AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಕ್ಷಕರ ಮೈ ಮೇಲೆ ದೈವ ಬರಲು ಸಾಧ್ಯವೇ ಇಲ್ಲ: ತುಳು ಕೂಟದ ಅಧ್ಯಕ್ಷ ಸುಂದರ್ ರಾಜ್ ರೈ ಸ್ಪಷ್ಟನೆ

ದೈವದ ಕಥೆ ಹೊಂದಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೂಪರ್ ಹಿಟ್ ಆಗಿದೆ. ಆದರೆ ಸಿನಿಮಾ ನೋಡಿದ ಕೆಲವರು ಚಿತ್ರಮಂದಿರದಲ್ಲಿ ದೈವ ನರ್ತಕರ ರೀತಿ ವರ್ತಿಸುತ್ತಿದ್ದಾರೆ. ಇದನ್ನು ತುಳು ಕೂಟ ಕೂಡ ಖಂಡಿಸಿದೆ. ಅಧ್ಯಕ್ಷ ಸುಂದರ್ ರಾಜ್ ರೈ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಪ್ರೇಕ್ಷಕರ ಮೈ ಮೇಲೆ ದೈವ ಬರಲು ಸಾಧ್ಯವೇ ಇಲ್ಲ: ತುಳು ಕೂಟದ ಅಧ್ಯಕ್ಷ ಸುಂದರ್ ರಾಜ್ ರೈ ಸ್ಪಷ್ಟನೆ
Sundar Raj Rai
Malatesh Jaggin
| Updated By: ಮದನ್​ ಕುಮಾರ್​|

Updated on:Oct 07, 2025 | 5:17 PM

Share

ಅಕ್ಟೋಬರ್ 2ರಂದು ಬಿಡುಗಡೆ ಆದ ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾ ಎಲ್ಲ ಕಡೆಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಆದರೆ ಈ ಸಿನಿಮಾ ನೋಡಿದ ನಂತರ ಕೆಲವರು ವಿಚಿತ್ರವಾಗಿ ವರ್ತಿಸುತ್ತಿದ್ದಾರೆ. ಅಂಥವರಿಗೆ ತುಳುಕೂಟ (Tulu Koota) ಎಚ್ಚರಿಕೆ ನೀಡಿದೆ. ದೈವದ ಅನುಕರಣೆಯನ್ನು ಖಂಡಿಸಲಾಗಿದೆ. ಈ ಬಗ್ಗೆ ತುಳು ಕೂಟದ ಅಧ್ಯಕ್ಷ ಸುಂದರ್ ರಾಜ್ ರೈ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಅಭಿಮಾನಿಗಳಿಗೆ ಬುದ್ಧಿ ಹೇಳಬೇಕು ಎಂದು ರಿಷಬ್ ಶೆಟ್ಟಿ (Rishab Shetty) ಅವರಿಗೆ ತುಳು ಕೂಟ ಪತ್ರ ಬರೆದಿದೆ.

‘ನಾವು ಪತ್ರ ಬರೆದಿರುವುದು ಸಿನಿಮಾದ ಬಗ್ಗೆ ಅಲ್ಲ. ಸಿನಿಮಾ ಮಾಡಲಿ, ಪ್ರಪಂಚಕ್ಕೆ ತೋರಿಸಲಿ. ಅದನ್ನು ಒಪ್ಪಿಕೊಳ್ಳುತ್ತೇವೆ. ಆದರೆ ಚಿತ್ರಮಂದಿರದಲ್ಲಿ ಪ್ರೇಕ್ಷಕರ ಮೈಮೇಲೆ ಬರುವುದು, ವೇಷ ಹಾಕಿಕೊಂಡು ಓಡಾಡುವುದು ಸರಿಯಲ್ಲ. ಬರೀ ಕರ್ನಾಟಕದಲ್ಲಿ ಆದರೆ ನಾವು ಕ್ರಮ ತೆಗೆದುಕೊಳ್ಳಬಹುದು. ದಕ್ಷಿಣ ಭಾರತದ ಬೇರೆ ಬೇರೆ ಕಡೆ ಹೀಗೆಯೇ ಆಗುತ್ತಿದೆ. ಅದು ನಮಗೆ ಯೋಚನೆ ಆಗುತ್ತಿದೆ. ನಮ್ಮ ಸಂಸ್ಕೃತಿ ಮೇಲೆ ದಾಳಿ ಆಗುತ್ತಾ ಎಂಬ ಹೆದರಿಕೆಯಿಂದ ನಾನು ರಿಷಬ್ ಶೆಟ್ಟಿಗೆ ಪತ್ರ ಬರೆದಿದ್ದೇನೆ’ ಎಂದಿದ್ದಾರೆ ಸುಂದರ್ ರಾಜ್ ರೈ.

‘ಪತ್ರಕ್ಕೆ ರಿಷಬ್ ಶೆಟ್ಟಿ ಅವರಿಂದ ಇನ್ನೂ ಉತ್ತರ ಬಂದಿಲ್ಲ. ರಿಷಬ್ ಶೆಟ್ಟಿಗೆ ನಾವು ಮನವಿ ಮಾಡಿದ್ದೇನೆಂದೆರೆ, ನೀವು ಸೆಲೆಬ್ರಿಟಿ ಆಗಿದ್ದೀರಿ. ಅದು ಸಂತೋಷದ ವಿಚಾರ. ಒಮ್ಮೆ ಸುದ್ದಿಗೋಷ್ಠಿ ಕರೆದು ಅಭಿಮಾನಿಗಳಿಗೆ ಕಿವಿಮಾತು ಹೇಳಿ. ಅಷ್ಟೇ ನಮ್ಮ ಬೇಡಿಕೆ’ ಎಂದು ಸುಂದರ್ ರಾಜ್ ರೈ ಅವರು ಹೇಳಿದ್ದಾರೆ.

‘ಹಿಂದೂ ಸಂಸ್ಕೃತಿ ಮೇಲೆ, ಸ್ಥಳೀಯ ಸಂಸ್ಕೃತಿ ಮೇಲೆ ಬೇರೆ ಬೇರೆ ಕಾರಣಕ್ಕೆ ದಾಳಿ ಆಗುತ್ತಿದೆ. ಈಗಲೇ ಅದನ್ನು ನಿಯಂತ್ರಿಸುವುದು ಒಳ್ಳೆಯದು. ಹಾಗಾಗಿ ಇಂದೇ ನಾವು ಮೊದಲ ಕ್ರಮ ತೆಗೆದುಕೊಂಡಿದ್ದೇವೆ. ಈಗಾಗಲೇ ಧರ್ಮಸ್ಥಳದ ಬಗ್ಗೆ ಆಗುತ್ತಿದೆ. ಶಬರಿಮಲೆ ಬಗ್ಗೆ ಆಗಿದೆ. ಪೊಲೀಸ್ ಇಲಾಖೆಯವರು ಈಗಲೇ ಕ್ರಮ ತೆಗೆದುಕೊಳ್ಳುವುದು ಒಳ್ಳೆಯದು. ಅದಕ್ಕೆ ಇವರು ಮನವಿ ಮಾಡುವುದು ಒಳ್ಳೆಯದು’ ಎಂದಿದ್ದಾರೆ ಸುಂದರ್ ರಾಜ್ ರೈ.

ಇದನ್ನೂ ಓದಿ: ದೈವದ ವೇಷ ಧರಿಸಿ ಚಿತ್ರಮಂದಿರದ ಒಳಗೆ ಕುಣಿದಾಡಿದ ಕಾಂತಾರ ಪ್ರೇಕ್ಷಕ

ಚಿತ್ರಮಂದಿರದಲ್ಲಿ ಪ್ರೇಕ್ಷಕರ ಮೇಲೆ ದೈವ ಬರುವುದು ನಿಜವಲ್ಲ ಎಂದು ಸುಂದರ್ ರಾಜ್ ರೈ ಹೇಳಿದ್ದಾರೆ. ‘ಅವರನ್ನು ಮೊದಲು ನನ್ನ ಬಳಿ ಕರೆದುಕೊಂಡು ಬನ್ನಿ. ಆ ರೀತಿ ಬರೋಕೆ ಸಾಧ್ಯವೇ ಇಲ್ಲ. ಅದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಸಂಬಂಧಪಟ್ಟ ವಿಚಾರ. ಅದನ್ನು ಬೆಂಗಳೂರಿಗೆ, ಮೈಸೂರಿಗೆ ತರಲು ನೋಡಿದರು. ಅದು ಯಶಸ್ವಿ ಆಗಲಿಲ್ಲ. ಯಾವುದೇ ಕಾರಣಕ್ಕೂ ಮೈಮೇಲೆ ಬರೋಕೆ ಸಾಧ್ಯವೇ ಇಲ್ಲ’ ಎಂದು ಸುಂದರ್ ರಾಜ್ ರೈ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:17 pm, Tue, 7 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ