AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra Rao: ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್​ನಲ್ಲಿ ಅಬ್ಬರಿಸಿದ ಉಪ್ಪಿ; ಚಿತ್ರದ ಟೀಸರ್ ಬಿಡುಗಡೆ ಯಾವಾಗ ಗೊತ್ತಾ?

Upendra Birthday: ರಿಯಲ್ ಸ್ಟಾರ್ ಉಪೇಂದ್ರ ಅವರ ಜನ್ಮದಿನದ ಪ್ರಯುಕ್ತ ಬಹು ನಿರೀಕ್ಷಿತ ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಇದರ ಮುಖಾಂತರ ಚಿತ್ರದ ಟೀಸರ್ ರಿಲೀಸ್ ಹಾಗೂ ಚಿತ್ರದ ಬಿಡುಗಡೆಯ ಕುರಿತ ಮಾಹಿತಿಯನ್ನು ನೀಡಲಾಗಿದೆ,

Upendra Rao: ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್​ನಲ್ಲಿ ಅಬ್ಬರಿಸಿದ ಉಪ್ಪಿ; ಚಿತ್ರದ ಟೀಸರ್ ಬಿಡುಗಡೆ ಯಾವಾಗ ಗೊತ್ತಾ?
‘ಕಬ್ಜ’ ಚಿತ್ರದಲ್ಲಿ ಉಪೇಂದ್ರ
TV9 Web
| Edited By: |

Updated on: Sep 18, 2021 | 11:40 AM

Share

ಆರ್​.ಚಂದ್ರು ಹಾಗೂ ಉಪೇಂದ್ರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಉಪೇಂದ್ರ ಅವರ ಜನ್ಮದಿನದ ಪ್ರಯುಕ್ತ ಅದ್ದೂರಿ ಮೋಷನ್ ಪೋಸ್ಟರ್ ಮುಖಾಂತರ ಚಿತ್ರದ ಕುರಿತ ಮಹತ್ವದ ಅಪ್ಡೇಟ್ ನೀಡುವುದಾಗಿ ನಿರ್ದೇಶಕ ಆರ್​.ಚಂದ್ರು ತಿಳಿಸಿದ್ದರು. ಅದರಂತೆ, ಆಯುಧ ಹಿಡಿದು ಅಬ್ಬರಿಸುತ್ತಿರುವ ಉಪ್ಪಿಯ ಪೋಸ್ಟರ್​ನೊಂದಿಗೆ ಚಿತ್ರದ ಕುರಿತ ಮಹತ್ವದ ಮಾಹಿತಿಗಳನ್ನೂ ಚಿತ್ರತಂಡ ನೀಡಿದೆ. ಚಿತ್ರದ ಟೀಸರ್ ದೀಪಾವಳಿಗೆ ಬಿಡುಗಡೆಯಾಗಲಿದೆ. ಹಾಗೆಯೇ ಈ ಪ್ಯಾನ್ ಇಂಡಿಯಾ ಚಿತ್ರವು 2022ರಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಲಾಗಿದೆ.

ಮೋಷನ್ ಪೋಸ್ಟರ್​ನಲ್ಲಿ ಏನೇನಿದೆ? 1980ರಲ್ಲಿ ಮಾಫಿಯಾ ಪ್ರಬಲವಾಗುವ ಕತೆಯನ್ನು ಚಿತ್ರವು ಒಳಗೊಂಡಿದೆ. ಈ ಕುರಿತಂತೆ ಪ್ರಸ್ತುತ ಬಿಡುಗಡೆಯಾಗಿರುವ ಪೋಸ್ಟರ್​ನಲ್ಲೂ ಮಾಹಿತಿ ನೀಡಲಾಗಿದೆ. ಹಾಗೆಯೇ ಚಿತ್ರದ ಅದ್ದೂರಿತನ, ಹಿನ್ನೆಲೆ, ಸಂಗೀತ, ಛಾಯಾಗ್ರಹಣ ಮೊದಲಾದವುಗಳ ಗುಣಮಟ್ಟವನ್ನು ಅಭಿಮಾನಿಗಳಿಗೆ ತಿಳಿಸುವಂತೆ ಮೋಷನ್ ಪೋಸ್ಟರ್ ಮೂಡಿಬಂದಿದೆ. ಈ ಚಿತ್ರದಲ್ಲಿ ಸುದೀಪ್ ಕೂಡ ಕಾಣಿಸಿಕೊಳ್ಳಲಿದ್ದು, ಈ ಹಿಂದೆ ಬಿಡುಗಡೆಯಾಗಿದ್ದ ಪೋಸ್ಟರ್ ಎಲ್ಲರ ಮನಸೆಳೆದಿತ್ತು. ಕೆಜಿಎಫ್ ಖ್ಯಾತಿಯ ರವಿ ಬಸ್ರೂರ್ ಚಿತ್ರಕ್ಕೆ ಸಂಗೀತ ನೀಡಲಿದ್ದಿ, ಎಜೆ ಶೆಟ್ಟಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಬಹುದೊಡ್ಡ ತಾರಾಗಣವಿದ್ದು, ಶ್ರೀನಿವಾಸ್ ರಾವ್ ಕೋಟ, ಪ್ರಕಾಶ್ ರಾಜ್, ಜಗಪತಿ ಬಾಬು, ಕಬೀರ್ ದುಹಾನ್ ಸಿಂಗ್ ಮೊದಲಾದವರು ಕಾಣಿಸಿಕೊಳ್ಳಲಿದ್ದಾರೆ. ಚಿತ್ರವನ್ನು ಆರ್​.ಚಂದ್ರಶೇಖರ್ ನಿರ್ಮಿಸುತ್ತಿದ್ದು, ಎಂಟಿಬಿ ನಾಗರಾಜ್ ಪ್ರಸ್ತುತಪಡಿಸಲಿದ್ದಾರೆ.

ಚಿತ್ರದ ಮೋಷನ್ ಪೋಸ್ಟರ್ ಇಲ್ಲಿದೆ:

ನಿರ್ದೇಶಕ ಆರ್​.ಚಂದ್ರು ಹಂಚಿಕೊಂಡಿರುವ ಟ್ವೀಟ್:

ಉಪೇಂದ್ರ ಅವರೊಂದಿಗೆ ಹೊಸ ಚಿತ್ರ ಘೋಷಿಸಿದ ಆರ್​ಜಿವಿ: ಉಪೇಂದ್ರ ಅವರ ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸರ್ಪ್ರೈಸ್ ಎದುರಾಗಿದೆ. ಹಿಂದಿ, ತೆಲುಗು ಚಿತ್ರರಂಗದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ರಾಮ್ ಗೋಪಾಲ್ ವರ್ಮಾ, ಉಪೇಂದ್ರಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಜೊತೆಗೆ ಈರ್ವರ ಕಾಂಬಿನೇಷನ್​ನಲ್ಲಿ ಆಕ್ಷನ್ ಚಿತ್ರವೊಂದು ಮೂಡಿಬರಲಿದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ. ಇದರಿಂದಾಗಿ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ.

ಆರ್​ಜಿವಿ ಹಂಚಿಕೊಂಡ ಟ್ವೀಟ್:

ಇದರೊಂದಿಗೆ ಇಂದು ಉಪೇಂದ್ರ ನಿರ್ದೇಶನದ ಹೊಸ ಚಿತ್ರವೂ ಕೂಡ ಅನೌನ್ಸ್ ಆಗಲಿದೆ. ಅದಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ:

Upendra: ಉಪ್ಪಿ ಹುಟ್ಟುಹಬ್ಬಕ್ಕೆ ರಾಮ್ ಗೋಪಾಲ್ ವರ್ಮಾ ನೀಡಿದ್ರು ಬಿಗ್ ಸರ್ಪ್ರೈಸ್; ಸುದ್ದಿ ಕೇಳಿ ಥ್ರಿಲ್ ಆದ ಅಭಿಮಾನಿಗಳು

‘ಮೆಗಾ ಸ್ಟಾರ್’​ ಚಿರಂಜೀವಿ ಮತ್ತು ರವಿಚಂದ್ರನ್​ ನಡುವಿನ ಸ್ನೇಹ ವಿವರಿಸಲು ಈ ಒಂದು ಘಟನೆ ಸಾಕು

(Upendra and Kichcha Sudeep starring Kabzaa movie motion poster is released on Uppi birthday)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್