
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ (Toxic Movie) ‘ತಬಾಹಿ’ ವಿಡಿಯೋ ಸಾಂಗ್ ಈಗ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಸಂಚಲನ ಸೃಷ್ಟಿಸಲು ಸಜ್ಜಾಗಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಈ ಹಾಡಿನ ಲಿರಿಕಲ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಧೂಳೆಬ್ಬಿಸಿತ್ತು. ಇದೀಗ ಚಿತ್ರದ ಬಿಡುಗಡೆಯ ದಿನಾಂಕ ಹತ್ತಿರವಾಗುತ್ತಿದ್ದು, ಚಿತ್ರತಂಡವು ಪ್ರೇಕ್ಷಕರಿಗೆ ಬಿಗ್ ಸರ್ಪ್ರೈಸ್ ನೀಡಲು ಸಿದ್ಧತೆ ಮಾಡಿಕೊಂಡಿದೆ. ಇದಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.
‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ಪ್ರಚಾರವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಚಿತ್ರತಂಡ ನಿರ್ಧರಿಸಿದೆ. ಅದರ ಮೊದಲ ಭಾಗವಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ‘ತಬಾಹಿ’ ಹಾಡಿನ ಪೂರ್ಣ ಪ್ರಮಾಣದ ವಿಡಿಯೋ ಸಾಂಗ್ ಅನ್ನು ಇದೇ ವಾರ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ ಎನ್ನಲಾಗಿದೆ.
ಇದನ್ನೂ ಓದಿ: ಆಗಸ್ಟ್ 15ಕ್ಕೆ ಬೆಂಗಳೂರಲ್ಲಿ ‘ಟಾಕ್ಸಿಕ್’ ಭರ್ಜರಿ ಈವೆಂಟ್? ಹೇಳಿದ್ದನ್ನು ಮಾಡಿ ತೋರಿಸಿದ ಯಶ್
ಗಾಂಧಿನಗರದ ಮೂಲಗಳ ಪ್ರಕಾರ ಈ ‘ತಬಾಹಿ’ ವಿಡಿಯೋ ಸಾಂಗ್ ಸಖತ್ ಬೋಲ್ಡ್ ಆಗಿ ಮೂಡಿಬಂದಿದೆಯಂತೆ. ಯಶ್ ಹಾಗೂ ಕಿಯಾರಾ ಅಡ್ವಾಣಿ ಅವರ ಕೆಮಿಸ್ಟ್ರಿ ನೋಡಲು ಫ್ಯಾನ್ಸ್ ಕಾದಿದ್ದಾರೆ. ಹಾಡಿನ ಮೇಕಿಂಗ್ ಮತ್ತು ದೃಶ್ಯಗಳು ಅತ್ಯಂತ ಶ್ರೀಮಂತವಾಗಿ ಮತ್ತು ಬೋಲ್ಡ್ ಆಗಿ ಮೂಡಿಬಂದಿವೆ ಎನ್ನಲಾಗಿದೆ. ಲಿರಿಕಲ್ ವಿಡಿಯೋ ನೋಡಿದಾಗಲೇ ಥ್ರಿಲ್ಲಾಗಿದ್ದ ಅಭಿಮಾನಿಗಳಿಗೆ, ಈಗ ಬರಲಿರುವ ಒರಿಜಿನಲ್ ವಿಡಿಯೋ ಸಾಂಗ್ ಕಣ್ಣಿಗೆ ಹಬ್ಬವನ್ನು ಉಣಿಸುವುದು ಗ್ಯಾರಂಟಿ ಎನ್ನಲಾಗಿದೆ.
ಇದೇ ವಾರಾಂತ್ಯದೊಳಗೆ ಈ ಹಾಡು ಅಧಿಕೃತವಾಗಿ ಯೂಟ್ಯೂಬ್‌ನಲ್ಲಿ ಲಾಂಚ್ ಆಗುವ ಸಾಧ್ಯತೆ ದಟ್ಟವಾಗಿದೆ. ಆಗಸ್ಟ್ 26ರಂದು ಬೆಳ್ಳಿಪರದೆಗೆ ಅಪ್ಪಳಿಸಲಿರುವ ಯಶ್ ಅವರ ‘ಟಾಕ್ಸಿಕ್’ ಚಿತ್ರದ ಮೇಲೆ ಈಗಾಗಲೇ ಬಾಕ್ಸ್ ಆಫೀಸ್‌ನಲ್ಲಿ ಭಾರಿ ನಿರೀಕ್ಷೆಗಳು ಮೂಡಿದ್ದು, ಈ ಬೋಲ್ಡ್ ವಿಡಿಯೋ ಸಾಂಗ್ ಸಿನಿಮಾದ ಹೈಪ್ ಅನ್ನು ಇನ್ನಷ್ಟು ಹೆಚ್ಚಿಸುವುದರಲ್ಲಿ ಯಾವುದೇ ಸಂಶಯವಿಲ್ಲ.
‘ಟಾಕ್ಸಿಕ್’ ಚಿತ್ರಕ್ಕೆ ಗೀತು ಮೋಹನ್ ದಾಸ್ ನಿರ್ದೇಶನ ಇದೆ. ಈ ಚಿತ್ರದಲ್ಲಿ ಕಿಯಾರಾ ಜೊತೆ ರುಕ್ಮಿಣಿ ವಸಂತ್ ಮೊದಲಾದವರು ನಟಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.