AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್​​’ಗೆ ಸೆಡ್ಡು ಹೊಡೆಯಲು ದೊಡ್ಡ ತಂತ್ರ ರೂಪಿಸಿದ ‘ಧುರಂಧರ್’ ನಿರ್ದೇಶಕ

ಮಾರ್ಚ್ 19ರಂದು ಯಶ್‌ರ 'ಟಾಕ್ಸಿಕ್' ಮತ್ತು 'ಧುರಂಧರ್ 2' ಚಿತ್ರಗಳ ನಡುವೆ ಭಾರೀ ಬಾಕ್ಸ್ ಆಫೀಸ್ ಕ್ಲ್ಯಾಶ್ ಏರ್ಪಡಲಿದೆ. 'ಧುರಂಧರ್ 2' ಕನ್ನಡದಲ್ಲಿ ಬಿಡುಗಡೆ ಮಾಡುವ ಮೂಲಕ 'ಟಾಕ್ಸಿಕ್' ಚಿತ್ರದ ಮಾರುಕಟ್ಟೆಗೆ ಸವಾಲೆಸೆಯಲು ಸಿದ್ಧವಾಗಿದೆ. 'ಟಾಕ್ಸಿಕ್' ಟೀಸರ್ ಸೃಷ್ಟಿಸಿದ ಸಂಚಲನ ದೊಡ್ಡದಿದ್ದು, 'ಧುರಂಧರ್ 2' ಕೂಡ ಕನ್ನಡ ಪ್ರೇಕ್ಷಕರನ್ನು ಸೆಳೆಯಲು ಹೊಸ ತಂತ್ರ ಅನುಸರಿಸುತ್ತಿದೆ.

‘ಟಾಕ್ಸಿಕ್​​’ಗೆ ಸೆಡ್ಡು ಹೊಡೆಯಲು ದೊಡ್ಡ ತಂತ್ರ ರೂಪಿಸಿದ ‘ಧುರಂಧರ್’ ನಿರ್ದೇಶಕ
ರಣವೀರ್-ಯಶ್
ರಾಜೇಶ್ ಹೆಗಡೆ ದುಗ್ಗುಮನೆ
|

Updated on:Feb 03, 2026 | 10:41 AM

Share

ಮಾರ್ಚ್ 19ರಂದು ಕನ್ನಡದ ‘ಟಾಕ್ಸಿಕ್’ (Toxic Movie) ಹಾಗೂ ಹಿಂದಿಯ ‘ಧುರಂಧರ್ 2’ ಮಧ್ಯೆ ಬಾಕ್ಸ್ ಆಫೀಸ್ ಕ್ಲ್ಯಾಶ್ ಏರ್ಪಡುತ್ತಿದೆ. ‘ಧುರಂಧರ್’ ಸಿನಿಮಾ ಈಗಾಗಲೇ ತನ್ನನ್ನು ತಾನು ಸಾಬೀತು ಮಾಡಿಕೊಂಡಿದೆ. ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ಬಾಚಿಕೊಂಡಿದೆ. ಹೀಗಾಗಿ, ‘ಧುರಂಧರ್ 2’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಇನ್ನು, ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ಸಿಕ್ಕಿರೋ ಹೈಪ್ ಕಡಿಮೆ ಏನು ಇಲ್ಲ. ಈ ಎಲ್ಲಾ ಕಾರಣದಿಂದ ಎರಡೂ ಸಿನಿಮಾಗಳಲ್ಲಿ ಯಾವುದು ಗೆಲ್ಲುತ್ತದೆ ಎಂಬ ಕುತೂಹಲ ಮೂಡಿದೆ. ಈಗ ‘ಟಾಕ್ಸಿಕ್’ ಚಿತ್ರಕ್ಕೆ ಸೆಡ್ಡು ಹೊಡೆಯಲು ‘ಧುರಂಧರ್’ ತಂಡ ದೊಡ್ಡ ಪ್ಲ್ಯಾನ್ ಮಾಡಿದೆ.

‘ಧುರಂಧರ್’ ಸಿನಿಮಾ ಥಿಯೇಟರ್​​​ನಲ್ಲಿ ರಿಲೀಸ್ ಆಗಿದ್ದು ಹಿಂದಿಯಲ್ಲಿ ಮಾತ್ರ. ಹಿಂದಿ ಭಾಷೆ ಅರ್ಥವಾಗದೇ ಇದ್ದವರು ಕೂಡ ತೆರಳಿ ಸಿನಿಮಾ ನೋಡಿದ್ದಾರೆ. ಆದರೆ, ಕೆಲವರು ಹಿಂದಿ ಬರುವುದಿಲ್ಲ ಎಂಬ ಕಾರಣದಿಂದಲೇ ಸಿನಿಮಾ ನೋಡದೇ ಇದ್ದಿರಬಹುದು. ಈ ಪ್ರೇಕ್ಷಕರನ್ನು ಸೆಳೆಯಲು ಒಟಿಟಿಯಲ್ಲಿ ಹಿಂದಿ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ‘ಧುರಂಧರ್’ ಪ್ರಸಾರ ಕಂಡಿತು. ಆದರೆ, ಕನ್ನಡ ವರ್ಷನ್ ಇಲ್ಲದೆ ಇರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಈಗ ತಪ್ಪನ್ನು ತಿದ್ದಿಕೊಂಡಿದ್ದಾರೆ ನಿರ್ದೇಶಕ ಆದಿತ್ಯ ಧಾರ್.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾ ಟೀಸರ್​​ನಲ್ಲಿ ಅಶ್ಲೀಲತೆ: ಸಿಬಿಎಫ್​​ಸಿ ಮುಖ್ಯಸ್ಥ ಹೇಳಿದ್ದೇನು?

‘ಟಾಕ್ಸಿಕ್’ ಸಿನಿಮಾ ಕನ್ನಡದಲ್ಲಿ ದೊಡ್ಡ ಮಾರುಕಟ್ಟೆ ಪಡೆದುಕೊಳ್ಳೋದು ಫಿಕ್ಸ್. ಇದರ ಜೊತೆಗೆ ಪರಭಾಷೆಯಲ್ಲೂ ಸಿನಿಮಾಗೆ ಸಾಕಷ್ಟು ಕ್ರೇಜ್ ಇದೆ. ಇದು ಎಲ್ಲಾ ರೀತಿಯಲ್ಲೂ ‘ಧುರಂದರ್’ ಚಿತ್ರಕ್ಕೆ ತೊಂದರೆ ತಂದೊಡ್ಡಬಹುದು. ಈಗ ‘ಧುರಂಧರ್ 2’ ಚಿತ್ರವನ್ನು ಕನ್ನಡದಲ್ಲೂ ರಿಲೀಸ್ ಮಾಡೋದಾಗಿ ನಿರ್ದೇಶಕ ಆದಿತ್ಯ ಧಾರ್ ತಿಳಿಸಿದ್ದಾರೆ. ‘ಟಾಕ್ಸಿಕ್’ ಚಿತ್ರಕ್ಕೆ ಸೆಡ್ಡು ಹೊಡೆದು, ಈ ಚಿತ್ರದ ಮಾರುಕಟ್ಟೆಯನ್ನು ಕನ್ನಡಕ್ಕೂ ವಿಸ್ತರಿಸೋ ಆಲೋಚನೆ ಅವರದ್ದು.

‘ಟಾಕ್ಸಿಕ್’ ಸಿನಿಮಾದ ಟೀಸರ್ ಸೃಷ್ಟಿಸಿದ ಸಂಚಲನ ತುಂಬಾನೇ ದೊಡ್ಡದು. ಈ ಚಿತ್ರದ ಟೀಸರ್ ಸಾಕಷ್ಟು ಸದ್ದು ಮಾಡಿತು. ಈಗ ‘ಧುರಂಧರ್ 2’ ಟೀಸರ್ ಯಾವ ರೀತಿಯಲ್ಲಿ ಗಮನ ಸೆಳೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:39 am, Tue, 3 February 26

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ