AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ರಿಲೀಸ್ ಸಂದರ್ಭದಲ್ಲೇ ‘ಧುರಂಧರ್ 3’ ಸಿನಿಮಾ? ವೈರಲ್ ಪೋಸ್ಟ್ ಅಸಲಿಯತ್ತೇನು?

ಧುರಂಧರ್ 2 ಚಿತ್ರದ ಬ್ಲಾಕ್‌ಬಸ್ಟರ್ ಯಶಸ್ಸಿನ ನಡುವೆ, ಟಾಕ್ಸಿಕ್ ಚಿತ್ರದ ರಿಲೀಸ್ ಕುರಿತು ಚರ್ಚೆಗಳು ನಡೆದಿವೆ. 450 ಕೋಟಿ ಗಳಿಸಿದ ಧುರಂಧರ್ 2 ಎದುರು ಟಾಕ್ಸಿಕ್ ಬರಬೇಕಿತ್ತು. ಆದರೆ, ರಿಲೀಸ್ ಮುಂದೂಡಲ್ಪಟ್ಟಿದೆ. ಇದೇ ವೇಳೆ, ಧುರಂಧರ್ 3 ಜೂನ್ 14ರಂದು ಬರಲಿದೆ ಎಂಬ ಸುಳ್ಳು ಪೋಸ್ಟರ್ ವೈರಲ್ ಆಗಿದ್ದು, ಟಾಕ್ಸಿಕ್ ಅಭಿಮಾನಿಗಳಲ್ಲಿ ಗೊಂದಲ ಸೃಷ್ಟಿಸಿದೆ.

‘ಟಾಕ್ಸಿಕ್’ ರಿಲೀಸ್ ಸಂದರ್ಭದಲ್ಲೇ  ‘ಧುರಂಧರ್ 3’ ಸಿನಿಮಾ? ವೈರಲ್ ಪೋಸ್ಟ್ ಅಸಲಿಯತ್ತೇನು?
ಯಶ್
ರಾಜೇಶ್ ದುಗ್ಗುಮನೆ
|

Updated on:Mar 23, 2026 | 2:41 PM

Share

‘ಧುರಂಧರ್ 2’ vs ‘ಟಾಕ್ಸಿಕ್’ (Toxic Movie) ಎಂಬ ಪರಿಸ್ಥಿತಿ ನಿರ್ಮಾಣ ಆಗಿತ್ತು. ಆದರೆ, ಯಶ್ ನಟನೆಯ ‘ಟಾಕ್ಸಿಕ್’ ಚಿತ್ರ ತನ್ನ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿತ್ತು. ಈಗ ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಿ ಅಬ್ಬರಿಸುತ್ತಿದೆ. ವಿಶೇಷ ಎಂದರೆ, ಈ ಚಿತ್ರ ಕೇವಲ ನಾಲ್ಕು ದಿನಕ್ಕೆ 450 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರದ ಎದುರು ‘ಟಾಕ್ಸಿಕ್’ ತೆರೆಗೆ ಬಂದಿದ್ದರೆ ಏನಾಗುತ್ತಿತ್ತು ಎಂಬ ಪ್ರಶ್ನೆಯನ್ನು ಕೆಲವರು ಕೇಳುತ್ತಿದ್ದಾರೆ. ಈ ಮಧ್ಯೆ ‘ಟಾಕ್ಸಿಕ್’ ಸಿನಿಮಾ  ಸಂದರ್ಭದಲ್ಲೇ ‘ಧುರಂಧರ್ 3’ ಬರಲಿದೆಯೇ ಎಂಬ ಪ್ರಶ್ನೆ ಮೂಡಿದೆ.

‘ಧುರಂಧರ್’ ಸಿನಿಮಾ ಕ್ಲೈಮ್ಯಾಕ್ಸ್ ಅಲ್ಲಿ, ‘ಧುರಂಧರ್ 2’ ಸಿನಿಮಾ ಮಾರ್ಚ್ 19ಕ್ಕೆ ಬರಲಿದೆ ಎಂಬುದರ ಸ್ಪಷ್ಟ ಮಾಹಿತಿ ನೀಡಲಾಯಿತು. ಅದೇ ರೀತಿ, ‘ಧುರಂಧರ್ 2’ ಸಿನಮಾ ಯಶಸ್ಸಿನ ಬಳಿಕ ‘ಧುರಂಧರ್ 3’ ಬರಲಿದೆ ಎಂದು ಹೇಳಲಾಗಿತ್ತು. ಆದರೆ, ಕ್ಲೈಮ್ಯಾಕ್ಸ್​ ಅಲ್ಲಿ ಆ ರೀತಿಯ ಯಾವುದೇ ಮಾಹಿತಿ ಸಿಕ್ಕಿಲ್ಲ. ಆದಾಗ್ಯೂ ‘ಧುರಂಧರ್ 3’ ಜೂನ್ 14ರಂದು ಬರಲಿದೆ ಎಂಬ ಪೋಸ್ಟ್ ವೈರಲ್ ಮಾಡಿದ್ದಾರೆ.

ಈ ಪೋಸ್ಟರ್​ ಯಾರೋ ಉದ್ದೇಶಪೂರ್ವಕವಾಗಿ ಕ್ರಿಯೇಟ್ ಮಾಡಿರೋದು ಅನ್ನೋದು ಸ್ಪಷ್ಟವಾಗಿದೆ. ‘ಧುರಂಧರ್ 3’ ಸಿನಿಮಾ ಮುಂದಿನ ದಿನಗಳಲ್ಲಿ ಬರಬಹುದು ಎಂಬ ಊಹೆ ಇದೆಯೇ ಹೊರತು, ಸಿನಿಮಾ ರಿಲೀಸ್ ಆಗೋದನ್ನು ಯಾರೂ ಅಧಿಕೃತ ಮಾಡಿಲ್ಲ. ‘ಟಾಕ್ಸಿಕ್’ ಸಿನಿಮಾ ರಿಲೀಸ್​​ಗಾಗಿ ಕಾಯುತ್ತಿರುವವರಿಗೆ ಭಯಬೀಳಿಸಬೇಕು ಎಂಬುದಷ್ಟೇ ಈ ಪೋಸ್ಟರ್​​ನ ಉದ್ದೇಶ. ಹೀಗಾಗಿ, ಈ ಪೋಸ್ಟರ್​​​ನಲ್ಲಿ ಯಾವುದೇ ಸತ್ಯ ಇಲ್ಲ.

ಇದನ್ನೂ ಓದಿ: ‘ಧುರಂಧರ್ 2’ ಜೊತೆ ಕ್ಲ್ಯಾಶ್ ಮಿಸ್ ಮಾಡಿಕೊಂಡ ‘ಟಾಕ್ಸಿಕ್’ ಎದುರು ಬರ್ತಿವೆ ಡಜನ್ ಸಿನಿಮಾಗಳು

‘ಟಾಕ್ಸಿಕ್’ ಸಿನಿಮಾಗೆ ಯಶ್ ಹೀರೋ. ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ ಸೇರಿದಂತೆ ಅನೇಕರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಜೂನ್ 4ರಂದು ತೆರೆಗೆ ಬರಲಿದೆ. ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಿ ಅಬ್ಬರಿಸಲಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಯಾವ ರೀತಿಯಲ್ಲಿ ಇರಲಿದೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:31 pm, Mon, 23 March 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ