AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಬಿಡುಗಡೆ; ಯಶ್​ಗೆ ವಿಶ್ವಾದ್ಯಂತ ಸಿಕ್ತು 12,000 ಸ್ಕ್ರೀನ್‌

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ವಿಶ್ವಾದ್ಯಂತ ಬರೋಬ್ಬರಿ 12,000 ಸ್ಕ್ರೀನ್‌ಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಮುಂಜಾನೆಯಿಂದಲೇ ಚಿತ್ರಮಂದಿರಗಳ ಬಳಿ ಅಭಿಮಾನಿಗಳು ಪಟಾಕಿ ಸಿಡಿಸಿ, ಕಟೌಟ್‌ಗೆ ಹಾಲಿನ ಅಭಿಷೇಕ ಮಾಡಿ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ. ಅಡ್ವಾನ್ಸ್ ಬುಕಿಂಗ್‌ನಲ್ಲೇ 70 ಕೋಟಿ ರೂಪಾಯಿ ಗಳಿಸಿರುವ ಈ ಸಿನಿಮಾ, ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿ ರೂಪಾಯಿ ಬಾಚುವ ನಿರೀಕ್ಷೆಯಿದೆ.

‘ಟಾಕ್ಸಿಕ್’ ಬಿಡುಗಡೆ; ಯಶ್​ಗೆ ವಿಶ್ವಾದ್ಯಂತ ಸಿಕ್ತು 12,000 ಸ್ಕ್ರೀನ್‌
ಯಶ್
ರಾಜೇಶ್ ಹೆಗಡೆ ದುಗ್ಗುಮನೆ
|

Updated on: Aug 26, 2026 | 7:37 AM

Share

ಮುಖ್ಯಾಂಶಗಳು

  • ವಿಶ್ವಾದ್ಯಂತ 12 ಸಾವಿರ ಸ್ಕ್ರೀನ್‌ಗಳಲ್ಲಿ 'ಟಾಕ್ಸಿಕ್' ಅಬ್ಬರ
  • ಮುಂಜಾನೆ 6 ಗಂಟೆಯಿಂದಲೇ ಹಬ್ಬದ ಸಂಭ್ರಮ
  • ಪಟಾಕಿ, ಹಾಲಿನ ಅಭಿಷೇಕದ ಜತೆ ಭರ್ಜರಿ ಎಂಟ್ರಿ

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ 4 ವರ್ಷಗಳ ಸುದೀರ್ಘ ಕಾಯುವಿಕೆಗೆ ಕೊನೆಗೂ ತೆರೆಬಿದ್ದಿದೆ. ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಇಂದು (ಆಗಸ್ಟ್ 26) ವಿಶ್ವದಾದ್ಯಂತ ಅತ್ಯಂತ ಅದ್ಧೂರಿಯಾಗಿ ಚಿತ್ರಮಂದಿರಗಳಿಗೆ ಲಗ್ಗೆಯಿಟ್ಟಿದೆ. ಈ ಸಿನಿಮಾಗೆ ಮುಂಜಾನೆ 6 ಗಂಟೆಯಿಂದಲೇ ಶೋ ಆರಂಭ ಆಗಿದ್ದು ಅಭಿಮಾನಿಗಳು ಕಣ್ಣು ತುಂಬಿಕೊಳ್ಳುತ್ತಿದ್ದಾರೆ. ಯಶ್ ಅವರನ್ನು ನೋಡಿ ಸಂಭ್ರಮಿಸಿದ್ದಾರೆ.

ವಿಶ್ವಾದ್ಯಂತ 12 ಸಾವಿರ ಸ್ಕ್ರೀನ್‌ಗಳಲ್ಲಿ ಪ್ರದರ್ಶನ

ಚಿತ್ರವು ವಿಶ್ವಾದ್ಯಂತ ಬರೋಬ್ಬರಿ 12,000ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ತೆರೆಕಂಡಿದ್ದು, ಕರ್ನಾಟಕ ಒಂದರಲ್ಲೇ 1,500ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಪ್ರದರ್ಶನಗೊಳ್ಳುತ್ತಿದೆ. ರಾಜಧಾನಿ ಬೆಂಗಳೂರಿನ ಹಲವು ಪ್ರಮುಖ ಥಿಯೇಟರ್‌ಗಳಲ್ಲಿ ಮುಂಜಾನೆಯಿಂದಲೇ ಆರಂಭವಾದ ಶೋಗಳಿಗೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಅಭಿಮಾನಿಗಳಿಗೆ ಹಬ್ಬದ ವಾತಾವರಣ

ನೆಚ್ಚಿನ ನಟನ ಸಿನಿಮಾವನ್ನು ಸಂಭ್ರಮಿಸಲು ಚಿತ್ರಮಂದಿರಗಳ ಮುಂಭಾಗ ಮುಂಜಾನೆಯಿಂದಲೇ ಜಮಾಯಿಸಿದ ಯಶ್ ಅಭಿಮಾನಿಗಳು, ದೊಡ್ಡ ಮಟ್ಟದಲ್ಲಿ ಪಟಾಕಿ ಸಿಡಿಸಿ, ಹಾರ ಹಾಕಿ ಸಂಭ್ರಮಾಚರಣೆ ಮುಗಿಲು ಮುಟ್ಟಿಸಿದ್ದಾರೆ. ಯಶ್ ಕಟೌಟ್​​ಗೆ ಹಾಲಿನ ಅಭಿಷೇಕ ಮಾಡಲಾಗಿದೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಸಿನಿಮಾಗೆ ಬೇಡಿಕೆ ಸೃಷ್ಟಿ ಆಗಿದೆ.

ಇದನ್ನೂ ಓದಿ: ಟಾಕ್ಸಿಕ್ ಅಡ್ವಾನ್ಸ್ ಬುಕಿಂಗ್; 100 ಕೋಟಿ ರೂಪಾಯಿ ಓಪನಿಂಗ್ ನಿರೀಕ್ಷೆಯಲ್ಲಿ ಯಶ್ ಸಿನಿಮಾ

ಬಾಕ್ಸ್ ಆಫೀಸ್ ಸೂಪರ್ ಧಮಾಕಾ

ಬಿಡುಗಡೆಗೂ ಮುನ್ನವೇ ಟಿಕೆಟ್ ಬುಕಿಂಗ್‌ನಲ್ಲಿ ಅಬ್ಬರಿಸಿದ್ದ ‘ಟಾಕ್ಸಿಕ್’, ಅಡ್ವಾನ್ಸ್ ಬುಕಿಂಗ್ ಮೂಲಕವೇ ಸುಮಾರು 70 ಕೋಟಿ ರೂಪಾಯಿ ಸಂಗ್ರಹಿಸಿ ಹೊಸ ದಾಖಲೆ ಬರೆದಿದೆ. ಇನ್ನು ಪ್ರೇಕ್ಷಕರ ಕ್ರೇಜ್ ಮತ್ತು ಥಿಯೇಟರ್ ಕೌಂಟ್ ನೋಡಿದರೆ, ಮೊದಲ ದಿನವೇ ಸಿನಿಮಾ ವಿಶ್ವಾದ್ಯಂತ 100 ಕೋಟಿ ರೂಪಾಯಿ ಗಳಿಕೆ ಕಾಣುವ ಎಲ್ಲಾ ಸಾಧ್ಯತೆಗಳಿವೆ ಎಂದು ಬಾಕ್ಸ್ ಆಫೀಸ್ ಪಂಡಿತರು ಅಂದಾಜಿಸಿದ್ದಾರೆ.

‘ಟಾಕ್ಸಿಕ್’ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ಮುಖ್ಯ ಭೂಮಿಕೆಯಲ್ಲಿ ಮಿಂಚಿದ್ದು, ಅವರ ಜೊತೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಅಕ್ಷಯ್ ಒಬೆರಾಯ್, ಸುದೇವ್ ನಾಯರ್ ಮತ್ತು ಬಾಲಾಜಿ ಮನೋಹರ್ ಬಲಿಷ್ಠ ತಾರಾಗಣದಲ್ಲಿದ್ದು, ಸಂಜೀದಾ ಶೇಕ್ ವಿಶೇಷ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ತಾಂತ್ರಿಕವಾಗಿ ಈ ಚಿತ್ರ ಅತ್ಯಂತ ಶ್ರೀಮಂತವಾಗಿದ್ದು, ಗೀತು ಮೋಹನ್‌ದಾಸ್ ನಿರ್ದೇಶನ ಮಾಡುವುದರ ಜೊತೆಗೆ ಯಶ್ ಅವರೊಂದಿಗೆ ಸೇರಿ ಚಿತ್ರಕಥೆ ಬರೆದಿದ್ದಾರೆ. ಕೆ.ವಿ.ಎನ್. ಪ್ರೊಡಕ್ಷನ್ಸ್‌ನ ವೆಂಕಟ್ ಕೆ. ನಾರಾಯಣ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಯಶ್ ಸ್ವತಃ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ