ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ತುಳುವಿನ ಜನಪ್ರಿಯ ನಿರ್ದೇಶಕ ದೇವದಾಸ್ ಕಾಪಿಕಾಡ್

Sandalwood news: ತುಳು ಚಿತ್ರರಂಗದಲ್ಲಿ ನಿರ್ದೇಶಕ ಹಾಗೂ ನಟನಾಗಿ ಹೆಸರು ಗಳಿಸಿರುವ ದೇವದಾಸ್ ಕಾಪಿಕಾಡ್ ‘ಪುರುಷೋತ್ತಮ ಪ್ರಸಂಗ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ತುಳುವಿನ ಜನಪ್ರಿಯ ನಿರ್ದೇಶಕ ದೇವದಾಸ್ ಕಾಪಿಕಾಡ್
Follow us
ಮಂಜುನಾಥ ಸಿ.
|

Updated on: Jan 14, 2024 | 10:28 PM

ತುಳು ಚಿತ್ರರಂಗದಲ್ಲಿ (Coastalwood) ನಟನಾಗಿ, ನಿರ್ದೇಶಕನಾಗಿ ಹೆಸರು ಮಾಡಿರುವ ದೇವದಾಸ್ ಕಾಪಿಕಾಡ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣ ಮಾಡಿರುವ “ಪುರುಷೋತ್ತಮನ‌ ಪ್ರಸಂಗ” ಸಿನಿಮಾವನ್ನು ನಿರ್ದೇಶಕ ದೇವದಾಸ್ ಕಾಪಿಕಾಡ್ ನಿರ್ದೇಶಿಸಿದ್ದಾರೆ. ಭಿನ್ನ ಕತೆ ಹೊಂದಿರುವ ಈ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಫೆಬ್ರವರಿಯಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.

ನಿರ್ದೇಶಕ ದೇವದಾಸ್ ಕಾಪಿಕಾಡ್ ಮಾತನಾಡಿ, ‘ತುಳು ಭಾಷೆಯಲ್ಲಿ ಒಂಭತ್ತು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ ಕನ್ನಡದಲ್ಲಿ ನನಗೆ ಮೊದಲ ಸಿನಿಮಾ. ಈ ಚಿತ್ರ ನಿರ್ದೇಶಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. “ಪುರುಷೋತ್ತಮನ ಪ್ರಸಂಗ” ಕೌಟುಂಬಿಕ ಕಥಾಹಂದರ ಹೊಂದಿರುವ ನೈಜಘಟನೆ ಆಧಾರಿತ ಸಿನಿಮಾ. ಪುರುಷೋತ್ತಮ ನ ಪಾತ್ರದಲ್ಲಿ ನಿರ್ಮಾಪಕ ರವಿಕುಮಾರ್ ಅವರ ಪುತ್ರ ಅಜಯ್ ಅಭಿನಯಿಸಿದ್ದಾರೆ. ಈ ಪಾತ್ರಕ್ಕೆ ಹೇಳಿಮಾಡಿಸಿದ ನಟ ಅಜಯ್. ಹೊರದೇಶದಲ್ಲಿ ಸಿನಿಮಾ ಕುರಿತು ಅಧ್ಯಯನ ಮಾಡಿ ಬಂದಿದ್ದಾರೆ. ರಿಷಿಕಾ ನಾಯ್ಕ್ ಈ ಚಿತ್ರದ ನಾಯಕಿ’ ಎಂದರು.

ಇದನ್ನೂ ಓದಿ:ಸ್ಯಾಂಡಲ್​ವುಡ್ ಜೊತೆ ನಂಟಿರುವ ಬಾಲಿವುಡ್​ನ ಖ್ಯಾತ ನಟಿಯ ಪುತ್ರಿ ಈಕೆ: ಯಾರು ಗುರುತಿಸಬಲ್ಲಿರಾ?

ತುಳು ಸಿನಿಮಾ ರಂಗದ ಜನಪ್ರಿಯ ನಟರಾದ ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು ಮುಂತಾದ ಕಲಾವಿದರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರು ಸಹ ಪ್ರಮುಖ ಪಾತ್ರವೊಂದನ್ನು ನಟಿಸಿದ್ದಾರೆ. ದೇವದಾಸ್ ಕಾಪಿಕಾಡ್ ಪುತ್ರ ಅರ್ಜುನ್ ಈ ಸಿನಿಮಾಕ್ಕೆ ಸಹ ನಿರ್ದೇಶಕನಾಗಿ ದುಡಿಯಲಿದ್ದಾರೆ. ನಕುಲ್ ಅಭಯಂಕರ್ ಅವರ ಸಂಗೀತ ನಿರ್ದೇಶನ ಮಾಡಿದ್ದು ಸಿನಿಮಾದಲ್ಲಿ ನಾಲ್ಕು ಹಾಡುಗಳಿವೆ. ಜಯಂತ ಕಾಯ್ಕಿಣಿ, ದೊಡ್ಡರಂಗೇ ಗೌಡ, ವಿ.ನಾಗೇಂದ್ರ ಪ್ರಸಾದ್ ಹಾಗೂ ನಿರ್ದೇಶಕರು ತಲಾ ಒಂದೊಂದು ಹಾಡುಗಳನ್ನು ಬರೆದಿದ್ದಾರೆ. ಛಾಯಾಗ್ರಾಹಕರಾಗಿ ವಿಷ್ಣು ದುಡಿದಿದ್ದಾರೆ. ಸಿನಿಮಾವನ್ನು ಮಂಗಳೂರು ಹಾಗೂ ದುಬೈನಲ್ಲಿ ಚಿತ್ರೀಕರಣ ಮಾಡಲಾಗಿದೆ. ಫೆಬ್ರವರಿ ಮಧ್ಯ ಭಾಗದಲ್ಲಿ ಸಿನಿಮಾ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿದ್ದಾರೆ.

‘ನಾನು ಈ ಹಿಂದೆ “ಕಿಸ್”, ” ಮೆಹಬೂಬ “, “ನಾಟ್ ಔಟ್” ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ನಾಯಕನಾಗಿ ನಟಿಸಿರುವ ಮೊದಲ ಸಿನಿಮಾ ಇದು. ತುಳು ರಂಗಭೂಮಿ ಹಾಗೂ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರ ನಿರ್ದೇಶನದಲ್ಲಿ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನನ್ನ ಪಾತ್ರವೂ ಚೆನ್ನಾಗಿದೆ’ ಎಂದರು ನಾಯಕ ಅಜಯ್.

ನಾಯಕಿ ರಿಷಿಕಾ ನಾಯ್ಕ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನಿರ್ಮಾಪಕರಾದ ವಿ.ರವಿಕುಮಾರ್, ಶಂಶುದ್ದೀನ್ ಚಿತ್ರದ ಕುರಿತು ಮಾತನಾಡಿದರು. ಶರ್ಮಿಳಾ ಕಾಪಿಕಾಡ್ ಚಿತ್ರಕ್ಕೆ ಶುಭ ಹಾರೈಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್