AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುಐ’ ಚಿತ್ರಕ್ಕೆ ಜಾಕ್​ಪಾಟ್ ಗಳಿಕೆ​; ಮೂರು ದಿನಕ್ಕೆ ದಾಖಲೆಯ ಕಲೆಕ್ಷನ್ ಮಾಡಿದ ಉಪ್ಪಿ ಸಿನಿಮಾ

ಉಪೇಂದ್ರ ನಟನೆಯ ‘ಯುಐ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅದ್ಭುತ ಯಶಸ್ಸು ಕಂಡಿದೆ. ಮೂರು ದಿನಗಳಲ್ಲಿ ಚಿತ್ರ ಒಳ್ಳೆಯ ಗಳಿಕೆ ಮಾಡಿದೆ. ಕನ್ನಡದ ಜೊತೆ ತೆಲುಗು ಮತ್ತು ತಮಿಳಿನಲ್ಲೂ ಚಿತ್ರ ಒಳ್ಳೆಯ ಪ್ರತಿಕ್ರಿಯೆ ಪಡೆದಿದೆ. ವಿಭಿನ್ನ ನಿರ್ದೇಶನ ಮತ್ತು ಕಥಾವಸ್ತು ಇದಕ್ಕೆ ಕಾರಣ. 'ಮ್ಯಾಕ್ಸ್' ಸಿನಿಮಾ ಬಿಡುಗಡೆಯೊಂದಿಗೆ ಈ ಚಿತ್ರ ಥಿಯೇಟರ್‌ಗಳ ಹಂಚಿಕೆಯ ಸವಾಲು ಎದುರಿಸಬೇಕಿದೆ.

‘ಯುಐ’ ಚಿತ್ರಕ್ಕೆ ಜಾಕ್​ಪಾಟ್ ಗಳಿಕೆ​; ಮೂರು ದಿನಕ್ಕೆ ದಾಖಲೆಯ ಕಲೆಕ್ಷನ್ ಮಾಡಿದ ಉಪ್ಪಿ ಸಿನಿಮಾ
ಯುಐ
ರಾಜೇಶ್ ಹೆಗಡೆ ದುಗ್ಗುಮನೆ
|

Updated on: Dec 23, 2024 | 7:32 AM

Share

ಉಪೇಂದ್ರ ನಟನೆಯ ‘ಯುಐ’ ಸಿನಿಮಾ ಅಭಿಮಾನಿಗಳಿಗೆ ಇಷ್ಟ ಆಗಿದೆ. ಈ ಚಿತ್ರವನ್ನು ಒಬ್ಬರು ಒಂದೊಂದು ರೀತಿಯಲ್ಲಿ ವಿಮರ್ಶಿಸುತ್ತಿದ್ದಾರೆ. ದೃಶ್ಯಗಳನ್ನು ಡಿಕೋಡ್ ಮಾಡುವಂತೆ ಉಪೇಂದ್ರ ಅವರು ಕೋರಿದ್ದರು. ಈ ಕೋರಿಕೆಯನ್ನು ಸ್ವೀಕರಿಸಿದ ಅನೇಕರು ಮತ್ತೆ ಮತ್ತೆ ತೆರಳಿ ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ ಮತ್ತು ತಮ್ಮ ವಿಮರ್ಶೆ ತಿಳಿಸುತ್ತಿದದ್ದಾರೆ. ಕೆಲವರು ಈ ಚಿತ್ರಕ್ಕೆ ನೆಗೆಟಿವ್ ವಿಮರ್ಶೆ ಕೊಟ್ಟಿದ್ದೂ ಇದೆ. ಇವುಗಳ ಮಧ್ಯೆ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರಕ್ಕೆ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಆಗಿದೆ.

ಉಪೇಂದ್ರ ಸಿನಿಮಾಗಳಲ್ಲಿ ಭಿನ್ನತೆ ಇರುತ್ತದೆ. ಅವರ ನಿರ್ದೇಶನ ಡಿಫರೆಂಟ್ ಆಗಿರುತ್ತದೆ. ಅದೇ ರೀತಿ ಸ್ಕ್ರೀನ್​ಪ್ಲೇ ಕೂಡ ಟ್ವಿಸ್ಟ್ ಆ್ಯಂಡ್ ಟರ್ನ್​ಗಳಿಂದ ಕೂಡಿರುತ್ತದೆ. ಈ ಕಾರಣಕ್ಕೆ ಸುದೀಪ್ ಸಿನಿಮಾಗಳು ಇಷ್ಟ ಆಗೋದು. ಈಗ ‘ಯುಐ’ ಚಿತ್ರವನ್ನು ಜನರು ಒಪ್ಪಿದ್ದಾರೆ. ಇದು ಬಾಕ್ಸ್ ಆಫೀಸ್​ ಗಳಿಕೆಗೆ ಸಹಕಾರಿ ಆಗಿದೆ.

‘ಯುಐ’ ಚಿತ್ರ ಮೊದಲ ದಿನ 6.95 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಕೇವಲ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳಿನಲ್ಲೂ ಸ್ವಲ್ಪ ಮಟ್ಟಿಗಿನ ಕಲೆಕ್ಷನ್ ಆಗಿತ್ತು. ಎರಡನೇ ದಿನ 5.6 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು ಈ ಚಿತ್ರ. ಈಗ ಮೂರನೇ ದಿನ ಲೆಕ್ಕಾಚಾರ ಸಿಕ್ಕಿದೆ. ಭಾನುವಾರ (ಡಿಸೆಂಬರ್ 22) ಈ ಸಿನಿಮಾ 5.75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 18.30 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: ‘ಯುಐ’ ಸಿನಿಮಾದ ಮೊದಲ ದಿನ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?

ಕನ್ನಡದ ಚಿತ್ರ ಒಂದು ಮೂರು ದಿನಕ್ಕೆ ಸುಮಾರು 20 ಕೋಟಿ ರೂಪಾಯಿ ಬಾಚಿಕೊಳ್ಳುತ್ತದೆ ಎಂದರೆ ಅದು ನಿಜಕ್ಕೂ ಗ್ರೇಟ್. ಈ ವಾರ ‘ಮ್ಯಾಕ್ಸ್’ ಚಿತ್ರ ಬಿಡುಗಡೆ ಕಾಣುತ್ತಿದೆ. ಡಿಸೆಂಬರ್ 25ರಂದು ಸಿನಿಮಾ ತೆರೆಗೆ ಬರುತ್ತಿದೆ. ಅದಕ್ಕೂ ಮೊದಲೇ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ‘ಮ್ಯಾಕ್ಸ್’ ಜೊತೆ ಥಿಯೇಟರ್​ಗಳನ್ನು ಹಂಚಿಕೊಳ್ಳಬೇಕಾದ ಪರಿಸ್ಥಿತಿ ‘ಯುಐ’ ಚಿತ್ರಕ್ಕೆ ಬರಲಿದೆ. ‘ಬುಕ್ ಮೈ ಶೋ’ನಲ್ಲೂ ‘ಯುಐ’ ಚಿತ್ರಕ್ಕೆ ಭರ್ಜರಿ ರೇಟಿಂಗ್ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು