AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toxic Song: ‘ಟಾಕ್ಸಿಕ್’ ಚಿತ್ರದ ‘ಮನಮೋಹಕ..’ ಸಾಂಗ್; ಯಶ್-ತಾರಾ ಸುತಾರಿಯಾ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ

ಟಾಕ್ಸಿಕ್​ ಮನಮೋಹಕ ಹಾಡು: ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಎರಡನೇ ಹಾಡು ‘ಮನಮೋಹಕ’ ಇಂದು ಬಿಡುಗಡೆಯಾಗಿದ್ದು, ಪ್ರಮೋದ್ ಮರವಂತೆ ಸಾಹಿತ್ಯ ಹಾಗೂ ಸಿದ್ದಾರ್ಥ್ ಬಸರೂರ್ ಧ್ವನಿಯಲ್ಲಿ ಮೂಡಿಬಂದಿರುವ ಈ ಮಧುರ ಪ್ರಣಯಗೀತೆಯಲ್ಲಿ ಯಶ್ ಮತ್ತು ತಾರಾ ಸುತಾರಿಯಾ ಕೆಮಿಸ್ಟ್ರಿ ಅಭಿಮಾನಿಗಳ ಮನಗೆದ್ದಿದೆ.

Toxic Song: ‘ಟಾಕ್ಸಿಕ್’ ಚಿತ್ರದ ‘ಮನಮೋಹಕ..’ ಸಾಂಗ್; ಯಶ್-ತಾರಾ ಸುತಾರಿಯಾ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ
ತಾರಾ-ಯಶ್
ರಾಜೇಶ್ ದುಗ್ಗುಮನೆ
|

Updated on:Jul 21, 2026 | 11:53 AM

Share

ಮುಖ್ಯಾಂಶಗಳು

  • 'ತಬಾಹಿ' ಬೆನ್ನಲ್ಲೇ ಮೆಲೋಡಿ ಜಾದೂ
  • 'ಟಾಕ್ಸಿಕ್' ಚಿತ್ರದ ಎರಡನೇ ರೋಮ್ಯಾಂಟಿಕ್ ಹಾಡು ‘ಮನಮೋಹಕ’ ಔಟ್
  • ಭಟ್ರು ಅಲ್ಲ, ಈ ಬಾರಿ ಮರವಂತೆ ಸಾಹಿತ್ಯ

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್​ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಕಡೆಯಿಂದ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಈಗಾಗಲೇ ಬಿಡುಗಡೆಯಾಗಿ ಕೋಟ್ಯಂತರ ವೀಕ್ಷಣೆಗಳೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ್ದ ಬೋಲ್ಡ್ ಅಂಡ್ ರೊಮ್ಯಾಂಟಿಕ್ ‘ತಬಾಹಿ’ ಹಾಡಿನ ಬೆನ್ನಲ್ಲೇ, ಚಿತ್ರತಂಡ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ. ಇಂದು (ಜುಲೈ 21) ಬೆಳಿಗ್ಗೆ 11.33ಕ್ಕೆ ರಿಲೀಸ್ ಆಗಿರುವ ‘ಮನಮೋಹಕ..’ ಸಾಂಗ್ ಇಂಟರ್ನೆಟ್‌ನಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದೆ.

ಮೆಲೋಡಿ ಪ್ರಿಯರ ಮನಗೆದ್ದ ‘ಮನಮೋಹಕ’

ಮೊದಲ ಹಾಡು ‘ತಬಾಹಿ’ಯಲ್ಲಿ ಯಶ್ ಹಾಗೂ ಕಿಯಾರಾ ಅಡ್ವಾಣಿ ಸಖತ್ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡು ಬೋಲ್ಡ್ ನೆಸ್ ಮೂಲಕ ಗಮನ ಸೆಳೆದಿದ್ದರು. ಇಂದು ಬಿಡುಗಡೆಯಾಗಿರುವ ‘ಮನಮೋಹಕ’ ಹಾಡು ಮಧುರವಾದ ಪ್ರಣಯಗೀತೆ. ಈ ಹಾಡಿನಲ್ಲಿ ಯಶ್ ಹಾಗೂ ತಾರಾ ಸುತಾರಿಯಾ ಜೋಡಿಯಾಗಿ ಕಾಣಿಸಿಕೊಂಡಿದ್ದು, ಇಬ್ಬರ ನಡುವಿನ ಸ್ಕ್ರೀನ್ ಕೆಮಿಸ್ಟ್ರಿ ಗಮನ ಸೆಳೆಯುತ್ತಿದೆ. ಈ ಹಾಡಿನಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ ಕೂಡ ಕಾಣಿಸಿಕೊಳ್ಳುತ್ತಾರೆ.

ಪ್ರಮೋದ್ ಮರವಂತೆ ಸಾಹಿತ್ಯ

‘ಟಾಕ್ಸಿಕ್’ ಚಿತ್ರದ ಮೊದಲ ಹಾಡು ‘ತಬಾಹಿ’ಗೆ  ನಿರ್ದೇಶಕ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದರು. ಈಗ ಮನಮೋಹಕ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ಸಿದ್ದಾರ್ಥ್ ಬಸರೂರ್ ಅವರು ಹಾಡಿದ್ದಾರೆ.

‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಈಗಾಗಲೇ ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ನಯನತಾರಾ ಮತ್ತು ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಗಣವೇ ಇದೆ. ಯಶ್ ಅವರು ಯಾರ ಜೊತೆ ಫೈಟ್ ಮಾಡುತ್ತಾರೆ, ಯಾರ ಜೊತೆ ರೊಮ್ಯಾನ್ಸ್ ಮಾಡುತ್ತಾರೆ ಎಂಬ ಗೊಂದಲ ಅಭಿಮಾನಿಗಳಲ್ಲಿ ಇದ್ದ ಬೆನ್ನಲ್ಲೇ, ಈಗ ತಾರಾ ಸುತಾರಿಯಾ ಜೊತೆಗಿನ ಈ ಮಧುರ ಪ್ರಣಯಗೀತೆ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ದುಪ್ಪಟ್ಟು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:44 am, Tue, 21 July 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ