ಇಬ್ಬರಿಗೆ ಪುನೀತ್ ರಾಜ್​ಕುಮಾರ್ ಕಣ್ಣುಗಳು ಅಳವಡಿಕೆ; ನಾರಾಯಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಅಪ್ಪ ಡಾ.ರಾಜ್​ಕುಮಾರ್ ಹಾದಿಯಲ್ಲೇ ಸಾಗಿದ ಪುನೀತ್ ಕಣ್ಣುಗಳನ್ನು ದಾನ ಮಾಡಿದ್ದಾರೆ. ಈ ಮೂಲಕ ಇಬ್ಬರ ಬಾಳಿನಲ್ಲಿ ಬೆಳಕಾಗಿದ್ದಾರೆ.

ಇಬ್ಬರಿಗೆ ಪುನೀತ್ ರಾಜ್​ಕುಮಾರ್ ಕಣ್ಣುಗಳು ಅಳವಡಿಕೆ; ನಾರಾಯಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
ಪುನೀತ್ ರಾಜ್​​ಕುಮಾರ್
Follow us
TV9 Web
| Updated By: sandhya thejappa

Updated on:Oct 31, 2021 | 1:13 PM

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅಕಾಲಿಕ ಅಗಲಿಕೆಯಿಂದ ಇಡೀ ಕರುನಾಡು ಸೂತಕದ ವಾತಾವರಣದಿಂದ ಕೂಡಿದೆ. ಕೋಟ್ಯಾಂತರ ಅಭಿಮಾನಿಗಳು ಅಪ್ಪು ನಿಧನಕ್ಕೆ ಕಣ್ಣೀರು ಹಾಕಿದ್ದಾರೆ. ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದೆ ಕೆಲ ಅಭಿಮಾನಿಗಳಿಗೆ ಹೃದಯಾಘಾತವಾಗಿದೆ. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ಹೊರ ರಾಜ್ಯ, ಹೊರ ದೇಶಗಳಲ್ಲೂ ಪುನೀತ್ ಅಭಿಮಾನಿಗಳನ್ನು ಹೊಂದಿದ್ದಾರೆ. ಅಜಾತಶತ್ರು ಪವರ್ ಸ್ಟಾರ್ ಪುನೀತ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಅಪ್ಪ ಡಾ.ರಾಜ್​ಕುಮಾರ್ ಹಾದಿಯಲ್ಲೇ ಸಾಗಿದ ಪುನೀತ್ ಕಣ್ಣುಗಳನ್ನು ದಾನ ಮಾಡಿದ್ದಾರೆ. ಈ ಮೂಲಕ ಇಬ್ಬರ ಬಾಳಿನಲ್ಲಿ ಬೆಳಕಾಗಿದ್ದಾರೆ. ಇಬ್ಬರಿಗೆ ಪುನೀತ್ ರಾಜ್​ಕುಮಾರ್​ ಕಣ್ಣುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಅಳವಡಿಕೆ ಮಾಡಲಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾರಾಯಣ ನೇತ್ರಾಲಯದಲ್ಲಿ ವೈದ್ಯರು ನಿನ್ನೆ ಒಬ್ಬರಿಗೆ, ಇಂದು ಮತ್ತೊಬ್ಬರಿಗೆ ಪುನೀತ್ ಕಣ್ಣುಗಳನ್ನು ಅಳವಡಿಸಿದ್ದಾರೆ. ಈ ಬಗ್ಗೆ ವೈದ್ಯರು ನವೆಂಬರ್ 2ಕ್ಕೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ.

ಅತ್ತಿಗುಂಡಿ ಗ್ರಾಮದಲ್ಲಿ ನೀರವ ಮೌನ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಪ್ರದೇಶದ ಅತ್ತಿಗುಂಡಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಅತ್ತಿಗುಂಡಿ ಗ್ರಾಮದಲ್ಲಿ ಬೆಟ್ಟದ ಹೂವು ಸಿನಿಮಾ ಚಿತ್ರೀಕರಣವಾಗಿತ್ತು. ಬೆಟ್ಟದ ಹೂವು ಸಿನಿಮಾಕ್ಕೆ ಪುನೀತ್ ರಾಜ್​ಕುಮಾರ್​ಗೆ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು. ಅಪ್ಪು ಚಿಕ್ಕಮಗಳೂರಿನ ಜನರ ಜೊತೆಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಕಳೆದ ಎರಡು ವರ್ಷದ ಹಿಂದೆ ಅತ್ತಿಗುಂಡಿ ಗ್ರಾಮಕ್ಕೆ ಪುನೀತ್ ಭೇಟಿ ನೀಡಿದ್ದರು. ಜನರ ಜೊತೆ ಬೆರೆತು ಬೆಟ್ಟದ ಹೂವು ಸಿನಿಮಾ ಬಗ್ಗೆ ಚರ್ಚೆ ಮಾಡಿದ್ದರು. ಈ ಬಗ್ಗೆ ಪವರ್ ಸ್ಟಾರ್ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ

ಡಾ ರಾಜ್ ಕನಸಿನ ಕೂಸಾಗಿರುವ ಮೈಸೂರಿನ ಶಕ್ತಿಧಾಮ ಆಶ್ರಮಕ್ಕೆ ಪುನೀತ್ ರಾಜ್ ಕುಮಾರ್ ಎಲ್ಲವೂ ಆಗಿದ್ದರು

ಪುನೀತ್ ಹಠಾತ್ ನಿಧನದಿಂದ ರಾಜ್​ಕುಮಾರ್ ಹೆಸರಿನ ಹೋಟೆಲ್ ನಡೆಸುತ್ತಿದ್ದ ಅಭಿಮಾನಿ ಸಾವು!

Published On - 1:04 pm, Sun, 31 October 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ