ತುಕಾಲಿ ಸಂತೋಷ್ ಕಾರು ಅಪಘಾತ ಪ್ರಕರಣ; ಚಿಕಿತ್ಸೆ ಫಲಿಸದೆ ಆಟೋ ಚಾಲಕ ಸಾವು

Tukali Santhosh Car Accident: ಕುಣಿಗಲ್​ನಿಂದ ಕುರುಡಿಹಳ್ಳಿಗೆ ಆಟೋ ತೆರಳುತ್ತಿತ್ತು. ತುಕಾಲಿ ಸಂತೋಷ್​ ಕಾರಿನ ಬಲ ಭಾಗಕ್ಕೆ ಆಟೋ ಡಿಕ್ಕಿ ಹೊಡೆದಿದೆ. ಆಟೋ ಬಹುತೇಕ ನಜ್ಜುಗುಜ್ಜಾಗಿತ್ತು. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ಅಪಘಾತ ನಡೆದಿದೆ. ಈಗ ಆಟೋ ಚಾಲಕ ಕೊನೆಯುಸಿರು ಎಳೆದಿದ್ದಾರೆ.

ತುಕಾಲಿ ಸಂತೋಷ್ ಕಾರು ಅಪಘಾತ ಪ್ರಕರಣ; ಚಿಕಿತ್ಸೆ ಫಲಿಸದೆ ಆಟೋ ಚಾಲಕ ಸಾವು
ತುಕಾಲಿ ಸಂತೋಷ್
Edited By:

Updated on: Mar 14, 2024 | 9:49 AM

ತುಕಾಲಿ ಸಂತೋಷ್ (Tukali Santhosh) ಅವರು ಇತ್ತೀಚೆಗೆ ಹೊಸ ಕಾರು ಖರೀದಿಸಿದ್ದು ಸಾಕಷ್ಟು ಸುದ್ದಿ ಆಗಿತ್ತು. ಕನಸು ನನಸಾಯಿತು ಎಂದು ಹೇಳಿಕೊಂಡಿದ್ದರು. ಮಾರ್ಚ್ 13ರ ಸಂಜೆ ಈ ಕಾರು ಅಪಘಾತಕ್ಕೆ ಒಳಗಾಗಿತ್ತು. ಆಟೋ ಹಾಗೂ ತುಕಾಲಿ ಸಂತೋಷ್ ಕಾರಿನ ಮಧ್ಯೆ ಅಪಘಾತ ಸಂಭವಿಸಿತ್ತು. ತೀವ್ರವಾಗಿ ಗಾಯಗೊಂಡ ಆಟೋ ಚಾಲಕ ಜಗದೀಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಘಟನೆ ನಡೆದಿದ್ದು ಎಲ್ಲಿ?

ತುಕಾಲಿ ಸಂತೋಷ್ ಅವರು ಹೊಳೆನರಸೀಪುರದವರು. ತುಕಾಲಿ ಸಂತೋಷ್​ ಅವರು ತಮ್ಮ ಕಾರಿನಲ್ಲಿ ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ಹೋಗುತ್ತಿದ್ದರು. ಅದೇ ವೇಳೆ ಕುಣಿಗಲ್​ನಿಂದ ಕುರುಡಿಹಳ್ಳಿಗೆ ಆಟೋ ತೆರಳುತ್ತಿತ್ತು. ತುಕಾಲಿ ಸಂತೋಷ್​ ಕಾರಿನ ಬಲ ಭಾಗಕ್ಕೆ ಆಟೋ ಡಿಕ್ಕಿ ಹೊಡೆದಿದೆ. ಆಟೋ ಬಹುತೇಕ ನಜ್ಜುಗುಜ್ಜಾಗಿತ್ತು. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ಅಪಘಾತ ನಡೆದಿದೆ.

ಆಸ್ಪತ್ರೆಗೆ ದಾಖಲು

ಗಾಯಗೊಂಡಿದ್ದ ಆಟೋ ಚಾಲಕ ಜಗದೀಶ್ ಅವರನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಇಂದು (ಮಾರ್ಚ್ 14) ಮುಂಜಾನೆ ಮೃತಪಟ್ಟಿದ್ದಾರೆ. ಜಗದೀಶ್ ಅವರಿಗೆ 40 ವರ್ಷ ವಯಸ್ಸಾಗಿತ್ತು. ಅವರ ಅಗಲುವಿಕೆ ಕುಟುಂಬಕ್ಕೆ ತೀವ್ರ ನೋವುಂಟು ಮಾಡಿದೆ.

ಇದನ್ನೂ ಓದಿ: ಕಾರು ಅಪಘಾತದ ಬಳಿಕ ಮಾತನಾಡಿದ ತುಕಾಲಿ ಸಂತೋಷ್

ತುಕಾಲಿ ಸಂತೋಷ್ ಬಗ್ಗೆ

ತುಕಾಲಿ ಸಂತೋಷ್ ಅವರು ಹಲವು ರಿಯಾಲಿಟಿ ಶೋಗಳ ಮೂಲಕ ಫೇಮಸ್ ಆಗಿದ್ದಾರೆ. ‘ಗಿಚ್ಚಿ ಗಿಲಿ ಗಿಲಿ ಸೀಸನ್ 3’, ‘ಜೋಡಿ ನಂಬರ್ 1’, ‘ಕಾಮಿಡಿ ಕಿಲಾಡಿಗಳು 3’ ರಿಯಾಲಿಟಿ ಶೋಗಳ ಮೂಲಕ ಅವರು ಜನಪ್ರಿಯತೆ ಪಡೆದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ಗೆ ಕಾಲಿಟ್ಟು ಮತ್ತಷ್ಟು ಖ್ಯಾತಿ ಪಡೆದರು. ವರ್ತೂರು ಸಂತೋಷ್ ಜೊತೆಗಿನ ಗೆಳೆತನದ ಕಾರಣದಿಂದಲೂ ತುಕಾಲಿ ಸಂತೋಷ್ ಸುದ್ದಿ ಆದರು. ಈಗ ಕಾರು ಅಪಘಾತದ ಮೂಲಕ ಸುದ್ದಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:44 am, Thu, 14 March 24