AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಕ್ಸಿಕ್​ ಟೀಸರ್​: ಫ್ಯಾನ್ಸ್​​ಗೆ ಡಬಲ್ ಧಮಾಕ; ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್

Toxic Teaser, Yash: ಮಾರ್ಚ್ 19ಕ್ಕೆ ತೆರೆಗೆ ಬರಲಿರೋ ‘ಟಾಕ್ಸಿಕ್’ ಸಿನಿಮಾಗಾಗಿ ಅಭಿಮಾನಿಗಳು ಕಾದಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿ ಹಲ್​ಚ​​ಲ್​ ಸೃಷ್ಟಿ ಮಾಡಿದೆ. ರಾಯನಾಗಿ ಯಶ್ ಲುಕ್ ಗಮನ ಸೆಳೆದಿದೆ. ಈ ಟೀಸರ್ ಮೂಲಕ ‘ಧುರಂಧರ್ 2’ ಚಿತ್ರಕ್ಕೆ ನಡುಕ ಹುಟ್ಟೋ ಎಲ್ಲಾ ಸೂಚನೆ ಸಿಕ್ಕಿದೆ. 

ಟಾಕ್ಸಿಕ್​ ಟೀಸರ್​: ಫ್ಯಾನ್ಸ್​​ಗೆ ಡಬಲ್ ಧಮಾಕ; ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್
ಟಾಕ್ಸಿಕ್ ಟೀಸರ್​​ನಲ್ಲಿ ಯಶ್
ರಾಜೇಶ್ ದುಗ್ಗುಮನೆ
| Edited By: |

Updated on:Feb 20, 2026 | 9:54 AM

Share

‘ಟಾಕ್ಸಿಕ್’ ಟ್ರೇಲರ್ ಬಗ್ಗೆ ಚರ್ಚೆ ನಡೆಯುವಾಗಲೇ ಸಿನಿಮಾದ ಟೀಸರ್ ಇಂದು (ಫೆ.20) ಬಿಡುಗಡೆ ಆಗಿದೆ. ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ಹೇಗಿರದಬಹುದು ಎಂಬ ಸ್ಪಷ್ಟ ಚಿತ್ರಣ ಸಿಕ್ಕಿದೆ. ಯಶ್ ಅವರ ಎದುರು ಬಂದವರು ಉಡೀಸ್ ಆಗುವ ಸೂಚನೆ ಟೀಸರ್ ನೋಡಿದವರಿಗೆ ಸಿಕ್ಕಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಟೀಸರ್​ಗಿಂತ ಈ ಟೀಸರ್ ತುಂಬಾನೇ ಭಿನ್ನವಾಗಿದೆ. ಯಶ್ ಅವರ ರಾ ಲುಕ್ ಗಮನ ಸೆಳೆದಿದೆ. ಟೀಸರ್​​ನಲ್ಲಿ ಇರುವ ಅಂಶಗಳೇನು ಎಂಬುದರ ವಿವರ ಇಲ್ಲಿದೆ.

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳೋದು ಪಕ್ಕಾ ಆಗಿದೆ. ಟೀಸರ್​​ನಲ್ಲಿ ಯಶ್ ಯಂಗ್ ಲುಕ್​​ನಲ್ಲಿಯೂ ಕಾಣಿಸಿಕೊಂಡಿದ್ದು, ರಾಯನ (ಯಶ್) ಮಗ ಇರಬಹುದೇ ಎಂಬ ಪ್ರಶ್ನೆ ಮೂಡಿದೆ. ಯಶ್ ಅವರು ಸಖತ್ ವೈಲೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಟೀಸರ್​​ನಲ್ಲಿ ಸಾಕಷ್ಟು ರಕ್ತ ಕೂಡ ಹರಿದಿದೆ.

‘ಈ ಸಲ ಯುದ್ಧನೇ ಬೇರೆ’ ಎಂಬ ಡೈಲಾಗ್ ಗಮನ ಸೆಳೆದಿದೆ. ‘ಟಾಕ್ಸಿಕ್’ ಟೀಸರ್ ನೋಡಿದವರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ‘ಹಠ ಬಿಡೋ ಮಾತೇ ಇಲ್ಲ’ ಎಂಬುದನ್ನು ಯಶ್ ಸ್ಪಷ್ಟವಾಗಿ ಹೇಳಿದ್ದಾರೆ. ಇದು ‘ಧುರಂದರ್ 2’ ಚಿತ್ರಕ್ಕೆ ಕೊಟ್ಟ ಕೌಂಟರ್ ಎಂದು ಮಾತನಾಡಿಕೊಳ್ಳಲಾಗುತ್ತಿದೆ. ಈ ಮೊದಲು ರಿಲೀಸ್ ಆದ ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಲ್​ಚಲ್​ ಎಬ್ಬಿಸಿತ್ತು. ಲೈಂಗಿಕ ಕ್ರಿಯೆ ನಡೆಸೋ ದೃಶ್ಯವನ್ನು ಟೀಸರ್​​ನಲ್ಲಿ ತೋರಿಸಿದ್ದು ಅನೇಕರ ಕೋಪಕ್ಕೆ ಕಾರಣ ಆಯಿತು. ಈ ಸಂಬಂಧ ದೂರು ಕೂಡ ದಾಖಲಾಯಿತು. ಆದರೆ, ಅವ್ಯಾವುದು ಟ್ರೇಲರ್​​ನ ತಡೆಯಲಿಲ್ಲ. ಚಿತ್ರದ ಟೀಸರ್ ಯೂಟ್ಯೂಬ್ ಒಂದರಲ್ಲೇ 100 ಮಿಲಿಯನ್ ವೀಕ್ಷಣೆ ಕಂಡಿತು. ಈಗ ಹೊಸ ಟೀಸರ್ ಮತ್ತಷ್ಟು ಗಮನ ಸೆಳೆದಿದೆ.

ಟಾಕ್ಸಿಕ್​ ಸಿನಿಮಾ ಟೀಸರ್​

ಇದನ್ನೂ ಓದಿ: ‘ಟಾಕ್ಸಿಕ್’ ಟ್ರೇಲರ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಸರ್​​ಪ್ರೈಸ್ ಕೊಟ್ಟ ಯಶ್

‘ಟಾಕ್ಸಿಕ್’ ಚಿತ್ರವನ್ನು ಗೀತು ಮೋಹನ್​ದಾಸ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಕೆವಿಎನ್ ನಿರ್ಮಾಣ ಸಂಸ್ಥೆ ಬಂಡವಾಳ ಹೂಡಿದೆ. ಯಶ್ ಕೂಡ ನಿರ್ಮಾಪಕ. ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಶಿ ಮೊದಲಾದವರು ನಟಿಸಿದ್ದಾರೆ. ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:42 am, Fri, 20 February 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್