‘ಟಾಕ್ಸಿಕ್’ ಭರ್ಜರಿ ಪ್ರದರ್ಶನ, ಮೊದಲ ದಿನ ಎಷ್ಟಾಗಬಹುದು ಗಳಿಕೆ?

Toxic Movie 1st Day Box Office Collection: ಪ್ಯಾನ್ ಇಂಡಿಯಾ ಮಾತ್ರವಲ್ಲ, ಪ್ಯಾನ್ ವರ್ಲ್ಡ್ ಸಿನಿಮಾ ಇದಾಗಿದ್ದು, ಭಾರತದಲ್ಲಿ ಮಾತ್ರವೇ ಅಲ್ಲದೆ ವಿಶ್ವದ ಹಲವು ದೇಶಗಳಲ್ಲಿ ಏಕಕಾಲದಲ್ಲಿ ರಿಲೀಸ್ ಆಗಿದೆ. ಮುಂಗಡ ಬುಕಿಂಗ್ ಇಂದಲೇ ‘ಟಾಕ್ಸಿಕ್’ ಸಿನಿಮಾವು ‘ಧುರಂಧರ್’, ‘ಪಠಾಣ್’ ಅಂಥಹಾ ಸಿನಿಮಾಗಳ ದಾಖಲೆಗಳನ್ನು ಮುರಿದು ಮೂಲೆಗುಂಪು ಮಾಡಿದೆ. ಇದೀಗ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟಾಗಬಹುದು ಎಂಬ ಬಗ್ಗೆ ಚರ್ಚೆಗಳು ಶುರುವಾಗಿವೆ.

‘ಟಾಕ್ಸಿಕ್’ ಭರ್ಜರಿ ಪ್ರದರ್ಶನ, ಮೊದಲ ದಿನ ಎಷ್ಟಾಗಬಹುದು ಗಳಿಕೆ?
ಟಾಕ್ಸಿಕ್ ಸಿನಿಮಾ
Edited By:

Updated on: Aug 26, 2026 | 6:13 PM

ಮುಖ್ಯಾಂಶಗಳು

  • ಟಾಕ್ಸಿಕ್ ಸಿನಿಮಾ ಇಂದು ರಿಲೀಸ್ ಆಗಿದೆ.
  • ಮೊದಲ ದಿನ ಸಿನಿಮಾ ಭರ್ಜರಿ ಗಳಿಕೆ ಮಾಡಿದೆ.
  • ಮೊದಲ ದಿನ ಈ ಸಿನಿಮಾ ಎಷ್ಟು ಗಳಿಸಬಹುದು?

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಇಂದು (ಆಗಸ್ಟ್ 26) ರಿಲೀಸ್ ಆಗಿದೆ. ಪ್ಯಾನ್ ಇಂಡಿಯಾ ಮಾತ್ರವಲ್ಲ, ಪ್ಯಾನ್ ವರ್ಲ್ಡ್ ಸಿನಿಮಾ ಇದಾಗಿದ್ದು, ಭಾರತದಲ್ಲಿ ಮಾತ್ರವೇ ಅಲ್ಲದೆ ವಿಶ್ವದ ಹಲವು ದೇಶಗಳಲ್ಲಿ ಏಕಕಾಲದಲ್ಲಿ ರಿಲೀಸ್ ಆಗಿದೆ. ಮುಂಗಡ ಬುಕಿಂಗ್ ಇಂದಲೇ ‘ಟಾಕ್ಸಿಕ್’ ಸಿನಿಮಾವು ‘ಧುರಂಧರ್’, ‘ಪಠಾಣ್’ ಅಂಥಹಾ ಸಿನಿಮಾಗಳ ದಾಖಲೆಗಳನ್ನು ಮುರಿದು ಮೂಲೆಗುಂಪು ಮಾಡಿದೆ. ಇದೀಗ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟಾಗಬಹುದು ಎಂಬ ಬಗ್ಗೆ ಚರ್ಚೆಗಳು ಶುರುವಾಗಿವೆ.

‘ಟಾಕ್ಸಿಕ್’ ಸಿನಿಮಾ ಮೊದಲ ದಿನ ಎಲ್ಲೆಡೆ ಹೌಸ್​ಫುಲ್ ಆಗುತ್ತಿದ್ದು, ಮೊದಲ ದಿನ ಭರ್ಜರಿ ಬಾಕ್ಸ್ ಆಫೀಸ್ ಗಳಿಕೆ ಮಾಡುವುದು ಖಾಯಂ. ಕೆಲ ಬಾಕ್ಸ್ ಆಫೀಸ್ ಲೆಕ್ಕಾಚಾರಗಳ ಪ್ರಕಾರ, ‘ಟಾಕ್ಸಿಕ್’ ಸಿನಿಮಾ ಮೊದಲ ದಿನ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಸುಮಾರು 120 ಕೋಟಿ ರೂಪಾಯಿ ಗಳಿಕೆ ಮಾಡುವ ಅಂದಾಜು ಮಾಡಲಾಗಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಬಲು ಜೋರಾಗಿ ನಡೆದಿರುವುದೇ ಈ ಲೆಕ್ಕಾಚಾರಕ್ಕೆ ಬುನಾದಿ ಎನ್ನಲಾಗುತ್ತಿದೆ.

‘ಟಾಕ್ಸಿಕ್’ ಸಿನಿಮಾ ಕರ್ನಾಟಕ ಸೇರಿದಂತೆ ತೆಲುಗು ರಾಜ್ಯಗಳು, ಮುಂಬೈ, ದೆಹಲಿ ಮಾತ್ರವೇ ಅಲ್ಲದೆ ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳಗಳಂಥಹಾ ರಾಜ್ಯಗಳಲ್ಲಿಯೂ ಹೆಚ್ಚು ಸ್ಕ್ರೀನ್​​ಗಳಲ್ಲಿ ಬಿಡುಗಡೆ ಆಗಿದೆ. ‘ಕೆಜಿಎಫ್’ ಸಿನಿಮಾ ಸರಣಿಯಿಂದಾಗಿ ಉತ್ತರ ಭಾರತದಲ್ಲಿ ಯಶ್ ಅವರಿಗೆ ದೊಡ್ಡ ಅಭಿಮಾನಿ ವರ್ಗ ಹುಟ್ಟಿಕೊಂಡಿದ್ದು, ಹಾಗಾಗಿ ಉತ್ತರ ಭಾರತದಲ್ಲಿ ದೊಡ್ಡ ಮೊತ್ತದ ಕಲೆಕ್ಷನ್ ಅನ್ನು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:‘ಟಾಕ್ಸಿಕ್’ 2 ಸಾವಿರ ಕೋಟಿ ಕಲೆಕ್ಷನ್ ಮಾಡದಿದ್ದರೆ ಮೀಸೆ ಬೋಳಿಸಿಕೊಳ್ಳುವೆ; ಯಶ್ ಅಭಿಮಾನಿ

‘ಟಾಕ್ಸಿಕ್’ ಸಿನಿಮಾಕ್ಕೆ ಸುಮಾರು 500 ಕೋಟಿ ಬಂಡವಾಳ ಹೂಡಲಾಗಿದೆ ಎನ್ನಲಾಗುತ್ತಿದೆ. ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್​ ಮತ್ತು ಯಶ್ ಅವರ ಮಾನ್​​ಸ್ಟರ್ ಮೈಂಡ್ಸ್ ಜಂಟಿಯಾಗಿ ನಿರ್ಮಾಣ ಮಾಡಿದೆ. ಸಿನಿಮಾವನ್ನು ಗೀತೂ ಮೋಹನ್​​ದಾಸ್ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ಯಶ್ ಜೊತೆಗೆ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:46 pm, Wed, 26 August 26

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us