AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಬಾಹಿ..’ ಬಳಿಕ ಬರ್ತಿದೆ ‘ಮನಮೋಹಕ’ ಸಾಂಗ್; ‘ಟಾಕ್ಸಿಕ್’ ತಂಡದ ಕಡೆಯಿಂದ ಸಿಕ್ತು ಅಪ್​​ಡೇಟ್

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ 'ಮನಮೋಹಕ' ಹಾಡಿನ ರಿಲೀಸ್ ಬಗ್ಗೆ ಅಪ್​​ಡೇಟ್ ಸಿಕ್ಕಿದೆ. 'ತಬಾಹಿ' ಸಾಂಗ್ ಭರ್ಜರಿ ಯಶಸ್ಸು ಕಂಡ ಬೆನ್ನಲ್ಲೇ ಈ ರೊಮ್ಯಾಂಟಿಕ್ ಟ್ರ್ಯಾಕ್‌ ಬರುತ್ತಿದೆ. ಯಶ್ ಮತ್ತು ತಾರಾ ಸುತಾರಿಯಾ ಕೆಮಿಸ್ಟ್ರಿ ಹೈಲೈಟ್ ಆಗೋ ಸಾಧ್ಯತೆ ಇದೆ. ಗೀತು ಮೋಹನ್​ದಾಸ್ ನಿರ್ದೇಶನದ ಈ ಸಿನಿಮಾದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸದ್ಯ ಈ ಹೊಸ ಹಾಡು ಸೋಶಿಯಲ್ ಮೀಡಿಯಾದಲ್ಲಿ ಹೊಸ ಟ್ರೆಂಡ್ ಸೃಷ್ಟಿಸುತ್ತಿದೆ.

‘ತಬಾಹಿ..’ ಬಳಿಕ ಬರ್ತಿದೆ ‘ಮನಮೋಹಕ’ ಸಾಂಗ್; ‘ಟಾಕ್ಸಿಕ್’ ತಂಡದ ಕಡೆಯಿಂದ ಸಿಕ್ತು ಅಪ್​​ಡೇಟ್
ಟಾಕ್ಸಿಕ್
ರಾಜೇಶ್ ದುಗ್ಗುಮನೆ
|

Updated on: Jul 21, 2026 | 7:02 AM

Share

ಮುಖ್ಯಾಂಶಗಳು

  • 'ಮನಮೋಹಕ' ಸಾಂಗ್ ಇಂದು ರಿಲೀಸ್
  • ಯಶ್ ಹಾಗೂ ತಾರಾ ಸುತಾರಿಯಾ ರೊಮ್ಯಾಂಟಿಕ್ ಕೆಮಿಸ್ಟ್ರಿ
  • 'ತಬಾಹಿ' ಸಕ್ಸಸ್ ಬೆನ್ನಲ್ಲೇ ಹೊಸ ಸೆನ್ಸೇಷನ್

‘ಟಾಕ್ಸಿಕ್’ ಚಿತ್ರದ  (Toxic Movie)‘ತಬಾಹಿ..’ ಹಾಡು ಸಾಕಷ್ಟು ಟ್ರೆಂಡ್ ಸೃಷ್ಟಿ ಮಾಡಿದೆ. ಕೋಟ್ಯಂತರ ಬಾರಿ ವೀಕ್ಷಣೆ ಕಂಡಿರುವ ಈ ವಿಡಿಯೋ ಸಾಂಗ್ ಸಾಕಷ್ಟು ಬೋಲ್ಡ್ ಆಗಿತ್ತು. ಈಗ ‘ಟಾಕ್ಸಿಕ್’ ಟೀಂ ಕಡೆಯಿಂದ ಎರಡನೇ ಸಾಂಗ್ ರಿಲೀಸ್ ಬಗ್ಗೆ ಮಾಹಿತಿ ಸಿಕ್ಕಿದೆ. ಇಂದು ‘ಮನಮೋಹಕ..’ ಸಾಂಗ್ ರಿಲೀಸ್ ಆಗಲಿದೆ. ಈ ಹಾಡು ಯಾವ ರೀತಿ ಇರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಕಾಡುತ್ತಿದೆ.

‘ಟಾಕ್ಸಿಕ್’ ಚಿತ್ರದಲ್ಲಿ ಹಲವು ಹೀರೋಯಿನ್​​ಗಳಿದ್ದಾರೆ. ಯಶ್ ಅವರು ಯಾರ ಜೊತೆ ಫೈಟ್ ಮಾಡುತ್ತಾರೆ, ಯಾರ ಜೊತೆ ರೊಮ್ಯಾನ್ಸ್ ಮಾಡುತ್ತಾರೆ ಎಂಬ ಸ್ಪಷ್ಟನೆ ಸದ್ಯಕ್ಕಂತೂ ಸಿಗುತ್ತಿಲ್ಲ. ಇತ್ತೀಚೆಗೆ ರಿಲೀಸ್ ಆದ ‘ತಬಾಹಿ’ ಹಾಡಿನಲ್ಲಿ ಯಶ್ ಅವರು ಕಿಯಾರಾ ಅಡ್ವಾಣಿ ಜೊತೆ ಸಖತ್ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದರು. ಈಗ ಅವರು ತಾರಾ ಸುತಾರಿಯಾ ಜೊತೆ ಪ್ರಣಯಗೀತೆ ಹಾಡುವ ಸಮಯ.

ಇಂದು (ಜುಲೈ 21) ಬೆಳಿಗ್ಗೆ 11.33ಕ್ಕೆ ‘ಟಾಕ್ಸಿಕ್’ ಚಿತ್ರದ ಸಾಂಗ್ ರಿಲೀಸ್ ಆಗಲಿದೆ. ಈ ಹಾಡು ಸಾಕಷ್ಟು ರೊಮ್ಯಾಂಟಿಕ್ ಆಗಿ ಇರಲಿದೆ ಎನ್ನಲಾಗಿದೆ. ಹೀಗಾಗಿ, ವಿಡಿಯೋ ಸಾಂಗ್ ಮೂಲಕ ಎಲ್ಲರ ಗಮನ ಸೆಳೆಯಲು ತಂಡ ಪ್ಲ್ಯಾನ್ ಮಾಡಿಕೊಂಡಿದೆ ಎಂದು ಹೇಳಲಾಗುತ್ತಾ ಇದೆ.

‘ತಬಾಹಿ’ ಹಾಡಿಗೆ ಯೋಗಾರಜ್ ಭಟ್ ಅವರು ಸಾಹಿತ್ಯ ಬರೆದಿದ್ದರು. ಸಂದರ್ಶನದ ವೇಳೆ ಅವರು, ‘ಇನ್ನೂ ಎರಡು ಹಾಡಿಗೆ ನಾನು ಸಾಹಿತ್ಯ ಬರೆದಿದ್ದೇನೆ’ ಎಂದು ಅವರು ಹೇಳಿದ್ದರು. ಈಗ ರಿಲೀಸ್ ಆಗಲಿರೋ ‘ಮನಮೋಹಕ..’ ಹಾಡಿಗೆ ಯೋಗರಾಜ್ ಭಟ್ ಅವರ ಸಾಹಿತ್ಯ ಇರಬಹುದು ಎಂದು ಪ್ರೇಕ್ಷಕರು ಊಹಿಸುತ್ತಾ ಇದ್ದಾರೆ. ಸಾಂಗ್ ರಿಲೀಸ್ ಆದ ಬಳಿಕ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್? ಸ್ಥಳ ಎಲ್ಲಿ?

‘ಟಾಕ್ಸಿಕ್’ ಚಿತ್ರಕ್ಕೆ ಗೀತು ಮೋಹನ್​ದಾಸ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ನಯನತಾರಾ, ರುಕ್ಮಿಣಿ ವಸಂತ್ ಸೇರಿದಂತೆ ಅನೇಕರಿದ್ದಾರೆ. ಈ ಚಿತ್ರದಲ್ಲಿ ಯಶ್ ಅವರದ್ದು ದ್ವಿಪಾತ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್