‘ಉಲ್ಟಾ ಪಲ್ಟಾ’ ಖ್ಯಾತಿಯ ನಿರ್ದೇಶಕ ಎನ್​ಎಸ್​ ಶಂಕರ್ ನಿಧನ: ಚಿತ್ರರಂಗದ ಕಂಬನಿ

ಚಿತ್ರರಂಗ, ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಎನ್​.ಎಸ್. ಶಂಕರ್ ಅವರು ಬೆಂಗಳೂರಿನಲ್ಲಿ ಮೃತರಾಗಿದ್ದಾರೆ. 1997ರ ‘ಉಲ್ಟಾ ಪಲ್ಟಾ’ ಸಿನಿಮಾ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ನಿರ್ದೇಶಕ ಎನ್​.ಎಸ್. ಶಂಕರ್ ಅವರ ನಿಧನದ ಸುದ್ದಿ ತಿಳಿದು ಚಿತ್ರರಂಗದ ಹಲವರು ಸಂತಾಪ ಸೂಚಿಸಿದ್ದಾರೆ.

‘ಉಲ್ಟಾ ಪಲ್ಟಾ’ ಖ್ಯಾತಿಯ ನಿರ್ದೇಶಕ ಎನ್​ಎಸ್​ ಶಂಕರ್ ನಿಧನ: ಚಿತ್ರರಂಗದ ಕಂಬನಿ
Ns Shankar

Updated on: Jun 28, 2026 | 10:52 AM

ಮುಖ್ಯಾಂಶಗಳು

  • ಹೃದಯಾಘಾತದಿಂದ ಹಿರಿಯ ನಿರ್ದೇಶಕ ಎನ್​ಎಸ್ ಶಂಕರ್ ವಿಧಿವಶ.
  • ಮಲಗಿದ್ದಾಗಲೇ ಕೊನೆಯುಸಿರು ಎಳೆದ ‘ಉಲ್ಟಾ ಪಲ್ಟಾ’ ಡೈರೆಕ್ಟರ್.
  • ಲೇಖಕನಾಗಿ, ಪತ್ರಕರ್ತನಾಗಿಯೂ ಗುರುತಿಸಿಕೊಂಡಿದ್ದ ಎನ್​ಎಸ್ ಶಂಕರ್.

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎನ್​ಎಸ್ ಶಂಕರ್ (NS Shankar) ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ (Heart Attack) ಅವರು ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಪತ್ರಕರ್ತರೂ ಆಗಿದ್ದ ಶಂಕರ್ ಅವರು ಕನ್ನಡದ ಹೆಸರಾಂತ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು. ‘ಉಲ್ಟಾ ಪಲ್ಟಾ’ (Ulta Palta) ರೀತಿಯ ಸೂಪರ್ ಹಿಟ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಖ್ಯಾತಿ ಅವರಿಗಿತ್ತು. ಎನ್​ಎಸ್ ಶಂಕರ್ ಅವರ ನಿಧನದ ಸುದ್ದಿ ತಿಳಿದು ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ.

ಕಳೆದ ಕೆಲವು ದಿನಗಳಿಂದ ಎನ್​ಎಸ್ ಶಂಕರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಈಗ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮಲಗಿದ್ದಾಗಲೇ ಅವರು ಕೊನೆಯುಸಿರು ಎಳೆದರು ಎನ್ನಲಾಗಿದೆ. ಉತ್ತಮ ಬರಹಗಾರರಾಗಿದ್ದ ಅವರು ಅನೇಕ ಪುಸ್ತಕಗಳನ್ನು ಬರೆದಿದ್ದರು. ಆ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೂ ಕೊಡುಗೆ ನೀಡಿದ್ದರು.

‘ಪ್ರಜಾವಾಣಿ’, ‘ಮುಂಗಾರು’, ‘ಲಂಕೇಶ್ ಪತ್ರಿಕೆ’ ಸೇರಿದಂತೆ ಹಲವು ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ್ದ ಎನ್.ಎಸ್. ಶಂಕರ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ‘ಶಂಕರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ’ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಕೆ. ಭಾಗ್ಯರಾಜ್ ನಿಧನ; ಡಾ. ರಾಜ್ ರೀತಿ ನೇತ್ರದಾನ

ಎನ್​ಎಸ್ ಶಂಕರ್ ಅವರು ಜನಿಸಿದ್ದು ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ. ಆದರೆ ಅವರು ಬಾಲ್ಯವನ್ನು ಕಳೆದಿದ್ದು ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ. ಹೈಸ್ಕೂಲ್ ಓದಿದ್ದು ಮೈಸೂರಿನಲ್ಲಿ. ಕಾಲೇಜು ಶಿಕ್ಷಣವನ್ನು ಅವರು ಬೆಂಗಳೂರಿನಲ್ಲಿ ಪಡೆದರು. ಮೊದಲು ಪತ್ರಕರ್ತನಾಗಿದ್ದ ಅವರು ನಂತರ ಚಿತ್ರರಂಗಕ್ಕೆ ಬಂದು ಅಲ್ಲಿಯೂ ಯಶಸ್ಸು ಕಂಡರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:35 am, Sun, 28 June 26

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us