AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ವಿಮರ್ಶೆ ಮಾಡಿದ ಮತ್ತೊಬ್ಬ ಯೂಟ್ಯೂಬರ್​​ಗೆ ಲೀಗಲ್ ನೋಟಿಸ್

‘ಟಾಕ್ಸಿಕ್’ ನೋಡಿದ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ಕೆಲವರಿಗೆ ಈ ಸಿನಿಮಾ ಇಷ್ಟ ಆಗಿಲ್ಲ. ವಿಮರ್ಶೆ ಮಾಡಿದ ಕೆಲವು ಯೂಟ್ಯೂಬರ್​ಗಳಿಗೆ ಲೀಗಲ್ ನೋಟಿಸ್ ಕಳಿಸಲಾಗುತ್ತಿದೆ. ಯೂಟ್ಯೂಬರ್‌ಗಳ ಈ ಆರೋಪಗಳಿಗೆ ಚಿತ್ರದ ನಿರ್ಮಾಣ ಸಂಸ್ಥೆಯಾಗಲಿ ಅಥವಾ ನಟ ಯಶ್ ಅವರಾಗಲಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

‘ಟಾಕ್ಸಿಕ್’ ವಿಮರ್ಶೆ ಮಾಡಿದ ಮತ್ತೊಬ್ಬ ಯೂಟ್ಯೂಬರ್​​ಗೆ ಲೀಗಲ್ ನೋಟಿಸ್
Yash
ಮದನ್​ ಕುಮಾರ್​
|

Updated on: Aug 28, 2026 | 4:50 PM

Share

ರಾಕಿಂಗ್ ಸ್ಟಾರ್ ಯಶ್ (Yash) ಹಾಗೂ ನಿರ್ದೇಶಕಿ ಗೀತು ಮೋಹನ್ ದಾಸ್ ಕಾಂಬಿನೇಷನ್‌ನ ‘ಟಾಕ್ಸಿಕ್’ (Toxic) ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಆದರೆ ಸಿನಿಮಾ ತೆರೆಕಂಡ ಬೆನ್ನಲ್ಲೇ, ಚಿತ್ರದ ವಿರುದ್ಧ ನಕಾರಾತ್ಮಕ ವಿಮರ್ಶೆ ಮತ್ತು ಆಕ್ಷೇಪಾರ್ಹ ವಿಷಯ ಪ್ರಸಾರ ಮಾಡದಂತೆ ಕೋರ್ಟ್ ನೀಡಿದ್ದ ಮಧ್ಯಂತರ ಆದೇಶವನ್ನು ಇಟ್ಟುಕೊಂಡು ಯೂಟ್ಯೂಬರ್‌ಗಳಿಗೆ ಲೀಗಲ್ ನೋಟಿಸ್ (Legal Notice) ನೀಡಲಾಗುತ್ತಿದೆ ಎಂಬ ಆರೋಪ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಕೇಳಿಬರುತ್ತಿದೆ.

ಮೊದಲಿಗೆ ಯೂಟ್ಯೂಬರ್ ಸೂರಜ್ ಕುಮಾರ್ ಎಂಬುವವರು ತಮಗೆ ಲೀಗಲ್ ನೋಟಿಸ್ ಬಂದಿದೆ ಎಂದು ಇಮೇಲ್ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದರು. ಇದೀಗ ಮತ್ತೊಬ್ಬ ಸಿನಿಮಾ ವಿಮರ್ಶಕ ಹಾಗೂ ಯೂಟ್ಯೂಬರ್ ಪ್ರಶಾಂತ್ ರಂಗಸ್ವಾಮಿ ಕೂಡ ‘ಟಾಕ್ಸಿಕ್’ ತಂಡದಿಂದ ತಮಗೆ ಕಾನೂನು ನೋಟಿಸ್ ಬಂದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸಿನಿಮಾವನ್ನು ರೋಸ್ಟ್ ಮಾಡಿ ವಿಮರ್ಶೆ ನೀಡಿದ್ದ ಪ್ರಶಾಂತ್ ರಂಗಸ್ವಾಮಿ ಅವರು ತಮ್ಮ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ನನಗೆ ಯಶ್ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ತಂಡದಿಂದ ಟಾಕ್ಸಿಕ್ ರಿವ್ಯೂಗಾಗಿ ಲೀಗಲ್ ನೋಟಿಸ್ ಬಂದಿದೆ’ ಎಂದು ಅವರು ಚಿತ್ರತಂಡದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಆದರೆ, ಸೂರಜ್ ಕುಮಾರ್ ಅವರಂತೆ ಪ್ರಶಾಂತ್ ರಂಗಸ್ವಾಮಿ ತಮಗೆ ಬಂದ ನೋಟಿಸ್‌ನ ಸ್ಕ್ರೀನ್‌ಶಾಟ್ ಬಹಿರಂಗಪಡಿಸಿಲ್ಲ.

ಇದಕ್ಕೂ ಮೊದಲು ಯೂಟ್ಯೂಬರ್ ಸೂರಜ್ ಕುಮಾರ್ ಅವರು ತಮಗೆ ಖಾಸಗಿ ಕಂಪನಿಯಿಂದ ಕಳಿಸಿಸಲಾಗಿದ್ದ ಇಮೇಲ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದರು. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಟಾಕ್ಸಿಕ್ ಚಿತ್ರತಂಡದ ಪರವಾಗಿ ಕೋರ್ಟ್ ಆದೇಶವನ್ನು ಜಾರಿಗೆ ತರಲು ತಮಗೆ ಅಧಿಕಾರ ನೀಡಲಾಗಿದೆ ಎಂದು ಆ ಕಂಪನಿಯು ನೋಟಿಸ್‌ನಲ್ಲಿ ತಿಳಿಸಿತ್ತು.

ಇದನ್ನೂ ಓದಿ: ‘ಟಾಕ್ಸಿಕ್’ ನೋಡಿ ಮೆಚ್ಚಿಕೊಂಡ ಉಪೇಂದ್ರ; ಆದರೆ ನೆಟ್ಟಿಗರ ಅಭಿಪ್ರಾಯವೇ ಬೇರೆ

ಸಿನಿಮಾ ಬಿಡುಗಡೆಯಾಗುವ ಮೊದಲೇ, ಅಂದರೆ ಆಗಸ್ಟ್ 22ರಂದು ಕೋರ್ಟ್‌ನಿಂದ ‘ಟಾಕ್ಸಿಕ್’ ತಂಡವು ಮಧ್ಯಂತರ ತಡೆಯಾಜ್ಞೆ ಪಡೆದುಕೊಂಡಿತ್ತು. ಚಿತ್ರದ ವಿರುದ್ಧ ಸುಳ್ಳು, ಮಾನಹಾನಿಕರ ಅಥವಾ ಅವಹೇಳನಕಾರಿ ವಿಷಯ ಪ್ರಸಾರ ಮಾಡುವುದನ್ನು ತಡೆಯಲು ಈ ಆದೇಶ ಹೊರಡಿಸಲಾಗಿತ್ತು. ಇದನ್ನೇ ಇಟ್ಟುಕೊಂಡು ಯೂಟ್ಯೂಬರ್​ಗಳಿಗೆ ನೋಟಿಸ್ ಕಳಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು