ಬೆಂಗಳೂರಲ್ಲಿ ನಡೆಯಲಿದೆ ‘ಟಾಕ್ಸಿಕ್’ ಚಿತ್ರದ ಪ್ರಮುಖ ದೃಶ್ಯದ ಶೂಟ್; ಯಾರೆಲ್ಲ ಬರ್ತಾರೆ?
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬೆಂಗಳೂರು ಶೆಡ್ಯೂಲ್ ಶೀಘ್ರವೇ ಆರಂಭ ಆಗಲಿದೆ. ಕಿಯಾರಾ ಅಡ್ವಾಣಿ ಕೂಡ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ. ಮೊದಲು ಬೆಂಗಳೂರು, ಗೋವಾ, ಮುಂಬೈಗಳಲ್ಲಿ ಚಿತ್ರೀಕರಣ ನಡೆದಿದ್ದು, ಪ್ರಮುಖ ದೃಶ್ಯಗಳ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಚಿತ್ರದ ಬಿಡುಗಡೆ ದಿನಾಂಕ ಡಿಸೆಂಬರ್‌ಗೆ ಮುಂದೂಡಲ್ಪಟ್ಟಿದೆ.
![ಬೆಂಗಳೂರಲ್ಲಿ ನಡೆಯಲಿದೆ ‘ಟಾಕ್ಸಿಕ್’ ಚಿತ್ರದ ಪ್ರಮುಖ ದೃಶ್ಯದ ಶೂಟ್; ಯಾರೆಲ್ಲ ಬರ್ತಾರೆ?](https://images.tv9kannada.com/wp-content/uploads/2025/01/toxic.jpg?w=1280)
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಶೂಟ್ನ ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆದಿತ್ತು. ಆ ಬಳಿಕ ಇಡೀ ತಂಡ ಗೋವಾಗೆ ಶಿಫ್ಟ್ ಆಗಿತ್ತು. ಕಳೆದ ಒಂದು ತಿಂಗಳಿಂದ ಗೋವಾದಲ್ಲಿ ಬೀಡು ಬಿಟ್ಟಿದ್ದ ತಂಡ ಅಲ್ಲಿಯೇ ಚಿತ್ರೀಕರಣ ನಡೆಸುತ್ತಿತ್ತು. ಈ ಮಧ್ಯೆ ಮುಂಬೈನಲ್ಲೂ ಚಿತ್ರೀಕರಣ ಮಾಡಲಾಗಿತ್ತು. ಈಗ ‘ಟಾಕ್ಸಿಕ್’ ಚಿತ್ರದ ಪ್ರಮುಖ ದೃಶ್ಯವನ್ನು ಬೆಂಗಳೂರಿನಲ್ಲಿ ಶೂಟ್ ಮಾಡಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ.
‘ಟಾಕ್ಸಿಕ್’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಸ್ಯಾಂಡಲ್ವುಡ್ ಮಾತ್ರವಲ್ಲದೆ ಬಾಲಿವುಡ್ನವರೂ ಕೂಡ ಚಿತ್ರಕ್ಕಾಗಿ ಕಾದಿದ್ದಾರೆ. ಈಗ ‘ಟಾಕ್ಸಿಕ್’ ಚಿತ್ರದ ಹೊಸ ಶೆಡ್ಯೂಲ್ಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಶೂಟ್ ಬೆಂಗಳೂರಿನಲ್ಲೇ ನಡೆಯಲಿದೆ ಅನ್ನೋದು ವಿಶೇಷ. ಇದಕ್ಕಾಗಿ ಕಿಯಾರಾ ಅಡ್ವಾಣಿ ಕೂಡ ಬೆಂಗಳೂರಿಗೆ ಬರಲಿದ್ದಾರೆ.
‘ಟಾಕ್ಸಿಕ್’ ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಚಾರ. ಆದರೆ, ಈ ವಿಚಾರವನ್ನು ತಂಡದವರು ಎಲ್ಲಿಯೂ ರಿವೀಲ್ ಮಾಡಿಲ್ಲ. ಈಗ ಕೇಳಿ ಬರುತ್ತಿರುವ ಹೊಸ ಸುದ್ದಿ ಏನೆಂದರೆ ಈಗ ನಡೆಯುತ್ತಿರುವ ಹೊಸ ಹಂತದ ಶೂಟಿಂಗ್ ಪ್ರಮುಖ ದೃಶ್ಯಗಳನ್ನು ಒಳಗೊಂಡಿರಲಿದೆ. ಇದಕ್ಕಾಗಿ ಕಿಯಾರಾ ಕೂಡ ಬೆಂಗಳೂರಿಗೆ ಆಗಮಿಸಲಿದ್ದಾರೆ. ಯಶ್ ಕೂಡ ಶೂಟಿಂಗ್ನ ಭಾಗವಾಗಲಿದ್ದಾರೆ. ಆದರೆ, ಅದು ಯಾವ ರೀತಿಯ ದೃಶ್ಯ ಎಂಬ ವಿಚಾರ ಇನ್ನೂ ರಿವೀಲ್ ಆಗಿಲ್ಲ. ಈ ಮೊದಲು ನಯನತಾರಾ ಹಾಗೂ ಕಿಯಾರಾ ಅವರು ಈ ಚಿತ್ರದ ಶೂಟ್ನಲ್ಲಿ ಭಾಗಿ ಆಗಿದ್ದರು.
ಇದನ್ನೂ ಓದಿ: ‘ಟಾಕ್ಸಿಕ್’ ಗ್ಲಿಂಪ್ಸ್ಗೆ ಮಲಯಾಳಂ ಚಿತ್ರರಂಗದ ವಿರೋಧ; ಗೀತು ಮೋಹನ್ದಾಸ್ಗೆ ನೇರ ಪ್ರಶ್ನೆ
ಮಲಯಾಳಂನ ಗೀತು ಮೋಹನ್ದಾಸ್ ಅವರು ‘ಟಾಕ್ಸಿಕ್’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡದ ವೆಂಕಟ್ ನಾರಾಯಣ್ ಅವರು ‘ಕೆವಿಎನ್ ಪ್ರೊಡಕ್ಷನ್’ ಸಂಸ್ಥೆ ಮೂಲಕ ‘ಟಾಕ್ಸಿಕ್’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ ಏಪ್ರಿಲ್ನಲ್ಲಿ ರಿಲೀಸ್ ಆಗಬೇಕಿತ್ತು. ಆದರೆ, ಇದರ ರಿಲೀಸ್ ಡೇಟ್ ಡಿಸೆಂಬರ್‌ಗೆ ಮುಂದೂಡಲ್ಪಟ್ಟಿದೆ ಎನ್ನಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 7:31 am, Thu, 30 January 25