AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಚಿತ್ರದ ‘ತಬಾಹಿ’ ವಿಡಿಯೋ ಸಾಂಗ್ ರಿಲೀಸ್ ಬಗ್ಗೆ ಕಿಯಾರಾ ಅಧಿಕೃತ ಘೋಷಣೆ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ 'ತಬಾಹಿ' ವಿಡಿಯೋ ಸಾಂಗ್ ಇಂದು (ಜುಲೈ 8) ಬೆಳಿಗ್ಗೆ 11.33ಕ್ಕೆ ತೆರೆಗೆ ಬರಲಿದೆ. ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಈ ಹಾಡಿನ ಬಿಡುಗಡೆಯ ಬಗ್ಗೆ ಘೋಷಿಸಿದ್ದಾರೆ. ಯಶ್ ಮತ್ತು ಕಿಯಾರಾ ನಡುವಿನ ಬೋಲ್ಡ್ ಕೆಮಿಸ್ಟ್ರಿ ಈ ಹಾಡಿನ ಪ್ರಮುಖ ಆಕರ್ಷಣೆಯಾಗಿದ್ದು, ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.

'ಟಾಕ್ಸಿಕ್' ಚಿತ್ರದ 'ತಬಾಹಿ' ವಿಡಿಯೋ ಸಾಂಗ್ ರಿಲೀಸ್ ಬಗ್ಗೆ ಕಿಯಾರಾ ಅಧಿಕೃತ ಘೋಷಣೆ
ತಬಾಹಿ ಹಾಡು
ರಾಜೇಶ್ ದುಗ್ಗುಮನೆ
|

Updated on: Jul 08, 2026 | 6:56 AM

Share

ಮುಖ್ಯಾಂಶಗಳು

  • 'ತಬಾಹಿ' ವಿಡಿಯೋ ಸಾಂಗ್ ರಿಲೀಸ್ ಟೈಮ್ ಫಿಕ್ಸ್
  • ಯಶ್-ಕಿಯಾರಾ ಜೋಡಿಯ ಬೋಲ್ಡ್ ಲುಕ್
  • ಪ್ಯಾನ್ ಇಂಡಿಯಾ ಮಟ್ಟದಲ್ಲಿ 'ಟಾಕ್ಸಿಕ್' ಹವಾ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ (Toxic Movie) ಇದೇ ಆಗಸ್ಟ್ 26ರಂದು ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಈಗ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಈ ಪ್ರಚಾರದ ಭಾಗವಾಗಿ ‘ತಬಾಹಿ’ ವಿಡಿಯೋ ಸಾಂಗ್ ರಿಲೀಸ್ ಮಾಡಲು ಚಿತ್ರತಂಡ ಮುಹೂರ್ತ ಫಿಕ್ಸ್ ಮಾಡಿದೆ. ಇಂದು (ಜುಲೈ 8) ಬೆಳಿಗ್ಗೆ 11.33ಕ್ಕೆ ಈ ಬಹುನಿರೀಕ್ಷಿತ ವಿಡಿಯೋ ಸಾಂಗ್ ಅಧಿಕೃತವಾಗಿ ಬಿಡುಗಡೆ ಆಗಲಿದೆ.

ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ ಸಾಮಾಜಿಕ ಜಾಲತಾಣದಲ್ಲಿ ಈ ಹಾಡಿನ ಬಿಡುಗಡೆಯ ಬಗ್ಗೆ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಲಿರಿಕಲ್ ಸಾಂಗ್ ಮೂಲಕ ಈಗಾಗಲೇ ಧೂಳೆಬ್ಬಿಸಿರುವ ಈ ಹಾಡಿನ ದೃಶ್ಯ ವೈಭವವನ್ನು ಕಣ್ಣುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಕಿಯಾರಾ ಹಂಚಿಕೊಂಡಿರುವ ಪೋಸ್ಟ್ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ‘ಜುಲೈ 8ರ ಬೆಳಿಗ್ಗೆ 11.33ಕ್ಕೆ ಹಾಡು ರಿಲೀಸ್ ಆಗಲಿದೆ’ ಎಂದು ಅವರು ಹೇಳಿದ್ದಾರೆ.

‘ತಬಾಹಿ’ ಹಾಡಿನಲ್ಲಿ ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಯಾರಾ ಅಡ್ವಾಣಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರ ನಡುವಿನ ಕೆಮಿಸ್ಟ್ರಿ ಮತ್ತು ಬೋಲ್ಡ್ ಲುಕ್ ಹಾಡಿನ ಪ್ರಮುಖ ಆಕರ್ಷಣೆಯಾಗಿದ್ದು, ಬೆಳ್ಳಿಪರದೆ ಮೇಲೆ ಈ ಜೋಡಿಯ ಜುಗಲ್‌ಬಂದಿ ಕಣ್ಮನ ಸೆಳೆಯುವುದು ಗ್ಯಾರಂಟಿ ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಹಿಂದಿ ಸಿನಿಮಾ ವೀಕ್ಷಿಸಿ ಕೊಂಡಾಡಿದ ‘ಟಾಕ್ಸಿಕ್’ ನಿರ್ದೇಶಕಿ, ಹೇಳಿದ್ದೇನು?

ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ಬಂಡವಾಳ ಹೂಡಿವೆ. ಚಿತ್ರದಲ್ಲಿ ಯಶ್ ಹಾಗೂ ಕಿಯಾರಾ ಅಡ್ವಾಣಿ ಜೊತೆಗೆ ಹುಮಾ ಖುರೇಷಿ, ರುಕ್ಮಿಣಿ ವಸಂತ್ ಸೇರಿದಂತೆ ದಕ್ಷಿಣ ಹಾಗೂ ಬಾಲಿವುಡ್‌ನ ದಂಡೇ ನಟಿಸುತ್ತಿದೆ. ಭಾರಿ ತಾರಾಗಣವನ್ನು ಹೊಂದಿರುವ ಈ ಸಿನಿಮಾ ಸದ್ಯ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಕನ್ನಡ ಹಾಗೂ ಇಂಗ್ಲಿಷ್​ನಲ್ಲಿ ಒಟ್ಟಿಗೆ ಶೂಟ್ ಆಗಿದ್ದು, ತೆಲುಗು, ತಮಿಳು ಮೊದಲಾದ ಭಾಷೆಗೆ ಡಬ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ