AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಯಶ್​, ರಾಧಿಕಾ ಪಂಡಿತ್ ಡಿನ್ನರ್: ಫೋಟೋ, ವಿಡಿಯೋಗೆ ಮುಗಿಬಿದ್ದ ಪಾಪರಾಜಿಗಳು

ರಾಧಿಕಾ ಪಂಡಿತ್​ ಹಾಗೂ ‘ರಾಕಿಂಗ್​ ಸ್ಟಾರ್​’ ಯಶ್​ ಅವರು ಮುಂಬೈನಲ್ಲಿ ಜಾಲಿಯಾಗಿ ಕಾಲ ಕಳೆದಿದ್ದಾರೆ. ಡಿನ್ನರ್​ಗೆ ಜೊತೆಯಾಗಿ ತೆರಳಿದ ಅವರನ್ನು ಕಂಡು ಪಾಪರಾಜಿಗಳು ಮುಗಿಬಿದ್ದಿದ್ದಾರೆ. ತಮಗಾಗಿ ಕಾದಿದ್ದ ಪಾಪರಾಜಿಗಳ ಕಡೆಗೆ ಯಶ್​ ಕೈ ಬೀಸಿದ್ದಾರೆ. ಕೆಲವು ಕ್ಷಣಗಳ ಕಾಲ ನಿಂತು ಪೋಸ್​ ನೀಡಿ ನಂತರ ಮುಂದೆ ಸಾಗಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ.

ಮುಂಬೈನಲ್ಲಿ ಯಶ್​, ರಾಧಿಕಾ ಪಂಡಿತ್ ಡಿನ್ನರ್: ಫೋಟೋ, ವಿಡಿಯೋಗೆ ಮುಗಿಬಿದ್ದ ಪಾಪರಾಜಿಗಳು
ಯಶ್​, ರಾಧಿಕಾ ಪಂಡಿತ್
ಮದನ್​ ಕುಮಾರ್​
|

Updated on: Sep 26, 2024 | 8:46 PM

Share

ನಟ ಯಶ್​ ಅವರು ‘ಟಾಕ್ಸಿಕ್​’ ಸಿನಿಮಾದ ಕೆಲಸಗಳತ್ತ ಗಮನ ಹರಿಸಿದ್ದಾರೆ. ಶೂಟಿಂಗ್​ನಲ್ಲಿ ಅವರು ಬ್ಯುಸಿ ಆಗಿದ್ದಾರೆ. ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ಕುಟುಂಬಕ್ಕೆ ಖಂಡಿತಾ ಸಮಯ ನೀಡುತ್ತಾರೆ. ಇತ್ತೀಚೆಗೆ ಅವರು ಮುಂಬೈನಲ್ಲಿ ಕಾಣಿಸಿಕೊಂಡರು. ಪತ್ನಿ ರಾಧಿಕಾ ಪಂಡಿತ್ ಜೊತೆ ಮುಂಬೈನ ಒಂದು ರೆಸ್ಟೋರೆಂಟ್​ನಲ್ಲಿ ಅವರು ರಾತ್ರಿ ಊಟ ಸವಿದರು. ರೆಸ್ಟೋರೆಂಟ್​ನಿಂದ ಹೊರ ಬರುವಾಗ ಅವರ ಫೋಟೋ ಮತ್ತು ವಿಡಿಯೋ ತೆಗೆಯುವ ಸಲುವಾಗಿ ಪಾಪರಾಜಿಗಳು ಮುಗಿಬಿದ್ದರು. ಆ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

‘ಕೆಜಿಎಫ್​: ಚಾಪ್ಟರ್​ 1’ ಮತ್ತು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗಳ ಯಶಸ್ಸಿನ ಬಳಿಕ ಯಶ್​ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸ್ಟಾರ್​ ಆದರು. ಮುಂಬೈ ಮಂದಿಗೂ ಅವರು ಫೇವರಿಟ್​ ಆಗಿದ್ದಾರೆ. ಯಶ್​ ಎಲ್ಲಿಯೇ ಕಂಡರೂ ಕೂಡ ಅಭಿಮಾನಿಗಳು ರಾಕಿ ಭಾಯ್ ಎಂದು ಕೂಗುತ್ತಾರೆ. ಮುಂಬೈನಲ್ಲಿ ಪಾಪರಾಜಿಗಳು ಕೂಡ ರಾಕಿ ಭಾಯ್​, ಅಣ್ಣ ಎಂದು ಕರೆದಿದ್ದಾರೆ.

View this post on Instagram

A post shared by yogen shah (@yogenshah_s)

ರಾಧಿಕಾ ಪಂಡಿತ್ ಅವರು ಸದ್ಯಕ್ಕೆ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಪತಿಯ ವೃತ್ತಿ ಜೀವನಕ್ಕೆ ಅವರು ಬೆಂಬಲವಾಗಿ ನಿಂತಿದ್ದಾರೆ. ‘ಟಾಕ್ಸಿಕ್​’ ಸಿನಿಮಾದ ಕೆಲಸಗಳ ಬಿಡುವಿನಲ್ಲಿ ರಾಧಿಕಾ ಮತ್ತು ಯಶ್​ ಅವರು ಮುಂಬೈನಲ್ಲಿ ಸುತ್ತಾಟ ನಡೆಸಿದ್ದಾರೆ. ಕೈ-ಕೈ ಹಿಡಿದು ಬಂದ ಈ ದಂಪತಿಯನ್ನು ಕಂಡು ಅಭಿಮಾನಿಗಳಿಗೆ ಖುಷಿಯಾಗಿದೆ. ವೈರಲ್​ ಆಗಿರುವ ವಿಡಿಯೋಗೆ ಜನರು ಹಲವು ರೀತಿಯಲ್ಲಿ ಕಮೆಂಟ್​ ಮಾಡಿ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಶೂಟಿಂಗ್​ ಸೆಟ್​ನಲ್ಲಿ ಶಿವಣ್ಣ-ಯಶ್​ ಭೇಟಿ; ಗೆಟಪ್​​ ನೋಡಿ ಫ್ಯಾನ್ಸ್​ ಫಿದಾ

‘ಟಾಕ್ಸಿಕ್’ ಸಿನಿಮಾದ ಮೇಲೆ ಜನರಿಗೆ ಇರುವ ನಿರೀಕ್ಷೆ ತುಂಬ ದೊಡ್ಡದು. ಇದರಲ್ಲಿ ಬಾಲಿವುಡ್​ ಕಲಾವಿದರು ಕೂಡ ನಟಿಸುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಯಶ್​ ಒಪ್ಪಿಕೊಂಡ ಸಿನಿಮಾ ಎಂಬ ಕಾರಣದಿಂದ ‘ಟಾಕ್ಸಿಕ್​’ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ಈ ಸಿನಿಮಾಗೆ ಗೀತು ಮೋಹನ್​ದಾಸ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್​’ ಸಂಸ್ಥೆಯು ಬಂಡವಾಳ ಹೂಡುತ್ತಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕೆಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ರಾಯಭಾರಿಯಾಗಿಯೂ ಯಶ್​ ಅವರು ಬ್ಯುಸಿ ಆಗಿದ್ದಾರೆ. ಆ ಮೂಲಕವೂ ಅವರು ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್