‘ತಿನ್ನೋ ಅನ್ನಕ್ಕೆ ಮಣ್ಣು ಹಾಕುವ ಕೆಲಸ ಮಾಡಬಾರದು’; ದರ್ಶನ್ ಬಗ್ಗೆ ಉಮಾಪತಿ ಮಾತು
‘ನಮ್ಮ ಬೆರಳು ಬೇರೆಯವರ ಕಣ್ಣಿಗೆ ಚುಚ್ಚಿದರೆ ನೋವಾಗುತ್ತದೆ. ಅದೇ ರೀತಿ ನಮ್ಮದೇ ಕಣ್ಣಿಗೆ ಚುಚ್ಚಿದರೂ ನೋವಾಗುತ್ತದೆ. ಪೊಲೀಸ್ ಇಲಾಖೆ ಬಗ್ಗೆ ಜನಗಳಿಗೆ ನಂಬಿಕೆ ಬಂದಿದೆ. ಮಾರುತಿ ಕಾರಲ್ಲಿ ಹೋಗುವವರಿಗೆ, ಲ್ಯಾಂಬೋರ್ಗಿನಿಯಲ್ಲಿ ಹೋಗುವವರಿಗೆ ಒಂದೇ ನ್ಯಾಯ ಇರಬೇಕು’ ಎಂದಿದ್ದಾರೆ ಉಮಾಪತಿ ಶ್ರೀನಿವಾಸ್.
ಉಮಾಪತಿ ಶ್ರೀನಿವಾಸ್ ಹಾಗೂ ದರ್ಶನ್ (Darshan) ಮಧ್ಯೆ ಆಗಿದ್ದ ಕಿರಿಕ್ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಒಟ್ಟಾಗಿ ಕೆಲಸ ಮಾಡಿದ್ದ ಇವರು ಈಗ ಹಾವು-ಮುಂಗುಸಿ ರೀತಿ ಆಗಿದ್ದಾರೆ. ಒಬ್ಬರನ್ನು ಕಂಡರೆ ಒಬ್ಬರಿಗೆ ಆಗೋದಿಲ್ಲ. ಉಮಾಪತಿಗೆ ತಗಡು ಎನ್ನುವ ಪದ ಬಳಕೆ ಮಾಡಿದ್ದರು ದರ್ಶನ್. ಈ ಹೇಳಿಕೆ ಚರ್ಚೆ ಆಗಿತ್ತು. ಈಗ ದರ್ಶನ್ ತಾವೇ ತೋಡಿಕೊಂಡ ಹೊಂಡಕ್ಕೆ ಬಿದ್ದಿದ್ದಾರೆ. ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದು ಅವರನ್ನು ಟೀಕಿಸೋ ಕೆಲಸ ಆಗುತ್ತಿದೆ. ಈ ಮಧ್ಯೆ ದರ್ಶನ್ ವಿರುದ್ಧ ಉಮಾಪತಿ ದೀರ್ಘವಾಗಿ ಮಾತನಾಡಿದ್ದಾರೆ. ಕನ್ನಡದ ಖಾಸಗಿ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ವಿವರಣೆ ನೀಡಿದ್ದಾರೆ.
‘ನಮ್ಮ ಬೆರಳು ಬೇರೆಯವರ ಕಣ್ಣಿಗೆ ಚುಚ್ಚಿದರೆ ನೋವಾಗುತ್ತದೆ. ಅದೇ ರೀತಿ ನಮ್ಮದೇ ಕಣ್ಣಿಗೆ ಚುಚ್ಚಿದರೂ ನೋವಾಗುತ್ತದೆ. ಪೊಲೀಸ್ ಇಲಾಖೆ ಬಗ್ಗೆ ಜನಗಳಿಗೆ ನಂಬಿಕೆ ಬಂದಿದೆ. ದೊಡ್ಡವರಿಗೂ, ಸಣ್ಣವರಿಗೆ ಒಂದೇ ನ್ಯಾಯ. ಮಾರುತಿ ಕಾರಲ್ಲಿ ಹೋಗುವವರಿಗೆ, ಲ್ಯಾಂಬೋರ್ಗಿನಿಯಲ್ಲಿ ಹೋಗುವವರಿಗೆ ಒಂದೇ ನ್ಯಾಯ ಇರಬೇಕು’ ಎಂದಿದ್ದಾರೆ ಉಮಾಪತಿ ಶ್ರೀನಿವಾಸ್.
‘ನಮ್ಮನ್ನು ನಂಬಿಕೊಂಡು ಬಂದವರ ಕೈ ಬಿಡಬಾರದು. ತಿನ್ನೋ ಅನ್ನಕ್ಕೆ ಮಣ್ಣು ಹಾಕುವ ಕೆಲಸ ಮಾಡಬಾರದು. ಎ2 ಸ್ವಲ್ಪ ಯೋಚಿಸಬೇಕಿತ್ತು. ತಾಳ್ಮೆ ಅನ್ನೋದು ತುಂಬಾನೇ ಅವಶ್ಯಕವಾಗುತ್ತದೆ. ಹಳ್ಳಕ್ಕೆ ಬಿದ್ದಿದ್ದಾರೆ, ಆಳಿಗೊಂದು ಕಲ್ಲು ಎಸೆಯಬಾರದು. ಅದನ್ನು ನಂಬಿದವನು ನಾನು’ ಎಂದಿದ್ದಾರೆ ಉಮಾಪತಿ ಶ್ರೀನಿವಾಸ್.
ಇದನ್ನೂ ಓದಿ: ದರ್ಶನ್ ಕೇಸ್: ವಿಚಾರಣೆ ಬಳಿಕ ಚಿಕ್ಕಣ್ಣ ಪ್ರತಿಕ್ರಿಯೆ; ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ
‘ನಾನು ಮೊದಲು ದರ್ಶನ್ ಗುಂಪಲ್ಲಿ ಇದ್ದೆ. ದೇವರು ನನ್ನನ್ನು ಹೊರಗೆ ಕರೆದುಕೊಂಡು ಬಂದ. ಗಿಡವಾಗಿ ಬಗ್ಗದು ಮರವಾಗಿ ಬಗ್ಗೋದಿಲ್ಲ. ತಪ್ಪು ಮಾಡಿದಾಗ ತಿದ್ದಿಕೊಳ್ಳಬೇಕು. ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದಿದ್ದಾರೆ ಉಮಾಪತಿ ಶ್ರೀನಿವಾಸ್. ದರ್ಶನ್ ಅವರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಿತ್ತು ಎಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.