ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್​ಗೆ ಮುಳುವಾಗುತ್ತಾ ಈ ಇಬ್ಬರ ವಿಚಾರಣೆ?

ದರ್ಶನ್ ಆಪ್ತರು, ಪ್ರಕರಣಕ್ಕೆ ಸಂಬಂಧಿಸಿದವರು ವಿಚಾರಣೆ ವೇಳೆ ಯಾವ ರೀತಿಯ ಮಾಹಿತಿ ಹಂಚಿಕೊಳ್ಳುತ್ತಾರೆ ಅನ್ನೋದು ತುಂಬಾನೇ ಮುಖ್ಯ ಆಗುತ್ತದೆ. ಈ ಮಾಹಿತಿಯನ್ನು ಆಧಿರಿಸಿ ಪೊಲೀಸರು ಮುಂದಿನ ತನಿಖೆ ನಡೆಸುತ್ತಾರೆ. ಕೆಲವು ಮಾಹಿತಿಗಳು ದರ್ಶನ್​ಗೆ ಮುಳುವಾದರೂ ಆಗಬಹುದು.

ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್​ಗೆ ಮುಳುವಾಗುತ್ತಾ ಈ ಇಬ್ಬರ ವಿಚಾರಣೆ?
ದರ್ಶನ್
Follow us
Malatesh Jaggin
| Updated By: ರಾಜೇಶ್ ದುಗ್ಗುಮನೆ

Updated on: Jul 06, 2024 | 11:26 AM

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಈಗಾಗಲೇ ದರ್ಶನ್​, ಪವಿತ್ರಾ ಗೌಡ ಸೇರಿ ಅನೇಕರ ಬಂಧನ ನಡೆದಿದೆ. ಪ್ರಕರಣದ ಜೊತೆ, ದರ್ಶನ್ ಜೊತೆ ಲಿಂಕ್ ಹೊಂದಿರೋ ಎಲ್ಲರನ್ನೂ ವಿಚಾರಣೆ ಮಾಡಲಾಗುತ್ತಿದೆ. ಈ ವೇಳೆ ಯಾವೆಲ್ಲ ಮಾಹಿತಿ ಹೊರ ಬೀಳುತ್ತದೆ ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ದರ್ಶನ್ ಕೊಲೆ ಕೇಸ್​ನಲ್ಲಿ ಇಂದು (ಜುಲೈ 6) ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಇದರಿಂದ ದರ್ಶನ್​ಗೆ ಸಂಕಷ್ಟ ಎದುರಾಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಕಾರು ಚಾಲಕ ಕಾರ್ತಿಕ್ ಪುರೋಹಿತ್, ನಿರ್ದೇಶಕ ಮಿಲನ ಪ್ರಕಾಶ್​ ಅವರನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಬರುವಂತೆ ಹೇಳಲಾಗಿದೆ. ಜುಲೈ 5ರಂದು ಒಂದುವರೇ ಗಂಟೆ ಮಿಲನ ಪ್ರಕಾಶ್ ಅವರ ವಿಚಾರಣೆ ಮಾಡಲಾಗಿತ್ತು. ದರ್ಶನ್ ಜೊತೆಗಿನ ಹಣಕಾಸಿನ ವ್ಯವಹಾರ ಸಂಬಂಧ ವಿಚಾರಣೆ ನಡೆಸಲಾಗಿತ್ತು. ಇಂದು ದಾಖಲೆಗಳ ಸಮೇತ ಮತ್ತೆ ‌ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಕಾರು ಚಾಲಕ ಕಾರ್ತಿಕ್ ಪುರೋಹಿತ್​ಗೆ ಎರಡನೇ ಬಾರಿಗೆ ನೋಟಿಸ್ ನೀಡಲಾಗಿದೆ. ಕಾರ್ತಿಕ್ ಪುರೋಹಿತ್ ಅವರು ಆರೋಪಿ ಪ್ರದೋಷ್​ಗೆ ಆಪ್ತ ಎನಿಸಿಕೊಂಡಿದ್ದಾರೆ. ಜೊತೆಗೆ ಕೊಲೆ ಪ್ರಕರಣದ ವೇಳೆ ಆರೋಪಿಗಳ ಜೊತೆಗಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಇಬ್ಬರನ್ನು ಎಸಿಪಿ ಚಂದನ್ ವಿಚಾರಣೆ ನಡೆಸಲಿದ್ದಾರೆ.

ಇದನ್ನೂ ಓದಿ: ‘ಅಕ್ಟೋಬರ್​ ನಂತರವೇ ದರ್ಶನ್​ಗೆ ಏಳ್ಗೆ, ಅಲ್ಲಿಯವರೆಗೆ ಜೈಲೇ ಗತಿ’; ವಿದ್ಯಾ ಶಂಕರಾನಂದ ಸರಸ್ವತಿ

ದರ್ಶನ್ ಆಪ್ತರು ವಿಚಾರಣೆ ವೇಳೆ ಯಾವ ರೀತಿಯ ಮಾಹಿತಿ ಹಂಚಿಕೊಳ್ಳುತ್ತಾರೆ ಅನ್ನೋದು ತುಂಬಾನೇ ಮುಖ್ಯ ಆಗುತ್ತದೆ. ಈ ಮಾಹಿತಿಯನ್ನು ಆಧಿರಿಸಿ ಪೊಲೀಸರು ಮುಂದಿನ ತನಿಖೆ ನಡೆಸುತ್ತಾರೆ. ಕೆಲವು ಮಾಹಿತಿಗಳು ದರ್ಶನ್​ಗೆ ಮುಳುವಾದರೂ ಆಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ