AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ

Toxic Release Date: ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಬಿಗ್ ಅಪ್​ಡೇಟ್ ನೀಡುವುದಾಗಿ ಯಶ್ ಅವರು ತಿಳಿಸಿದ್ದರು. ಅದರಂತೆ ಚಿತ್ರತಂಡ ಈಗ ರಿಲೀಸ್ ದಿನಾಂಕ ಪ್ರಕಟಿಸಿದೆ. ಆಗಸ್ಟ್ 26ರಂದು ವಿಶ್ವಾದ್ಯಂತ ‘ಟಾಕ್ಸಿಕ್’ ಚಿತ್ರ ಬಿಡುಗಡೆ ಆಗಲಿದೆ. ಹೊಸ ಪೋಸ್ಟರ್ ಮೂಲಕ ಈ ವಿಷಯವನ್ನು ಅಧಿಕೃತವಾಗಿ ಹಂಚಿಕೊಳ್ಳಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ
Toxic New Release Date
ಮದನ್​ ಕುಮಾರ್​
|

Updated on:Jun 21, 2026 | 12:15 PM

Share

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂದು ಕೇಳುತ್ತಿದ್ದ ಅಭಿಮಾನಿಗಳಿಗೆ ಈಗ ಉತ್ತರ ಸಿಕ್ಕಿದೆ. ಯಶ್ ನಟನೆಯ ಈ ಸಿನಿಮಾದ ಬಿಡುಗಡೆ ದಿನಾಂಕ (Toxic Release Date) ಈಗಾಗಲೇ ಎರಡು ಬಾರಿ ಮುಂದೂಡಿಕೆ ಆಗಿತ್ತು. ಅಂತಿಮವಾಗಿ ‘ಟಾಕ್ಸಿಕ್’ ಸಿನಿಮಾವನ್ನು ಇದೇ ವರ್ಷ ಆಗಸ್ಟ್ 26ರಂದು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈ ಸಿನಿಮಾಗೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ನಿರ್ಮಾಣ ಮಾಡುತ್ತಿದೆ. ಯಶ್ (Yash) ಜೊತೆ ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ ಸೇರಿ ಹಲವರು ಅಭಿನಯಿಸುತ್ತಿದ್ದಾರೆ.

ಯಶ್ ಅವರಿಗೆ ‘ಟಾಕ್ಸಿಕ್’ ಬಹಳ ಮುಖ್ಯವಾದ ಪ್ರಾಜೆಕ್ಟ್. ‘ಕೆಜಿಎಫ್: ಚಾಪ್ಟರ್ 2’ ಬಳಿಕ ಅವರು ಒಪ್ಪಿಕೊಂಡ ಸಿನಿಮಾ ಇದು. ಬಹಳ ದೊಡ್ಡ ಮಟ್ಟದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಚಿತ್ರಕ್ಕೆ ಮಾರ್ಕೆಟಿಂಗ್ ಮಾಡಲಾಗುತ್ತಿದೆ. ವಿದೇಶದ ದೊಡ್ಡ ಕಂಪನಿಗಳು ಹಾಗೂ ತಂತ್ರಜ್ಞರು ಈ ಸಿನಿಮಾಗಾಗಿ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ವಿದೇಶದ ಮಾಧ್ಯಮಗಳಿಗೆ ಯಶ್ ಅವರು ಸಂದರ್ಶನ ನೀಡಿ, ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

‘ಕೆವಿಎನ್ ಪ್ರೊಡಕ್ಷನ್ಸ್’ ಪೋಸ್ಟ್:

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಟಾಕ್ಸಿಕ್’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ 2 ಬಾರಿ ಈ ಚಿತ್ರದ ರಿಲೀಸ್ ದಿನಾಂಕ ಮುಂದೂಡಿಕೆ ಆಯಿತು. ಮೊದಲ ಬಾರಿ ಮಧ್ಯಪ್ರಾಚ್ಯ ದೇಶಗಳ ಯುದ್ಧದಿಂದ ‘ಟಾಕ್ಸಿಕ್’ ಬಿಡುಗಡೆ ದಿನಾಂಕ ಮುಂದೂಡಿಕೆ ಆಗಿತ್ತು. 2ನೇ ಬಾರಿ ಸಿನಿಮಾದ ಮಾರುಕಟ್ಟೆ ವಿಸ್ತರಣೆ ದೃಷ್ಟಿಯಿಂದ ರಿಲೀಸ್ ದಿನಾಂಕವನ್ನು ಮುಂದೂಡಲಾಯಿತು.

‘ಟಾಕ್ಸಿಕ್’ ಚಿತ್ರದಲ್ಲಿ ಹತ್ತು ಹಲವು ವಿಶೇಷತೆಗಳಿವೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ಗಳು ಧೂಳೆಬ್ಬಿಸಿವೆ. ಸಿನಿಪ್ರಿಯರ ವಲಯದಲ್ಲಿ ದೊಡ್ಡಮಟ್ಟದ ಚರ್ಚೆ ಹುಟ್ಟುಹಾಕಿವೆ. ಇಂಥ ಮಾಸ್ ಸಿನಿಮಾಗೆ ಮಹಿಳಾ ನಿರ್ದೇಶಕಿ ಆ್ಯಕ್ಷನ್-ಕಟ್ ಹೇಳುತ್ತಿರುವುದು ಕೂಡ ಹೈಪ್ ಹೆಚ್ಚಲು ಕಾರಣ ಆಗಿದೆ. ಚಿತ್ರದ ಬರವಣಿಗೆಯಲ್ಲಿ ಯಶ್ ಕೂಡ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ‘ಟಾಕ್ಸಿಕ್’ ಸೆಟ್‌ನಿಂದ ಬಿಗ್ ಅಪ್ಡೇಟ್: ಗೀತು ಮೋಹನ್‌ದಾಸ್ ಹುಟ್ಟುಹಬ್ಬಕ್ಕೆ ಮೇಕಿಂಗ್ ಝಲಕ್ ರಿಲೀಸ್

ಪಾತ್ರವರ್ಗದ ಕಾರಣದಿಂದಲೂ ಈ ಸಿನಿಮಾ ವಿಶೇಷ ಎನಿಸಿಕೊಂಡಿದೆ. ಘಟಾನುಘಟಿ ಸ್ಟಾರ್ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ರುಕ್ಮಿಣಿ ವಸಂತ್, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಶಿ, ತಾರಾ ಸುತಾರಿಯಾ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಯಶ್ ಅವರು ಎರಡು ಗೆಟಪ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಲುಕ್ ಸಿಕ್ಕಾಪಟ್ಟೆ ರಗಡ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:06 pm, Sun, 21 June 26

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ