AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಗಾಸ್ಟಾರ್ ಚಿರಂಜೀವಿ ಸೊಸೆ ಹೊಸ ವೆಬ್​ಸೈಟ್ ಲಾಂಚ್, ರಶ್ಮಿಕಾ ಮಂದಣ್ಣ ಅತಿಥಿ ಸಂಪಾದಕಿ

ತೆಲುಗಿನ ಖ್ಯಾತ ನಟ ಚಿರಂಜೀವಿ ಅವರ ಸೊಸೆ, ರಾಮ್​ಚರಣ್ ತೇಜ ಅವರ ಪತ್ನಿ ಉಪಾಸನಾ ಕಮಿನೇನಿ ಕೋನಿಡೇಲಾ ಅವರೀಗ ಆನ್​ಲೈನ್​ನಲ್ಲಿ ಹೊಸ ಸಾಹಸಕ್ಕೆ ಮುಂದಾಗಿದ್ದಾರೆ. ಅವರ ಆ ಸಾಹಸಕ್ಕೆ ಸದ್ಯ ಟ್ರೆಂಡಿಂಗ್​ನಲ್ಲಿರುವ ಕನ್ನಡತಿ, ಸೌತ್ ಸೆನ್ಸೇಷನಲ್ ರಶ್ಮಿಕಾ ಮಂದಣ್ಣ ಕೈ ಜೋಡಿಸಿದ್ದಾರೆ. ಅತಿಥಿ ಸಂಪಾದಕಿಯಾಗಿ ರಶ್ಮಿಕಾ.. ಆರೋಗ್ಯ, ಲೈಫ್​ಸ್ಟೈಲ್, ಮಾನಸಿಕ ಮತ್ತು ದೈಹಿಕ ಆರೋಗ್ಯ, ಪ್ರಸ್ತುತ ಟ್ರೆಂಡಿಂಗ್ ವಿಚಾರಗಳನ್ನು ಯೂಆರ್​ಲೈಫ್​ ಮೂಲಕ ಉಪಾಸನಾ ಹೇಳಹೊರಟಿದ್ದಾರೆ. URLife ಹೆಸರಿನ ನೂತನ ವೆಬ್​ಸೈಟ್​ ತೆರೆದಿದ್ದು, ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಉಪಾಸನಾ […]

ಮೆಗಾಸ್ಟಾರ್ ಚಿರಂಜೀವಿ ಸೊಸೆ ಹೊಸ ವೆಬ್​ಸೈಟ್ ಲಾಂಚ್, ರಶ್ಮಿಕಾ ಮಂದಣ್ಣ ಅತಿಥಿ ಸಂಪಾದಕಿ
ಪೃಥ್ವಿಶಂಕರ
| Edited By: ಆಯೇಷಾ ಬಾನು|

Updated on:Nov 10, 2020 | 1:33 PM

Share

ತೆಲುಗಿನ ಖ್ಯಾತ ನಟ ಚಿರಂಜೀವಿ ಅವರ ಸೊಸೆ, ರಾಮ್​ಚರಣ್ ತೇಜ ಅವರ ಪತ್ನಿ ಉಪಾಸನಾ ಕಮಿನೇನಿ ಕೋನಿಡೇಲಾ ಅವರೀಗ ಆನ್​ಲೈನ್​ನಲ್ಲಿ ಹೊಸ ಸಾಹಸಕ್ಕೆ ಮುಂದಾಗಿದ್ದಾರೆ. ಅವರ ಆ ಸಾಹಸಕ್ಕೆ ಸದ್ಯ ಟ್ರೆಂಡಿಂಗ್​ನಲ್ಲಿರುವ ಕನ್ನಡತಿ, ಸೌತ್ ಸೆನ್ಸೇಷನಲ್ ರಶ್ಮಿಕಾ ಮಂದಣ್ಣ ಕೈ ಜೋಡಿಸಿದ್ದಾರೆ.

ಅತಿಥಿ ಸಂಪಾದಕಿಯಾಗಿ ರಶ್ಮಿಕಾ.. ಆರೋಗ್ಯ, ಲೈಫ್​ಸ್ಟೈಲ್, ಮಾನಸಿಕ ಮತ್ತು ದೈಹಿಕ ಆರೋಗ್ಯ, ಪ್ರಸ್ತುತ ಟ್ರೆಂಡಿಂಗ್ ವಿಚಾರಗಳನ್ನು ಯೂಆರ್​ಲೈಫ್​ ಮೂಲಕ ಉಪಾಸನಾ ಹೇಳಹೊರಟಿದ್ದಾರೆ. URLife ಹೆಸರಿನ ನೂತನ ವೆಬ್​ಸೈಟ್​ ತೆರೆದಿದ್ದು, ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಉಪಾಸನಾ ಉಸ್ತುವಾರಿ ವಹಿಸಿಕೊಂಡರೆ, ಈ ಹಬ್ಬದ ಸಮಯದಲ್ಲಿ ಅತಿಥಿ ಸಂಪಾದಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದಾರೆ.

ಈ ವೆಬ್​ಸೈಟ್​ನಲ್ಲಿ ಏನೆಲ್ಲಾ ಲಭ್ಯ.. ಅಂದಹಾಗೆ, URLife ಎಂಬುದು ಒಂದು ಆರೋಗ್ಯಕರ ವೇದಿಕೆ. ಇಲ್ಲಿ ಆಯ್ದ ಕೆಲ ಕ್ಷೇತ್ರಗಳ ನುರಿತ ಪರಣಿತರು, ವೈದ್ಯರು ಸದ್ಯದ ಲೈಫ್​​ಸ್ಟೈಲ್, ತಂತ್ರಜ್ಷಾನದ ಬಗ್ಗೆ ಈ ವೇದಿಕೆ ಮೂಲಕ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ. ಓದುಗರಿಗೆ ಅತ್ಯುತ್ತಮವಾದ ಡಯಟ್​ ಟಿಪ್ಸ್, ನುರಿತವರಿಂದ ಉಪಯುಕ್ತ ಮಾಹಿತಿ, ಉಚಿತ ತರಗತಿಗಳು, ವಿಡಿಯೋ ಮಾಹಿತಿ, ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿಯೂ ಬೆರಳ ತುದಿಯಲ್ಲಿಯೇ URLife ನಲ್ಲಿ ಲಭ್ಯವಾಗಲಿದೆ.

ಈ ವಿಶೇಷಗಳ ಗುಚ್ಛದ URLife ಗೆ ಈ ಸಲದ ಗೆಸ್ಟ್​ ಎಡಿಟರ್​ ಆಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದು, ಅವರನ್ನೇ ಆಯ್ದುಕೊಳ್ಳುವುದಕ್ಕೆ ಒಂದಷ್ಟು ಅಂಶಗಳನ್ನು ಸ್ವತಃ ಉಪಾಸನಾ ಹೇಳಿಕೊಂಡಿದ್ದಾರೆ. ರಶ್ಮಿಕಾ ಸದಾ ನಗುಮೊಗದ ಮತ್ತು ಪಾಸಿಟಿವ್​ ವೈಬ್​ಅನ್ನು ತನ್ನೊಳಗೆ ಇಟ್ಟುಕೊಂಡಿರುವ ನಟಿ. ಕೋಟ್ಯಂತರ ಯುವ ಪೀಳಿಗೆಯ ನೆಚ್ಚಿನ ನಟಿಯಾಗಿ ಗುರುತಿಸಿಕೊಳ್ಳುವುದರ ಜತೆಗೆ ನಗುವಿನ ಮೂಲಕವೇ ಆರೋಗ್ಯಕರ ಸಂದೇಶವನ್ನು ನೀಡುತ್ತಿದ್ದಾರೆ. ಅದು URLife ನಲ್ಲಿಯೂ ಮುಂದುವರಿಯಲಿದೆ ಎಂಬುದು ಉಪಾಸನಾ ಮಾತು.

ಸೋಷಿಯಲ್ ಮೀಡಿಯಾದಲ್ಲಿ 10 ಮಿಲಿಯನ್​ಗೂ ಅಧಿಕ ಹಿಂಬಾಲಕರನ್ನು ಹೊಂದಿರುವ ರಶ್ಮಿಕಾ, ಸದ್ಯ ಭಾರತೀಯ ಸಿನಿಮಾ ರಂಗದಲ್ಲಿ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು. ಅದೆಷ್ಟೋ ಯುವಕ ಯುವತಿಯರ ಹಾಟ್ ಫೇವರಿಟ್ ನಟಿಯಾಗಿದ್ದಾರೆ.

ಸೇವಿಸುವ ಆಹಾರ ಮತ್ತು ವ್ಯಾಯಾಮ, ಯೋಗದ ಬಗ್ಗೆಯೂ ತಮ್ಮ ಅಭಿಮಾನಿಗಳಿಗೆ ಮಾಹಿತಿ ನೀಡುತ್ತಿರುತ್ತಾರೆ. ಇದೀಗ ರಶ್ಮಿಕಾ ಅವರ ಲೈಫ್​ಸ್ಟೈಲ್ ಬಗ್ಗೆ URife ಮಾಹಿತಿ ಬಿಚ್ಚಿಡಲಿದೆ. ಅವರ ಆರೋಗ್ಯಕರ ಜೀವನದ ಗುಟ್ಟನ್ನು ಓದುಗರಿಗೆ ಈ ಮೂಲಕ ತಲುಪಿಸಲಿದೆ. ಮಾನಸಿಕ ಆರೋಗ್ಯದ ಬಗ್ಗೆಯೂ ಇಲ್ಲಿ ಮಾಹಿತಿ ಸಿಗಲಿದೆ.

ಭಾರತೀಯ ಕಾರ್ಪೊರೇಟ್ ವಲಯದಲ್ಲಿ URLife 14 ಮಿಲಿಯನ್ ಗೂ ಅಧಿಕ ಓದುಗರನ್ನು ಒಳಗೊಂಡ ಭಾರತದ ಅತಿದೊಡ್ಡ ಆರೋಗ್ಯ ಸೇವಾ ಪೂರೈಕೆದಾರ ಸಂಸ್ಥೆಯಾಗಿದೆ. ತಜ್ಞರ ಸಲಹೆ, ಅತ್ಯಾವಶ್ಯಕ ಸಂಪಾದಕೀಯ ವಿಷಯ, ವಿವರವಾದ ಮಾಹಿತಿಯನ್ನು ಒದಗಿಸುತ್ತಿದೆ. ಭಾರತದ ಕಿರಿಯ ಮತ್ತು ಅತ್ಯಂತ ಕ್ರಿಯಾತ್ಮಕ ಯೋಗಕ್ಷೇಮ ಮೇಲ್ವಿಚಾರಕರಾದ ಉಪಾಸನ ಕೊನಿಡೆಲಾ ಅವರ ಮಾರ್ಗದರ್ಶನದಲ್ಲಿ URLife ಅಭಿವೃದ್ಧಿಪಡಿಸಲಾಗಿದೆ.

Published On - 1:09 pm, Tue, 10 November 20

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!