AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಎದುರು ಬರಲಿದೆ ಸಲ್ಮಾನ್ ಸಿನಿಮಾ; ಶಾರುಖ್​​ಗೆ ಆದ ಗತಿ ನೆನಪಿಸಿದ ಫ್ಯಾನ್ಸ್

ಯಶ್ ಅವರು'ಕೆಜಿಎಫ್ 2' ಚಿತ್ರದ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಅವರ ಮುಂದಿನ ಸಿನಿಮಾ'ಟಾಕ್ಸಿಕ್' ಸಲ್ಮಾನ್ ಖಾನ್ ಅವರ 'ಬ್ಯಾಟಲ್ ಆಫ್ ಗಾಲ್ವಾನ್' ಜೊತೆ ಸ್ಪರ್ಧೆಗೆ ಸಿದ್ಧವಾಗಿದೆ. ಹಿಂದಿನ 'ಕೆಜಿಎಫ್' ಸಿನಿಮಾಗಳು ಬಾಲಿವುಡ್ ಚಿತ್ರಗಳನ್ನು ಮೀರಿಸಿದಂತೆ, ಈ ಬಾರಿಯೂ ಯಶ್ ಸವಾಲೆಸೆಯಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

‘ಟಾಕ್ಸಿಕ್’ ಎದುರು ಬರಲಿದೆ ಸಲ್ಮಾನ್ ಸಿನಿಮಾ; ಶಾರುಖ್​​ಗೆ ಆದ ಗತಿ ನೆನಪಿಸಿದ ಫ್ಯಾನ್ಸ್
ಸಲ್ಮಾನ್-ಯಶ್
ರಾಜೇಶ್ ದುಗ್ಗುಮನೆ
|

Updated on: Nov 25, 2025 | 7:32 AM

Share

ಅದು 2018ರ ಡಿಸೆಂಬರ್ 21. ಅಂದು ಎರಡು ಘಟನೆಗಳು ನಡೆದವು. ಕನ್ನಡ ಯಶ್ (Yash) ನಟನೆಯ ‘ಕೆಜಿಎಫ್’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಕಂಡಿತು. ಅತ್ತ ಶಾರುಖ್ ಖಾನ್ ನಟನೆಯ ‘ಜೀರೋ’ ಸಿನಿಮಾ ‘ಕೆಜಿಎಫ್’ ಎದುರು ಮಂಡಿ ಊರಿತು. 2022ರಲ್ಲಿ ‘ಕೆಜಿಎಫ್ 2’ ಎದುರು ಬಿಡುಗಡೆ ಕಂಡ ದಳಪತಿ ವಿಜಯ್ ನಟನೆಯ ‘ಬೀಸ್ಟ್’ ಕೂಡ ಹಿನ್ನಡೆ ಅನುಭವಿಸಿತು. ಈಗ ಯಶ್ ನಟನೆಯ ‘ಟಾಕ್ಸಿಕ್’ ಎದುರು ಸಲ್ಮಾನ್ ಖಾನ್ ಅವರ ‘ಬ್ಯಾಟಲ್ ಆಫ್ ಗಾಲ್ವಾನ್’ ತೆರೆಗೆ ಬರಲು ರೆಡಿ ಆಗಿದೆ ಎಂದು ವರದಿ ಆಗಿದೆ.

ಮಾರ್ಚ್ 19ರಂದು ‘ಬ್ಯಾಟಲ್ ಆಫ್ ಗಾಲ್ವಾನ್’ ಸಿನಿಮಾನ ತೆರೆಗೆ ತರಲು ಸಲ್ಮಾನ್ ಖಾನ್ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಸಲ್ಮಾನ್ ಖಾನ್ ಅವರಿಗೂ ಈದ್​ಗೂ ಎಲ್ಲಿಲ್ಲದ ನಂಟು. ಅವರ ಅನೇಕ ಸಿನಿಮಾಗಳು ಇದೇ ಸಂದರ್ಭದಲ್ಲಿ ರಿಲೀಸ್ ಆಗಿವೆ. 2026ರಲ್ಲಿ ಅವರು ಮತ್ತೆ ಈದ್ ಹಬ್ಬದಂದೇ ಬರಲು ರೆಡಿ ಆಗಿದ್ದಾರೆ ಎನ್ನಲಾಗುತ್ತಿದೆ. ‘ಟಾಕ್ಸಿಕ್’ ಕೂಡ ಮಾರ್ಚ್​ 19ರಂದು ರಿಲೀಸ್ ಆಗಲಿದೆ.

‘ಬ್ಯಾಟಲ್ ಆಫ್ ಗಾಲ್ವಾನ್’ ಸಿನಿಮಾದ ಶೂಟ್ ಡಿಸೆಂಬರ್ ವೇಳೆಗೆ ಅಂತ್ಯವಾಗಲಿದೆ. ಆ ಬಳಿಕ ಎರಡು ತಿಂಗಳಲ್ಲಿ ತಂಡ ಪೋಸ್ಟ್ ಪ್ರೊಡಕ್ಷನ್ ಪೂರ್ಣಗೊಳಿಸಲಿದೆ. ಹೀಗಾಗಿ ಮಾರ್ಚ್ 19ರಂದು ಬಂದರೆ ಉತ್ತಮ ಎಂಬ ಆಲೋಚನೆ ಸಲ್ಲುಗೆ ಇದೆ. ಒಂದೊಮ್ಮೆ ಆ ದಿನಾಂಕ ಮಿಸ್ ಆದರೆ ಸಿನಿಮಾ ದೀಪಾವಳಿಗೆ ಮುಂದೂಡಲ್ಪಡುತ್ತದೆ.

‘ಬ್ಯಾಟಲ್ ಆಫ್ ಗಾಲ್ವಾನ್’ ಸಿನಿಮಾ ನೈಜ ಘಟನೆ ಆಧರಿಸಿದೆ. ಗಾಲ್ವಾನ್​ನಲ್ಲಿ ನಡೆದ ಭಾರತ ಹಾಗೂ ಚೀನಾ ಸೈನಿಕರ ನಡುವಿನ ಘರ್ಷಣೆಯನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಸಲ್ಲು ಅವರು ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ, ‘ಟಾಕ್ಸಿಕ್’ ಎದುರು ರಿಲೀಸ್ ಆಗಿ ಗೆಲ್ಲುವುದು ಅಷ್ಟು ಸುಲಭದಲ್ಲಿ ಇಲ್ಲ.

ಇದನ್ನೂ ಓದಿ: ‘ಟಾಕ್ಸಿಕ್’ಗೆ ಹೆದರಲ್ಲ, ಸಿನಿಮಾ ರಿಲೀಸ್ ಮಾಡಿಯೇ ಸಿದ್ಧ: ಹಠಕ್ಕೆ ಬಿದ್ದ ನಟ

‘ಟಾಕ್ಸಿಕ್’ ಸಿನಿಮಾ ವಿಶ್ವ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ ಹಾಗೂ ಇಂಗ್ಲಿಷ್​ನಲ್ಲಿ ಏಕ ಕಾಲಕ್ಕೆ ಶೂಟ್ ಆಗುತ್ತಿದೆ. ಸಿನಿಮಾದ ಬಜೆಟ್ ಕೂಡ ದೊಡ್ಡದಾಗಿದೆ. ಹೀಗಾಗಿ, ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲ್ಲುವ ನಿರೀಕ್ಷೆ ಇದೆ. ಒಂದೊಮ್ಮೆ ‘ಬ್ಯಾಟಲ್ ಆಫ್ ಗಲ್ವಾನ್’ ಚಿತ್ರಕ್ಕೆ ಸ್ವಲ್ಪ ನೆಗೆಟಿವ್ ವಿಮರ್ಶೆ ಸಿಕ್ಕರೂ ಅದು ದೊಡ್ಡ ಹೊಡೆತ ಕೊಡಲಿದೆ. ಇನ್ನು, ಈ ಸಮಯದಲ್ಲಿ ಅಜಯ್ ದೇವಗನ್ ನಟನೆಯ ‘ಧಮಾಲ್ 4’ ಕೂಡ ರಿಲೀಸ್ ಆಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!