Kichcha Sudeep: ‘ನಿಮ್ಮ ಖಾಸಗಿ ವಿಡಿಯೋ ಲೀಕ್​ ಮಾಡ್ತೀವಿ’; ಸುದೀಪ್​ಗೆ ಬಂತು ಎರಡು ಬೆದರಿಕೆ ಪತ್ರ

ಸುದೀಪ್ ಅವರ ಮ್ಯಾನೇಜರ್ ಜಾಕ್ ಮಂಜುಗೆ ಈ ಪತ್ರ ಸಿಕ್ಕಿದೆ ಎನ್ನಲಾಗಿದೆ. ಈ ಪತ್ರದಲ್ಲಿ ಸುದೀಪ್ ಬಗ್ಗೆ ಕೆಟ್ಟ ಪದಗಳ ಬಳಕೆ ಆಗಿದೆ.

Kichcha Sudeep: ‘ನಿಮ್ಮ ಖಾಸಗಿ ವಿಡಿಯೋ ಲೀಕ್​ ಮಾಡ್ತೀವಿ’; ಸುದೀಪ್​ಗೆ ಬಂತು ಎರಡು ಬೆದರಿಕೆ ಪತ್ರ
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on:Apr 05, 2023 | 8:28 AM

ಕಿಚ್ಚ ಸುದೀಪ್ ಅವರು ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ. ಈ ಬಗ್ಗೆ ಇಂದು (ಏಪ್ರಿಲ್ 5) ಮಧ್ಯಾಹ್ನ ಸ್ಪಷ್ಟ ಚಿತ್ರಣ ಸಿಗಲಿದೆ. ಈ ಮಧ್ಯೆ ಕಿಚ್ಚ ಸುದೀಪ್ (Kichcha Sudeep) ಅವರಿಗೆ ಎರಡು ಬೆದರಿಕೆ ಪತ್ರ ಬಂದಿದೆ. ಇದರಲ್ಲಿ ಕಿಚ್ಚ ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಪತ್ರ ಕಳುಹಿಸಿದ್ದು ಯಾರು ಎನ್ನುವ ಹುಡುಕಾಟ ನಡೆಯುತ್ತಿದೆ.

ಸುದೀಪ್ ಅವರ ಮ್ಯಾನೇಜರ್ ಜಾಕ್ ಮಂಜುಗೆ ಈ ಪತ್ರ ಸಿಕ್ಕಿದೆ ಎನ್ನಲಾಗಿದೆ. ಈ ಪತ್ರದಲ್ಲಿ ಸುದೀಪ್ ಬಗ್ಗೆ ಕೆಟ್ಟ ಪದಗಳ ಬಳಕೆ ಆಗಿದೆ. ಸುದೀಪ್ ಅವರ ಖಾಸಗಿ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಲಾಗಿದೆ. ಇದರಿಂದ ಸುದೀಪ್​ಗೆ ಮಾನಸಿಕ ಕಿರುಕುಳ ಆಗಿದೆ. ‘ನಟನ ಘನತೆಗೆ ಧಕ್ಕೆ ತರಲು ಮಾಡಿರೋ ಸಂಚು’ ಎಂದು ಮಂಜು ಅವರು ದೂರಿದ್ದಾರೆ.

ಇದನ್ನೂ ಓದಿ: Kichcha Sudeep: ಬಿಜೆಪಿ ಜೊತೆ ಕೈ ಜೋಡಿಸಲು ಸಜ್ಜಾದ ಸುದೀಪ್​? ಕಿಚ್ಚನ ರಾಜಕೀಯ ಎಂಟ್ರಿ ಬಗ್ಗೆ ದೊಡ್ಡ ಸುದ್ದಿ

ಸದ್ಯ ಪುಟ್ಟೇನಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 506, ಸೆಕ್ಷನ್ 504 ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಈ ಪತ್ರ ಎಲ್ಲಿಂದ ಬಂತು, ಯಾರು ಕಳುಹಿಸಿದ್ದು ಎನ್ನುವ ತನಿಖೆ ನಡೆಯುತ್ತಿದೆ. ಈ ಪ್ರಕರಣವನ್ನು ಸಿಸಿಬಿಗೆ ವಹಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸುದೀಪ್ ರಾಜಕೀಯ ನಿಲುವೇನು?

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಸುದೀಪ್ ಕೂಡ ಭಾಗವಹಿಸುವ ಸಾಧ್ಯತೆ ಇದೆ. ಖಾಸಗಿ ಹೋಟೆಲ್​ನಲ್ಲಿ ಈ ಪ್ರೆಸ್​ಮೀಟ್​ ನಡೆಯಲಿದೆ. ಸುದ್ದಿಗೋಷ್ಠಿ ವೇಳೆ ಸುದೀಪ್ ಅವರು ಬಿಜೆಪಿಗೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ. ಆದರೆ, ಅವರು ಪಕ್ಷ ಸೇರುತ್ತಾರೆ ಎಂಬುದು ಬಹುತೇಕ ಅನುಮಾನವೇ.

ಸುದೀಪ್ ಅವರು ಬಿಜೆಪಿ ಪ್ರಚಾರ ರಾಯಭಾರಿ ಆದರೆ ಪಕ್ಷಕ್ಕೆ ದೊಡ್ಡ ಬಲ ಸಿಕ್ಕಂತೆ ಆಗಲಿದೆ. ಬಿಜೆಪಿ ಪಕ್ಷದ ಪರ ಅವರ ಅಭಿಮಾನಿಗಳು ಪ್ರಚಾರ ಮಾಡಲಿದ್ದಾರೆ. ಸುದೀಪ್​ಗೆ ದೊಡ್ಡ ಅಭಿಮಾನಿ ವರ್ಗ ಇದೆ. ಅವರು ಪಕ್ಷದ ಪರ ಪ್ರಚಾರ ಮಾಡಿದರೆ ದೊಡ್ಡ ಬಲ ಸಿಕ್ಕಂತೆ ಆಗಲಿದೆ ಅನ್ನೋದು ಬಿಜೆಪಿ ಆಲೋಚನೆ. ಈ ಕಾರಣಕ್ಕೆ ಸುದೀಪ್​ಗೆ ಆಫರ್ ನೀಡಲಾಗಿತ್ತು. ಅವರು ಕಮಲದ ಪರ ಪ್ರಚಾರ ಮಾಡಲು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಇಂದು ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:23 am, Wed, 5 April 23

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು