AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UI Twitter Review: ಜನರಿಗೆ ಯುಐ ಸಿನಿಮಾ ಇಷ್ಟ ಆಯ್ತಾ? ಅದಕ್ಕೂ ಮೊದಲು ಅರ್ಥ ಆಯ್ತಾ?

ಉಪೇಂದ್ರ ನಿರ್ದೇಶನ ಮಾಡುವ ಸಿನಿಮಾಗಳು ಅಷ್ಟು ಸುಲಭಕ್ಕೆ ಅರ್ಥ ಆಗುವುದಿಲ್ಲ. ‘ಯುಐ’ ಸಿನಿಮಾ ನೋಡಿದ ಪ್ರೇಕ್ಷಕರು ಕೂಡ ಅದನ್ನೇ ಹೇಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿರುವ ಈ ಸಿನಿಮಾ ನೋಡಿದ ಜನರು ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ. ಚಿತ್ರದ ಟ್ವಿಟರ್ ವಿಮರ್ಶೆ ಹೀಗಿದೆ..

UI Twitter Review: ಜನರಿಗೆ ಯುಐ ಸಿನಿಮಾ ಇಷ್ಟ ಆಯ್ತಾ? ಅದಕ್ಕೂ ಮೊದಲು ಅರ್ಥ ಆಯ್ತಾ?
Upendra
ಮದನ್​ ಕುಮಾರ್​
|

Updated on: Dec 20, 2024 | 1:11 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಯುಐ’ ಇಂದು (ಡಿಸೆಂಬರ್​ 20) ರಿಲೀಸ್ ಆಗಿದೆ. ಉಪೇಂದ್ರ ಅವರ ನಿರ್ದೇಶನ ಎಂಬ ಒಂದೇ ಕಾರಣದಿಂದ ಚಿತ್ರಕ್ಕೆ ಹೆಚ್ಚು ಹೈಪ್ ಸಿಕ್ಕಿದೆ. ಮುಂಜಾನೆಯೇ ಅನೇಕ ಶೋಗಳು ಹೌಸ್​ಫುಲ್ ಆಗಿವೆ. ಆ ಮೂಲಕ ‘ಯುಐ’ ಸಿನಿಮಾಗೆ ಒಳ್ಳೆಯ ಓಪನಿಂಗ್ ಸಿಕ್ಕಿದೆ. ಎಂದಿನಂತೆ ತಮ್ಮ ಬುದ್ಧಿವಂತಿಕೆ ಮೂಲಕ ಉಪೇಂದ್ರ ಅವರು ಪ್ರೇಕ್ಷಕರ ಮೆದುಳಿಗೆ ಕೈ ಹಾಕಿದ್ದಾರೆ. ಸಿನಿಮಾ ನೋಡಿ ಚಿತ್ರಮಂದಿರದಿಂದ ಹೊರಗೆ ಬಂದಿರುವ ಪ್ರೇಕ್ಷಕರು ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ. ಕೆಲವರಿಗೆ ಸಿನಿಮಾ ಇಷ್ಟ ಆಗಿದೆ. ಇನ್ನೂ ಕೆಲವರಿಗೆ ಪೂರ್ತಿಯಾಗಿ ಅರ್ಥ ಆಗಿಲ್ಲ. ಇನ್ನೊಮ್ಮೆ ನೋಡಬೇಕು ಎನ್ನುವ ಪ್ರೇಕ್ಷಕರು ಕೂಡ ಇದ್ದಾರೆ.

ಆರಂಭದಲ್ಲೇ ಉಪೇಂದ್ರ ಶಾಕ್ ನೀಡಿದ್ದಾರೆ. ‘ನೀವು ಬುದ್ಧಿವಂತರಾಗಿದ್ರೆ ಈಗಲೇ ಚಿತ್ರಮಂದಿರದಿಂದ ಎದ್ದೋಗಿ’ ಎಂದು ಹೇಳುವ ಮೂಲಕ ಜನರನ್ನು ಕನ್​ಫ್ಯೂಸ್ ಮಾಡಿಸುತ್ತಾರೆ. ಟಿಕೆಟ್​ಗೆ ದುಡ್ಡು ಕೊಟ್ಟು ಬಂದ ಪ್ರೇಕ್ಷಕರನ್ನು ಎದ್ದು ಹೋಗಿ ಅಂತ ಹೇಳಿದ್ದಕ್ಕೆ ಪ್ರೇಕ್ಷಕರಿಗೆ ಶಾಕ್ ಆಗಿದೆ. ಈ ವಿಷಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಉಪೇಂದ್ರ ಅವರ ಅಪ್ಪಟ ಅಭಿಮಾನಿಗಳು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಮೊದಲ ಬಾರಿಗೆ ಅರ್ಥ ಆಗದೇ ಇದ್ದರೂ ಪರವಾಗಿಲ್ಲ. ಎರಡನೇ ಸಲ ಸಿನಿಮಾ ನೋಡುವುದಾಗಿ ಅನೇಕರು ಹೇಳಿದ್ದಾರೆ.

‘ವಿಮರ್ಶೆ ಹೇಳೋಕೆ ಆಗ್ದೇ ಇರುವಂತಹ ಮೂವೀ ಅಂದ್ರೆ ವಿಮರ್ಶೆಗಿಂತ ರಿಯಾಲಿಟಿ ಮುಖ್ಯ. ಅದನ್ನು ಅರ್ಥ ಮಾಡಿಕೊಳ್ಳಬೇಕು. ಒಂದು ಸಲಿ ಮೂವೀ ನೋಡಿ ನಿಮಗೆ ಗೊತ್ತಾಗುತ್ತೆ. ಈ ಮೂವೀ ಸೋಲೋಕೆ ಸಾಧ್ಯನೇ ಇಲ್ಲ. ಸೋಲ್ತು ಅಂದ್ರೆ ಸೋತಿದ್ದು ಮೂವೀ ಅಲ್ಲ, ನಾವು’ ಎಂದು ಅಭಿಮಾನಿಯೊಬ್ಬರು ಪೋಸ್ಟ್ ಮಾಡಿದ್ದಾರೆ.

ಈ ಸಿನಿಮಾದಲ್ಲಿ ರೀಷ್ಮಾ ನಾಣಯ್ಯ, ರವಿಶಂಕರ್​, ಅಚ್ಯುತ್ ಕುಮಾರ್​, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ. ಅಜನೀಶ್ ಬಿ. ಲೋಕನಾಥ್ ಸಂಗೀತ ನೀಡಿದ್ದಾರೆ. ಕನ್ನಡದ ಜತೆಗೆ ತಮಿಳು, ತೆಲುಗು, ಹಿಂದಿ, ಮಲಯಾಳಂ ಭಾಷೆಯಲ್ಲೂ ಸಿನಿಮಾ ಬಿಡುಗಡೆ ಆಗಿದೆ.

ಯುಐ ಸಿನಿಮಾ ಪೂರ್ತಿಯಾಗಿ ಅರ್ಥ ಆಗದೇ ಇದ್ದರೂ ಪರವಾಗಿಲ್ಲ, ಕೊನೇ ಪಕ್ಷ ಡಿಫರೆಂಟ್ ಆಗಿದೆ ಎಂದು ಕೂಡ ಕೆಲವು ಪ್ರೇಕ್ಷಕರು ಖುಷಿಪಟ್ಟಿದ್ದಾರೆ. ಇಡೀ ಸಿನಿಮಾ ಉಪೇಂದ್ರ ಅವರ ಒನ್​ ಮ್ಯಾನ್ ಶೋ ರೀತಿ ಇದೆ. ದ್ವಿಪಾತ್ರದಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ತೋರಿಸಿರುವ ಎಷ್ಟೋ ವಿಚಾರಗಳು ಜನರಿಗೆ ಅನೇಕ ವರ್ಷಗಳ ಬಳಿಕ ಅರ್ಥ ಆಗಬಹುದು ಎಂದು ಕೂಡ ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ
ಬೆಂಗಳೂರಿನಾದ್ಯಂತ ವರುಣಾರ್ಭಟ: ರಾತ್ರಿ ಮಳೆಗೆ ರಸ್ತೆಗಳು ಜಲಾವೃತ
ಬೆಂಗಳೂರಿನಾದ್ಯಂತ ವರುಣಾರ್ಭಟ: ರಾತ್ರಿ ಮಳೆಗೆ ರಸ್ತೆಗಳು ಜಲಾವೃತ
ಮುಂಬೈನ ಡಿಪೋದಲ್ಲಿ ಭಾರೀ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಬಸ್‌ಗಳು
ಮುಂಬೈನ ಡಿಪೋದಲ್ಲಿ ಭಾರೀ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಬಸ್‌ಗಳು
ಶಿವರಾಜ್‌ಕುಮಾರ್ ಆಗಮನ ವೇಳೆ ಪಟಾಕಿ ಸ್ಫೋಟ; ತಪ್ಪಿದ ದೊಡ್ಡ ಅಪಾಯ
ಶಿವರಾಜ್‌ಕುಮಾರ್ ಆಗಮನ ವೇಳೆ ಪಟಾಕಿ ಸ್ಫೋಟ; ತಪ್ಪಿದ ದೊಡ್ಡ ಅಪಾಯ
ಹೆಚ್ಚಿತು ಗಾನವಿ, ಯಶಸ್ ನಡುವಿನ ಆಪ್ತತೆ; ಸೌಂದರ್ಯಾ ಶೆಟ್ಟಿ ಕಥೆ ಏನು?
ಹೆಚ್ಚಿತು ಗಾನವಿ, ಯಶಸ್ ನಡುವಿನ ಆಪ್ತತೆ; ಸೌಂದರ್ಯಾ ಶೆಟ್ಟಿ ಕಥೆ ಏನು?
‘ಹೆದ್ದಾರಿ ವಿಸ್ತರಣೆಗೆ 2,326 ಮರಗಳಿಗೆ ಕೊಡಲಿ ಪೆಟ್ಟು’
‘ಹೆದ್ದಾರಿ ವಿಸ್ತರಣೆಗೆ 2,326 ಮರಗಳಿಗೆ ಕೊಡಲಿ ಪೆಟ್ಟು’