‘ಟಾಕ್ಸಿಕ್’ ಸಿನಿಮಾನ ಯಾವ ರಾಜ್ಯಗಳಲ್ಲಿ ಯಾರು ಹಂಚಿಕೆ ಮಾಡ್ತಾರೆ? ಇಲ್ಲಿದೆ ಸಂಪೂರ್ಣ ಪಟ್ಟಿ

"ಟಾಕ್ಸಿಕ್" ಸಿನಿಮಾ ಬಿಡುಗಡೆಗೂ ಮುನ್ನವೇ ಭಾರಿ ಸದ್ದು ಮಾಡುತ್ತಿದೆ. ಇದರ ವಿತರಣಾ ಹಕ್ಕುಗಳು ದೇಶ-ವಿದೇಶಗಳಲ್ಲಿ ದೊಡ್ಡ ದೊಡ್ಡ ಸಂಸ್ಥೆಗಳಿಗೆ ಮಾರಾಟವಾಗಿವೆ. ಕೆವಿಎನ್ ಪ್ರೊಡಕ್ಷನ್ಸ್ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ, ದಿಲ್ ರಾಜು ತೆಲುಗಿನಲ್ಲಿ, ಎಎ ಫಿಲ್ಮ್ಸ್ ಉತ್ತರ ಭಾರತದಲ್ಲಿ ಹಂಚಿಕೆ ಮಾಡಲಿದೆ. ವಿದೇಶಿ ಹಕ್ಕುಗಳು ಫಾರ್ಸ್ ಫಿಲ್ಮ್ಸ್ ಪಾಲಾಗಿವೆ.

‘ಟಾಕ್ಸಿಕ್’ ಸಿನಿಮಾನ ಯಾವ ರಾಜ್ಯಗಳಲ್ಲಿ ಯಾರು ಹಂಚಿಕೆ ಮಾಡ್ತಾರೆ? ಇಲ್ಲಿದೆ ಸಂಪೂರ್ಣ ಪಟ್ಟಿ
ಯಶ್

Updated on: Feb 24, 2026 | 7:33 AM

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​​ಗೆ ಇನ್ನು ಬಾಕಿ ಇರೋದು ಕೆಲವೇ ವಾರಗಳು ಮಾತ್ರ. ಈ ಮೊದಲು ರಿಲೀಸ್ ಆದ ಟೀಸರ್​​ಗಳು ಗಮನ ಸೆಳೆದಿವೆ. ಶೀಘ್ರದಲ್ಲೇ ಚಿತ್ರದ ಟ್ರೇಲರ್ ಲಾಂಚ್ ಕೂಡ ಆಗಲಿದೆ. ಅದಕ್ಕೂ ಮೊದಲು ‘ಟಾಕ್ಸಿಕ್’ ಸಿನಿಮಾದ ಹಂಚಿಕೆ ಹಕ್ಕು ಮಾರಾಟ ಆಗಿದೆ. ದೇಶ ಹಾಗೂ ವಿದೇಶದ ಹಕ್ಕುಗಳನ್ನು ದೊಡ್ಡ ದೊಡ್ಡ ಸಂಸ್ಥೆಗಳು ಪಡೆದುಕೊಂಡಿವೆ. ಇದರಿಂದ ‘ಟಾಕ್ಸಿಕ್’ ಚಿತ್ರಕ್ಕೆ ದೊಡ್ಡ ಮೊತ್ತದ ಹಣ ಹರಿದು ಬಂದಿದೆ.

‘ಟಾಕ್ಸಿಕ್’ ಚಿತ್ರವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡಿದೆ. ಈ ಕಾರಣದಿಂದ ಕರ್ನಾಟಕದಲ್ಲಿ ಅವರೇ ಹಂಚಿಕೆ ಮಾಡಲಿದ್ದಾರೆ. ಕರ್ನಾಟಕದಲ್ಲಿ ಅವರ ಹಂಚಿಕೆ ನೆಟ್ವರ್ಕ್ ತುಂಬಾನೇ ದೊಡ್ಡದಾಗಿದೆ. ಇದು ಚಿತ್ರಕ್ಕೆ ಸಹಕಾರಿ ಆಗಲಿದೆ. ಕರ್ನಾಟಕದಲ್ಲಿರುವ ಬಹುತೇಕ ಚಿತ್ರಮಂದಿರಗಳಲ್ಲಿ ‘ಟಾಕ್ಸಿಕ್’ ಸಿನಿಮಾ ಪ್ರದರ್ಶನ ಕಾಣುವ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಎ ಪ್ರಮಾಣಪತ್ರ ಸಿಕ್ಕರೆ ಫ್ಯಾಮಿಲಿ ಆಡಿಯನ್ಸ್ ಚಿತ್ರಮಂದಿರಕ್ಕೆ ತೆರಳೋದು ಕಷ್ಟ ಆಗಬಹುದು.

ಇನ್ನು, ತಮಿಳುನಾಡಿನಲ್ಲೂ ಕೆವಿಎನ್ ತನ್ನ ನೆಟ್ವರ್ಕ್ ಮೂಲಕವೇ ಹಂಚಿಕೆ ಮಾಡಲಿದೆ. ಈಗಾಗಲೇ ಅವರು ತಮಿಳಿನಲ್ಲಿ ‘ಜನ ನಾಯಗನ್’ ಸಿನಿಮಾ ನಿರ್ಮಾಣ ಮಾಡಿ ಸಾಕಷ್ಟು ಸಂಪರ್ಕ ಸಾಧಿಸಿಕೊಂಡಿದೆ. ತೆಲುಗಿನಲ್ಲಿ ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಹಾಗೂ ಹಂಚಿಕೆದಾರ ದಿಲ್ ರಾಜು ಅವರು ಡಿಸ್ಟ್ರಿಬ್ಯೂಟ್ ಮಾಡುತ್ತಿದ್ದಾರೆ.
ಕೇರಳದಲ್ಲಿ ‘ಎ4 ಎಂಟರ್​ಟೇನ್​​ಮೆಂಟ್’ ಸಿನಿಮಾನ ಹಂಚಿಕೆ ಮಾಡುತ್ತಿದೆ. ‘ಅನಿಮಲ್’, ‘ಪುಷ್ಪ 2’ ರೀತಿಯ ಸಿನಿಮಾಗಳನ್ನು ಕೇರಳ ರಾಜ್ಯದಲ್ಲಿ ಹಂಚಿಕೆ ಮಾಡಿದ ಅನುಭವ ಇವರಿಗೆ ಇದೆ.

ಇದನ್ನೂ ಓದಿ: ‘ಧುರಂಧರ್ 2’ ಚಿತ್ರಕ್ಕಿಂತ ‘ಟಾಕ್ಸಿಕ್’ ಚಿತ್ರಕ್ಕೆ ಸಿಕ್ತು ಹೆಚ್ಚುವರಿ 1200 ಪರದೆಗಳು?

ಅನಿಲ್ ತಡಾನಿ ಒಡೆತನದ ‘ಎಎ ಫಿಲ್ಮ್ಸ್’ ಉತ್ತರ ಭಾರತದ ಹಂಚಿಕೆ ಹಕ್ಕು ಪಡೆದಿದೆ. ಈ ಮೊದಲು ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಚಿತ್ರವನ್ನು ಉತ್ತರ ಭಾರತದಲ್ಲಿ ಹಂಚಿಕೆ ಮಾಡಲು ಇವರು ಸಹಾಯ ಮಾಡಿದ್ದರು. ಈಗ ಯಶ್ ಅವರು ಅನಿಲ್ ಜೊತೆಗಿನ ಗೆಳೆತನವನ್ನು ಮುಂದುವರಿಸಿದ್ದಾರೆ. ಅವರಿಗೆ ‘ಟಾಕ್ಸಿಕ್’ ಚಿತ್ರದ ಉತ್ತರ ಭಾರತದ ಜವಾಬ್ದಾರಿ ನೀಡಲಾಗಿದೆ. ಇನ್ನು ವಿದೇಶದಲ್ಲಿ ಫಾರ್ಸ್​ ಫಿಲ್ಮ್ಸ್ ಹಂಚಿಕೆ ಮಾಡುತ್ತಿದೆ. ಅರಬ್ ರಾಷ್ಟ್ರಗಳಲ್ಲಿ ಸಿನಿಮಾ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us