ಕೊಟ್ಟ ಯಶ್
Toxic Birthday Peek: ರಾಕಿಂಗ್ ಸ್ಟಾರ್ ಯಶ್ ಅವರಿಗೆ ಇಂದು (ಜನವರಿ 8) ಬರ್ತ್ಡೇ ಆಚರಿಸಿಕೊಂಡಿದ್ದಾರೆ. ಈ ದಿನದಂದು ‘ಟಾಕ್ಸಿಕ್’ ಚಿತ್ರದ ಕಡೆಯಿಂದ ಅಪ್ಡೇಟ್ ಸಿಗಲಿದೆ ಎಂದು ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ಅಪ್ಡೇಟ್ ಕೊಟ್ಟಿತ್ತು. ಆ ಸಮಯ ಈಗ ಸಮೀಪಿಸಿದೆ. ಈ ಚಿತ್ರದ ಗ್ಲಿಂಪ್ಸ್ನ ರಿಲೀಸ್ ಮಾಡಲಾಗಿದೆ.
ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದಂದು ವಿಶೇಷ ಉಡುಗೊರೆ ಕೊಡೋದಾಗಿ ‘ಟಾಕ್ಸಿಕ್’ ತಂಡ ಈ ಮೊದಲೇ ಘೋಷಣೆ ಮಾಡಿತ್ತು. ಪೋಸ್ಟರ್ ರಿಲೀಸ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಅಂತೆಯೇ ಇಂದು (ಜನವರಿ 8) ಬೆಳಿಗ್ಗೆ 10 ಗಂಟೆ 25 ನಿಮಿಷಕ್ಕೆ ‘ಟಾಕ್ಸಿಕ್’ ಗ್ಲಿಂಪ್ಸ್ ರಿಲೀಸ್ ಆಗಿದೆ. ಯಶ್ ಅವರ ಚಿತ್ರದ ಮೇಲಿರುವ ನಿರೀಕ್ಷೆ ಈಗ ದ್ವಿಗುಣವಾಗಿದೆ. ಯಶ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.
ಯಶ್ ಅವರು ರೆಟ್ರೋ ಕಾರಲ್ಲಿ ಸ್ಟೈಲಿಶ್ ಆಗಿ ಕ್ಲಬ್ ಒಂದಕ್ಕೆ ಎಂಟ್ರಿ ಕೊಡುತ್ತಾರೆ. ಅವರು ಒಳಗೆ ಬರುತ್ತಿರುವಾಗ ಅಲ್ಲಿ ಎಲ್ಲರೂ ಮೋಜಿನಲ್ಲಿ ತೇಲುತ್ತಾ ಇರುತ್ತಾರೆ. ಆಗ ಯಶ್ ಅವರು ಹೆಂಡದ ಬಾಟಲಿ ತೆಗೆದುಕೊಂಡು ಅಲ್ಲಿದ್ದ ಮಹಿಳೆಯ ಮೇಲೆ ಸುರಿಯುತ್ತಾರೆ. ಮೇಕಿಂಗ್ ನೋಡಿದರೆ ಇದು ರೆಟ್ರೋ ಕಥೆಯ ರೀತಿ ಕಾಣುತ್ತದೆ.
ಸದ್ಯ ರಿಲೀಸ್ ಆಗಿರೋದು ಒಂದು ಗ್ಲಿಂಪ್ಸ್ ಮಾತ್ರ. ಯಶ್ ಜನ್ಮದಿನದ ಪ್ರಯುಕ್ತ ಇದನ್ನು ರಿಲೀಸ್ ಮಾಡಲಾಗಿದೆ ಅಷ್ಟೇ. ಇದು ಸಿನಿಮಾದಲ್ಲಿ ಬರುವ ಒಂದು ಕ್ಲಿಪ್ ಎನ್ನಲಾಗಿದೆ. ‘ಟಾಕ್ಸಿಕ್’ ಸಿನಿಮಾದಲ್ಲಿ ಡ್ರಗ್ಸ್ ಬಗ್ಗೆ ಹೇಳಲಾಗುತ್ತಿದೆ ಎಂದು ಈ ಮೊದಲು ವರದಿ ಆಗಿದೆ.
ಇದನ್ನೂ ಓದಿ: ಯಶ್ ಜನ್ಮದಿನಕ್ಕೆ ಸೂಪರ್ ಸರ್ಪ್ರೈಸ್; ಪೋಸ್ಟರ್ ಮೂಲಕ ಅಪ್ಡೇಟ್ ಕೊಟ್ಟ ‘ಟಾಕ್ಸಿಕ್’ ಟೀಂ
Welcome to the untamed world of #ToxicTheMovie❤️🔥#ToxicBirthdayPeek : – https://t.co/hs6OhzQyfp #TOXIC @TheNameIsYash #GeetuMohandas @KVNProductions #MonsterMindCreations @Toxic_themovie pic.twitter.com/KfcHjwyjFB
— KVN Productions (@KvnProductions) January 8, 2025
‘ಟಾಕ್ಸಿಕ್’ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಮೂಲಕ ವೆಂಕಟ್ ನಾರಾಯಣ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ ಬಿಗ್ ಬಜೆಟ್ನಲ್ಲಿ ಮೂಡಿ ಬರುತ್ತಿದೆ. ಈ ಚಿತ್ರದಲ್ಲಿ ಹಿಂದಿಯ ಕಿಯಾರಾ ಅಡ್ವಾಣಿ, ತಮಿಳಿನ ನಯನತಾರಾ ನಟಿಸುತ್ತಿದ್ದಾರೆ. ಈ ಸಿನಿಮಾ ವರ್ಷಾಂತ್ಯಕ್ಕೆ ರಿಲೀಸ್ ಆಗಲಿದೆ. ಇದನ್ನು, ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡಲು ಆಲೋಚನೆ ನಡೆದಿದೆ. ಈ ಚಿತ್ರದಲ್ಲಿ ಹಾಲಿವುಡ್ ತಂತ್ರಜ್ಞರು ಕೂಡ ಕೆಲಸ ಮಾಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 10:31 am, Wed, 8 January 25