AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಮುಂಬೈಗೆ ಹೊರಟ ಯಶ್ ಆಂಡ್ ಟೀಂ, ಜತೆ ಸೇರಲಿರುವ ಬಾಲಿವುಡ್ ಬೆಡಗಿ

Toxic Team: ಯಶ್ ನಟನೆಯ ‘ಟಾಕ್ಸಿಕ್’ ಚಿತ್ರತಂಡ ಬೆಂಗಳೂರಿನಲ್ಲಿ ಬಹುತೇಕ ಶೂಟಿಂಗ್ ಮುಗಿಸಿದ್ದು ಇದೀಗ ಮುಂಬೈಗೆ ಸ್ಥಳಾಂತರಗೊಳ್ಳುತ್ತಿದೆ. ಮುಂಬೈನಲ್ಲಿ 45 ದಿನಗಳ ಶೂಟಿಂಗ್​ನಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿನಿಂದ ಮುಂಬೈಗೆ ಹೊರಟ ಯಶ್ ಆಂಡ್ ಟೀಂ, ಜತೆ ಸೇರಲಿರುವ ಬಾಲಿವುಡ್ ಬೆಡಗಿ
ಮಂಜುನಾಥ ಸಿ.
|

Updated on:Oct 08, 2024 | 11:46 AM

Share

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಯಶ್, ದೊಡ್ಡದೊಂದು ಪ್ರತಿಭಾವಂತ ತಂಡ ಕಟ್ಟಿಕೊಂಡು ಕೆಲ ವಾರಗಳ ಹಿಂದೆ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿ ಬೃಹತ್ ಸೆಟ್ ಹಾಕಿ ಸುಮಾರು 30 ದಿನಗಳ ಚಿತ್ರೀಕರಣವನ್ನು ಚಿತ್ರತಂಡ ಮುಗಿಸಿದೆ. ನಯನತಾರಾ, ಬಾಲಿವುಡ್​ ನಟ, ಹಾಲಿವುಡ್​ ನಟರುಗಳು ಬೆಂಗಳೂರಿಗೆ ಬಂದು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಇದೀಗ ಯಶ್ ಜೊತೆಯಾಗಿ ಇಡೀ ತಂಡ ಮುಂಬೈಗೆ ಶಿಫ್ಟ್ ಆಗುತ್ತಿದೆ.

ನಟ ಯಶ್ ಹಾಗೂ ‘ಟಾಕ್ಸಿಕ್’ ಚಿತ್ರತಂಡ ಬೆಂಗಳೂರಿನಲ್ಲಿ ಚಿತ್ರೀಕರಣ ಮುಗಿಸಿದ್ದು, ಇದೀಗ ಇಡೀ ಚಿತ್ರತಂಡ ಮುಂಬೈಗೆ ಶಿಫ್ಟ್ ಆಗುತ್ತಿದ್ದು, ಮುಂಬೈನಲ್ಲಿ 45 ದಿನಗಳ ಕಾಲ ಸತತವಾಗಿ ಚಿತ್ರೀಕರಣ ನಡೆಸಲಿದೆ. ಕೆಲವು ವಿಎಫ್​ಎಕ್ಸ್ ಭಾಗದ ಚಿತ್ರೀಕರಣ ಸೇರಿದಂತೆ ಆನ್ ಲೊಕೇಶನ್ ಚಿತ್ರೀಕರಣವೂ ಸಹ ಮುಂಬೈ ನಲ್ಲಿ ನಡೆಯಲಿದೆ. ಹೀಗಾಗಿ ಇಡೀ ಚಿತ್ರತಂಡ ಮುಂಬೈಗೆ ಶಿಫ್ಟ್ ಆಗುತ್ತಿದೆ.

ಇದನ್ನೂ ಓದಿ:ಬೆಂಗಳೂರಿನಿಂದ ಮುಂಬೈಗೆ ಹೊರಟ ಯಶ್ ಆಂಡ್ ಟೀಂ, ಜತೆ ಸೇರಲಿರುವ ಬಾಲಿವುಡ್ ಬೆಡಗಿ

ಮುಂಬೈನಲ್ಲಿ ಕೆಲವು ನಟ-ನಟಿಯರು ‘ಟಾಕ್ಸಿಕ್’ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಅದರಲ್ಲೂ ವಿಶೇಷವಾಗಿ ಸಿನಿಮಾದ ನಾಯಕಿ ಕಿಯಾರಾ ಅಡ್ವಾಣಿ, ‘ಟಾಕ್ಸಿಕ್’ ಚಿತ್ರತಂಡವನ್ನು ಸೇರಿಕೊಳ್ಳಲಿದ್ದು, ಕಿಯಾರಾ ಅವರು 45 ದಿನವೂ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ. ಕಿಯಾರಾ ನಟಿಸಲಿರುವ ಎಲ್ಲ ದೃಶ್ಯಗಳ ಚಿತ್ರೀಕರಣವನ್ನು ಈ 45 ದಿನಗಳಲ್ಲಿಯೇ ಪೂರ್ಣಗೊಳಿಸಲಿದೆ ಚಿತ್ರತಂಡ. ಯಶ್ ಸಹ ಲುಕ್ ಬದಲಾಯಿಸಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ.

‘ಟಾಕ್ಸಿಕ್’ ಸಿನಿಮಾವನ್ನು ಮಲಯಾಳಿ ನಿರ್ದೇಶಕಿ ಗೀತು ಮೋಹನ್ ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ಕೆವಿಎನ್ ಪ್ರೊಡಕ್ಷನ್ಸ್​ನವರು ಬಂಡವಾಳ ತೊಡಗಿಸಿದ್ದಾರೆ. ಸುಮಾರು 300 ಕೋಟಿಗೂ ಹೆಚ್ಚು ಬಜೆಟ್​ನಲ್ಲಿ ಸಿನಿಮಾ ಚಿತ್ರೀಕರಣಗೊಳ್ಳುತ್ತಿದೆ. ಸಿನಿಮಾದಲ್ಲಿ ಯಶ್, ಕಿಯಾರಾ, ನಯನತಾರಾ, ಅಕ್ಷಯ್ ಒಬೆರಾಯ್, ವಿದೇಶಿ ನಟರಾದ ಬೆನಡಿಕ್ಟ್, ಕೈಲಿ ಪೌಲ್ ಇನ್ನಿತರರು ನಟಿಸುತ್ತಿದ್ದಾರೆ. ಕೆಲವು ವಿದೇಶಿ ತಂತ್ರಜ್ಞರು ಸಹ ಈ ಸಿನಿಮಾಕ್ಕೆ ಜೊತೆಯಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:28 am, Tue, 8 October 24

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್