AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಟ್ರೇಲರ್ ಲಾಂಚ್ ಕಾರ್ಯಕ್ರಮದ ವಿಶೇಷತೆಗಳೇನು? ಇಲ್ಲಿದೆ ವಿವರ

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಅದ್ದೂರಿ ಟ್ರೇಲರ್ ಲಾಂಚ್ ಇಂದು ಕಪಾಲಿ ಎಎಂಬಿ ಸಿನಿಮಾಸ್‌ನಲ್ಲಿ ನಡೆಯಲಿದೆ. ಇಡೀ ಚಿತ್ರತಂಡ ಹಾಗೂ ವಿವಿಧ ಭಾಷೆಯ ಪತ್ರಕರ್ತರು ಭಾಗವಹಿಸಲಿದ್ದು, ಯಶ್ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕಥೆಯ ಒಂದೆಳೆ ತಿಳಿಯುವ ನಿರೀಕ್ಷೆಯಿದ್ದು, ಕಾರ್ಯಕ್ರಮ ಖಾಸಗಿಯಾಗಿ ಆಯೋಜನೆಯಾಗಿದೆ.

‘ಟಾಕ್ಸಿಕ್’ ಟ್ರೇಲರ್ ಲಾಂಚ್ ಕಾರ್ಯಕ್ರಮದ ವಿಶೇಷತೆಗಳೇನು? ಇಲ್ಲಿದೆ ವಿವರ
ಟಾಕ್ಸಿಕ್
ರಾಜೇಶ್ ದುಗ್ಗುಮನೆ
|

Updated on:Aug 08, 2026 | 7:22 AM

Share

ಮುಖ್ಯಾಂಶಗಳು

  • ಅದ್ದೂರಿ ವೇದಿಕೆಯಲ್ಲಿ ನಕ್ಷತ್ರಗಳ ಸಮ್ಮಿಲನ
  • ತಾರಾಗಣದ ಸಾಲು ಸಾಲು ದಿಗ್ಗಜರು ಭಾಗಿ
  • ಸಸ್ಪೆನ್ಸ್ ಕಾಯ್ದುಕೊಂಡ ಕೆವಿಎನ್

‘ಟಾಕ್ಸಿಕ್’ ಸಿನಿಮಾದ (Toxic Movie) ಟ್ರೇಲರ್ ಲಾಂಚ್ ಕಾರ್ಯಕ್ರಮ ಇಂದು (ಆಗಸ್ಟ್ 8) ನಡೆಯಲಿದೆ. ಬೆಂಗಳೂರಿನ ಕಪಾಲಿ ಎಎಂಬಿ ಸಿನಿಮಾಸ್​​ನಲ್ಲಿ ಅದ್ದೂರಿ ಈವೆಂಟ್ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಇಡೀ ಚಿತ್ರತಂಡ ಹಾಜರಿ ಹಾಕಲಿದೆ. ಈ ಅದ್ದೂರಿ ಟ್ರೇಲರ್ ಲಾಂಚ್ ವಿಶೇಷತೆಗಳೇನು ಎಂಬಿತ್ಯಾದಿ ವಿಷಯಗಳ ಬಗ್ಗೆ ಇಲ್ಲಿದೆ ಮಾಹಿತಿ.

ಅದ್ದೂರಿ ಈವೆಂಟ್

ಬೆಂಗಳೂರಿನ ಗಾಂಧಿನಗರದಲ್ಲಿರುವ ಮಹೇಶ್ ಬಾಬು ಒಡೆತನದ ಎಎಂಬಿ ಸಿನಿಮಾಸ್​​ನಲ್ಲಿ ‘ಟಾಕ್ಸಿಕ್’ ಟ್ರೇಲರ್ ಲಾಂಚ್ ಕಾರ್ಯಕ್ರಮ ನಡೆಯುತ್ತಿದ್ದು, ಅದ್ದೂರಿ ಟ್ರೇಲರ್ ಅನಾವರಣ ಆಗಲಿದೆ. ಈ ಟ್ರೇಲರ್ ಮೂಲಕ ಸಿನಿಮಾದ ಕಥೆಯ ಒಂದೆಳೆ ತಿಳಿಯುವ ನಿರೀಕ್ಷೆಯಿದೆ. ಈ ಮೊದಲು ರಿಲೀಸ್ ಆದ ಟೀಸರ್ ಹಾಗೂ ಗ್ಲಿಂಪ್ಸ್​​ನಲ್ಲಿ ಸಾಕಷ್ಟು ಗೊಂದಲಗಳು ಇದ್ದವು.

ಇಡೀ ತಂಡ ಭಾಗಿ

‘ಟಾಕ್ಸಿಕ್’ ಸಿನಿಮಾ ತುಂಬಾನೇ ದೊಡ್ಡ ತಾರಾ ಬಳಗವನ್ನು ಹೊಂದಿದೆ. ರಾಕಿಂಗ್ ಸ್ಟಾರ್ ಯಶ್, ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಸೇರಿದಂತೆ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ಇನ್ನು ವಿವಿಧ ಭಾಷೆಯ ಪತ್ರಕರ್ತರು ಕೂಡ ಕಾರ್ಯಕ್ರಮಕ್ಕೆ ಹಾಜರಿ ಹಾಕಲಿದ್ದಾರೆ. ಖ್ಯಾತ ನಿರೂಪಕ ದ್ಯಾನಿಸ್ ಸೇಠ್ ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಸಾಮಾನ್ಯರಿಗಿಲ್ಲ ಅವಕಾಶ

‘ಟಾಕ್ಸಿಕ್’ ಸಿನಿಮಾದ ಟ್ರೇಲರ್ ಲಾಂಚ್​ ತುಂಬಾನೇ ಖಾಸಗಿಯಾಗಿ ನಡೆಯುತ್ತಿದೆ. ಹೀಗಾಗಿ, ಆಯ್ದ ಕೆಲವರಿಗೆ ಮಾತ್ರ ಇದರಲ್ಲಿ ಭಾಗಿ ಆಗಲು ಅವಕಾಶ ಇದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಇಲ್ಲ.

ಟ್ರೇಲರ್ ಲಾಂಚ್ ಎಷ್ಟು ಗಂಟೆಗೆ?

‘ಟಾಕ್ಸಿಕ್’ ಸಿನಿಮಾದ ಟ್ರೇಲರ್ ಲಾಂಚ್ ಎಷ್ಟು ಗಂಟೆಗೆ ಎಂಬ ವಿಷಯವನ್ನು ನಿರ್ಮಾಣ ಸಂಸ್ಥೆಯಾದ ಕೆವಿಎನ್ ರಿವೀಲ್ ಮಾಡಿಲ್ಲ. ಆ ವಿಷಯವನ್ನು ಇನ್ನೂ ಗುಟ್ಟಾಗಿಯೇ ಇಡಲಾಗಿದೆ. ಈ ಚಿತ್ರದ ಟ್ರೇಲರ್​​ಗೆ ‘ಎ’ ಪ್ರಮಾಣಪತ್ರ ಸಿಕ್ಕಿರೋದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾದ ರನ್ಟೈಮ್ ಎಷ್ಟು? ಸೆನ್ಸಾರ್ ಬಗ್ಗೆ ಹರಿದಾಡುತ್ತಿದೆ ಸುದ್ದಿ

ಯಶ್​​ಗೆ ವಿಶೇಷ ದಿನ

ರಾಕಿಂಗ್ ಸ್ಟಾರ್ ಯಶ್ ಕಳೆದ ಕೆಲವು ವರ್ಷಗಳಿಂದ ‘ಟಾಕ್ಸಿಕ್’ ಚಿತ್ರಕ್ಕಾಗಿ ಸಾಕಷ್ಟು ಸಮಯ ಮೀಸಲಿಟ್ಟಿದ್ದಾರೆ. ಅದಕ್ಕೆ ಮೊದಲ ಪ್ರತಿಫಲ ಸಿಗುವ ಸಮಯ ಇಂದು. ಟ್ರೇಲರ್ ಅದ್ಭುತವಾಗಿ ಮೂಡಿ ಬಂದಿದ್ದರೆ ಸಿನಿಮಾದ ಹೈಪ್ ಹೆಚ್ಚಲಿದೆ. ವಿರೋಧಿಗಳ ಬಾಯಿ ಮುಚ್ಚಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:05 am, Sat, 8 August 26

Follow Us
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು