Puneeth Rajkumar: ಡಾ.ರಾಜ್ ಹಾದಿಯಲ್ಲಿ ಅಪ್ಪು; ಮೈಸೂರು ವಿವಿಯಿಂದ ಪುನೀತ್​ಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಣೆ

University of Mysuru: ಮೈಸೂರು ವಿಶ್ವವಿದ್ಯಾನಿಲಯವು ಪುನೀತ್ ರಾಜ್​ಕುಮಾರ್​ಗೆ ಗೌರವ ಡಾಕ್ಟರೇಟ್ ಗೌರವವನ್ನು ಘೋಷಿಸಿದೆ. ಈ ಹಿಂದೆ ಡಾ.ರಾಜ್​ಕುಮಾರ್ ಕೂಡ ಮೈಸೂರು ವಿಶ್ವವಿದ್ಯಾನಿಲಯದಿಂದ ಇದೇ ಗೌರವ ಪಡೆದಿದ್ದರು.​

Puneeth Rajkumar: ಡಾ.ರಾಜ್ ಹಾದಿಯಲ್ಲಿ ಅಪ್ಪು; ಮೈಸೂರು ವಿವಿಯಿಂದ ಪುನೀತ್​ಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಣೆ
ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ ಗೌರವ ಡಾಕ್ಟರೇಟ್ ಗೌರವವನ್ನು ಮೈಸೂರು ವಿಶ್ವವಿದ್ಯಾಲಯ ಘೋಷಿಸಿದೆ.
Follow us
TV9 Web
| Updated By: shivaprasad.hs

Updated on:Mar 13, 2022 | 2:17 PM

ಮೈಸೂರು: ದಿವಂಗತ ಪುನೀತ್ ರಾಜ್‌ಕುಮಾರ್‌ಗೆ (Puneeth Rajkumar) ಮತ್ತೊಂದು ಗೌರವ ಲಭ್ಯವಾಗಿದೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿರುವ ಮೈಸೂರು ವಿಶ್ವವಿದ್ಯಾನಿಲಯವು (University of Mysore) ಪುನೀತ್​ಗೆ ಮರಣೋತ್ತರ ಗೌರವ ಡಾಕ್ಟರೇಟ್ ಗೌರವವನ್ನು ಘೋಷಿಸಿದೆ. ಈ ಕುರಿತು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಹೇಮಂತ್ ಕುಮಾರ್ ಘೋಷಣೆ ಮಾಡಿದ್ದಾರೆ. ವಿಶೇಷವೆಂದರೆ 46 ವರ್ಷದ ಹಿಂದೆ ಡಾ.ರಾಜ್​ಕುಮಾರ್ (Dr Rajkumar) ಅವರಿಗೂ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡಿತ್ತು. ಪುನೀತ್​ ಸಿನಿಮಾ ಕ್ಷೇತ್ರದಲ್ಲಿ ಮಾಡಿರುವ ಕೆಲಸ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಕೆಲಸಗಳನ್ನು ಮನ್ನಿಸಿ ವಿಶ್ವವಿದ್ಯಾನಿಲಯವು ಈ ಗೌರವವನ್ನು ಘೋಷಿಸಿದೆ. ಮಾರ್ಚ್ 22ರಂದು ವಿವಿಯ 102ನೇ ಘಟಿಕೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಅಪ್ಪುಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡುತ್ತಾರೆ ಎಂದು ಮಾಹಿತಿ ನೀಡಲಾಗಿದೆ.

ಮಾರ್ಚ್ 17ರಿಂದ ಪುನೀತ್ ಜನ್ಮದಿನ. ಅದನ್ನು ವಿಶೇಷವಾಗಿ ಆಚರಿಸಲು ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ. ‘ಜೇಮ್ಸ್’ ಚಿತ್ರ ಅಂದೇ ರಿಲೀಸ್ ಆಗಲಿದೆ. ಪುನೀತ್ ನಾಯಕನಾಗಿ ನಟಿಸಿರುವ ಕೊನೆಯ ಚಿತ್ರ ಇದಾಗಿದ್ದು, ಹಬ್ಬದ ಮಾದರಿಯಲ್ಲಿ ಇದನ್ನು ಸಂಭ್ರಮಿಸಲು ತಯಾರಿ ನಡೆದಿದೆ. ಇದಕ್ಕೆ ಮತ್ತಷ್ಟು ಮೆರಗು ತುಂಬುವಂತೆ ಮೈಸೂರು ವಿಶ್ವವಿದ್ಯಾಲಯ ಅಪ್ಪುಗೆ ಗೌರವ ಡಾಕ್ಟರೇಟ್ ಘೋಷಿಸಿದ್ದು, ಅಭಿಮಾನಿಗಳು ಹೆಮ್ಮೆಪಟ್ಟಿದ್ದಾರೆ. ಅದರಲ್ಲೂ 100 ವರ್ಷಕ್ಕೂ ಹೆಚ್ಚಿನ ಇತಿಹಾಸವಿರುವ ಮೈಸೂರು ವಿಶ್ವವಿದ್ಯಾಲಯ, ಡಾ.ರಾಜ್ ಕೂಡ ಗೌರವ ಡಾಕ್ಟರೇಟ್ ಪಡೆದುಕೊಂಡಿದ್ದ ರಾಜ್ಯದ ಹೆಮ್ಮೆಯ ವಿವಿಯಿಂದ ಪುನೀತ್​ಗೂ ಈ ಗೌರವ ಲಭಿಸುತ್ತಿರುವುದು ಎಲ್ಲರ ಸಂತಸಕ್ಕೆ ಕಾರಣವಾಗಿದೆ.

ಪುನೀತ್ ಕುಟುಂಬವನ್ನು ಸಂಪರ್ಕಿಸಿದ್ದು, ಅಶ್ವಿನಿಯವರು ಕಾರ್ಯಕ್ರಮಕ್ಕೆ ಬರಲು ಒಪ್ಪಿದ್ದಾರೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಘಟಿಕೋತ್ಸವದಲ್ಲಿ ಪುನೀತ್​ಗೆ ಮರಣೋತ್ತರ ಗೌರವ ಡಾಕ್ಟರೇಟ್, ಹಿರಿಯ ವಿಜ್ಞಾನಿ ಡಾ.ವಿ.ಎಸ್.ಅತ್ರೆ ಹಾಗೂ ಜನಪದ ಗಾಯಕ ಮಳವಳ್ಳಿ ಮಹದೇವ ಸ್ವಾಮಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ. ಘಟಿಕೋತ್ಸವದಂದು 28,581 ಅಭ್ಯರ್ಥಿಗಳಿಗೆ ಪದವಿ, 5,677 ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಗುತ್ತದೆ.

Prof Hemant Kumar and Ashwini Puneeth

ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್​ಕುಮಾರ್

ಇಂದು ‘ಜೇಮ್ಸ್’ ಪ್ರಿ-ರಿಲೀಸ್ ಈವೆಂಟ್:

ಇಂದು (ಮಾ.13) ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್​ನಲ್ಲಿ ‘ಜೇಮ್ಸ್’ ಚಿತ್ರದ ಪ್ರಿ-ರಿಲೀಸ್ ಈವೆಂಟ್ ನಡೆಯಲಿದೆ. ಶಿವರಾಜ್​ಕುಮಾರ್ ಸೇರಿದಂತೆ ಪುನೀತ್ ಕುಟುಂಬ ಈ ಈವೆಂಟ್​ನಲ್ಲಿ ಹಾಜರಿರಲಿದ್ದಾರೆ. ಈಗಾಗಲೇ ‘ಜೇಮ್ಸ್’ ಬುಕಿಂಗ್ ಶುರುವಾಗಿದ್ದು, ಕಲೆಕ್ಷನ್ ವಿಚಾರದಲ್ಲಿ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ. ಮಾ.17ರಿಂದ ರಾಜ್ಯದ ಶೇ.80ರಷ್ಟು ಚಿತ್ರಮಂದಿರಗಳಲ್ಲಿ ‘ಜೇಮ್ಸ್’ ಪ್ರದರ್ಶನವಾಗಲಿದೆ.

ಇದನ್ನೂ ಓದಿ:

ಮೈಸೂರಲ್ಲಿ ಈಗಲೇ ಶುರು ‘ಜೇಮ್ಸ್​’ ಜಾತ್ರೆ: ಅಪ್ಪು ಫ್ಯಾನ್ಸ್​ ಜೋಶ್​ ಹೇಗಿದೆ ತಿಳಿಯಲು ಈ ವಿಡಿಯೋ ನೋಡಿ

ಕಿಕ್ಕಿರಿದು ತುಂಬಿದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊಳಗಿದ ‘ಬೊಂಬೆ ಹೇಳುತೈತೆ’; ರೋಮಾಂಚನಕಾರಿ ವಿಡಿಯೋ ಇಲ್ಲಿದೆ

Published On - 1:36 pm, Sun, 13 March 22

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್