AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಮನವಿಗೆ ಓಗೊಟ್ಟು ಆನೆ ದತ್ತು ಪಡೆದ ಉಪೇಂದ್ರ; ಒಂದು ವರ್ಷಕ್ಕೆ ಆಗುವ ಖರ್ಚು ಎಷ್ಟು?

ಉಪೇಂದ್ರ ಅವರ ಕಾರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಉಪೇಂದ್ರ ಮಾಡಿದ ಕಾರ್ಯದಿಂದ ಮತ್ತೊಂದಷ್ಟು ಜನರಿಗೆ ಸ್ಫೂರ್ತಿ ಸಿಕ್ಕಿದ್ದು, ಅವರು ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದಾರೆ.

ದರ್ಶನ್​ ಮನವಿಗೆ ಓಗೊಟ್ಟು ಆನೆ ದತ್ತು ಪಡೆದ ಉಪೇಂದ್ರ; ಒಂದು ವರ್ಷಕ್ಕೆ ಆಗುವ ಖರ್ಚು ಎಷ್ಟು?
ದರ್ಶನ್​ ಮನವಿಗೆ ಓಗೊಟ್ಟು ಆನೆ ದತ್ತು ಪಡೆದ ಉಪೇಂದ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jun 11, 2021 | 7:30 AM

Share

ಚಾಲೆಂಜಿಂಗ್ ಸ್ಟಾರ್​ ದರ್ಶನ್​ ಇತ್ತೀಚೆಗೆ ಪ್ರಾಣಿಗಳನ್ನು ದತ್ತು ಪಡೆಯುವಂತೆ ಕರೆ ನೀಡಿದ್ದರು. ಇದಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಭಿಮಾನಿಗಳು ಝೂನಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ಮಾದರಿ ಆಗುತ್ತಿದ್ದಾರೆ. ಈಗ ನಟ ಉಪೇಂದ್ರ ಕೂಡ ಒಂದು ಆನೆಯನ್ನು ದತ್ತು ಪಡೆದಿದ್ದಾರೆ.

ಕೊವಿಡ್​ ಎರಡನೇ ಅಲೆ ಜೋರಾಗಿದೆ. ಇದರಿಂದ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಲಾಕ್​ಡೌನ್​ ಇರುವ ಕಾರಣ ಪ್ರವಾಸಿ ತಾಣಗಳು ಹಾಗೂ ಝೂಗಳು ಕ್ಲೋಸ್​ ಆಗಿವೆ. ಹೀಗಾಗಿ ಝೂನಲ್ಲಿರುವ ಪ್ರಾಣಿಗಳ ನಿರ್ವಹಣೆ ಕಷ್ಟವಾಗಿದೆ. ಈ ಕಾರಣಕ್ಕೆ ದರ್ಶನ್​ ವಿಡಿಯೋ ಮಾಡಿ ಪೋಸ್ಟ್​ ಮಾಡಿದ್ದರು. ಈ ವಿಡಿಯೋದಲ್ಲಿ ಪ್ರಾಣಿಗಳನ್ನು ದತ್ತು ಪಡೆಯಿರಿ ಎಂದು ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಪ್ರಾಣಿ, ಪಕ್ಷಿಗಳನ್ನು ದತ್ತು ಪಡೆದುಕೊಳ್ಳುತ್ತಿದ್ದಾರೆ.

ಈಗ ದರ್ಶನ್​ ಅವರ ಕರೆಗೆ ರಿಯಲ್​ ಸ್ಟಾರ್ ಉಪೇಂದ್ರ ಕೂಡ ಸ್ಪಂದಿಸಿದ್ದಾರೆ. ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಮಾಡಿರುವ ಅವರು, ‘ಪ್ರಾಣಿಗಳೇ ಗುಣದಲಿ ಮೇಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಕರೆಯಂತೆ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಮೃಗಾಲಯದಿಂದ ಆಫ್ರಿಕನ್ ಆನೆ ಒಂದನ್ನು ದತ್ತು ಪಡೆದಿದ್ದೇನೆ. ಈ ಮೂಲಕ ದರ್ಶನ್ ರವರ ಮಹತ್ಕಾರ್ಯಕ್ಕೆ ಕೈಜೋಡಿಸಿದ್ದೇನೆ’ ಎಂದು ಉಪೇಂದ್ರ ಬರೆದುಕೊಂಡಿದ್ದಾರೆ.

View this post on Instagram

A post shared by Upendra (@nimmaupendra)

ಉಪೇಂದ್ರ ಅವರ ಕಾರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಉಪೇಂದ್ರ ಮಾಡಿದ ಕಾರ್ಯದಿಂದ ಮತ್ತೊಂದಷ್ಟು ಜನರಿಗೆ ಸ್ಫೂರ್ತಿ ಸಿಕ್ಕಿದ್ದು, ಅವರು ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದಾರೆ. ಈ ಬಗ್ಗೆ ದರ್ಶನ್​ ಕೂಡ ಪ್ರತಿಕ್ರಿಯಿಸಿದ್ದು, ‘ಮೈಸೂರಿನ  ಚಾಮರಾಜೇಂದ್ರ ಮೃಗಾಲಯದಲ್ಲಿ ಆಫ್ರಿಕನ್ ಆನೆ ದತ್ತು ಪಡೆದ ಶ್ರೀ ಉಪೇಂದ್ರ ಅವರಿಗೆ ಹೃದಯಪೂರ್ವಕ ಧನ್ಯವಾದಗಳು’ ಎಂದಿದ್ದಾರೆ.

ಹಾಗಾದರೆ, ಒಂದು ಆನೆ ದತ್ತು ಪಡೆದರೆ ಒಂದು ವರ್ಷಕ್ಕೆ ಬರುವ ಖರ್ಚೆಷ್ಟು? ಈ ವಿಚಾರವನ್ನು ದರ್ಶನ್​ ಅವರೇ ಹೇಳಿಕೊಂಡಿದ್ದರು. ಲವ್​ಬರ್ಡ್​ಗೆ 1 ಸಾವಿರ ರೂಪಾಯಿ, ಹುಲಿಗೆ 1 ಲಕ್ಷ ರೂಪಾಯಿ ಹಾಗೂ ಆನೆ ದತ್ತುಪಡೆಯಬೇಕು ಎಂದರೆ 1.70 ಲಕ್ಷ ರೂಪಾಯಿ ನೀಡಬೇಕು ಎಂದಿದ್ದರು.

ಇದನ್ನೂ ಓದಿ: Darshan: ದರ್ಶನ್​ ಕೊಟ್ಟ ಆ ಒಂದು ಕರೆಗೆ ಅಭಿಮಾನಿಗಳಿಂದ ಬಂತು ಅಭೂತಪೂರ್ವ ಪ್ರತಿಕ್ರಿಯೆ; ಸಾಕ್ಷಿ ತೋರಿಸಿದ ಡಿ ಬಾಸ್

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?