ರಾಕಿಂಗ್ ಸ್ಟಾರ್ ಯಶ್ ಮಾಡಿದ ಸಹಾಯದ ಬಗ್ಗೆ ರಿಯಲ್ ಸ್ಟಾರ್ ಉಪೇಂದ್ರ ಹೇಳಿದ್ದೇನು?
ಈ ಸಾಲಿಗೆ ಯಶ್ ಕೂಡ ಸೇರಿಕೊಂಡಿದ್ದಾರೆ. 3,000 ಕಾರ್ಮಿಕರ ಖಾತೆಗೆ ತಲಾ 5,000 ರೂಪಾಯಿ ಹಾಕುವ ನಿರ್ಧಾರವನ್ನು ಯಶ್ ತೆಗೆದುಕೊಂಡಿದ್ದು, ಎಲ್ಲ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಕೊವಿಡ್ ಎರಡನೇ ಅಲೆ ಸಾಕಷ್ಟು ತೊಂದರೆ ಉಂಟು ಮಾಡಿದೆ. ಸಿನಿಮಾ ರಂಗದ ಕಾರ್ಮಿಕರು ಹಾಗೂ ತಂತ್ರಜ್ಞರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕಾರಣಕ್ಕೆ ಉಪೇಂದ್ರ ಸೇರಿದಂತೆ ಕನ್ನಡ ಚಿತ್ರರಂಗದ ಸಾಕಷ್ಟು ಸೆಲೆಬ್ರಿಟಿಗಳು ಸಹಾಯಕ್ಕೆ ಮುಂದಾಗಿದ್ದಾರೆ. ಈಗ ಈ ಸಾಲಿಗೆ ಯಶ್ ಕೂಡ ಸೇರಿಕೊಂಡಿದ್ದಾರೆ. 3,000 ಕಾರ್ಮಿಕರ ಖಾತೆಗೆ ತಲಾ 5,000 ರೂಪಾಯಿ ಹಾಕುವ ನಿರ್ಧಾರವನ್ನು ಯಶ್ ತೆಗೆದುಕೊಂಡಿದ್ದು, ಎಲ್ಲ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಯಶ್ ಮಾಡಿದ ಸಹಾಯಕ್ಕೆ ಉಪೇಂದ್ರ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ‘ಯಶ್ ಇದು ಅದ್ಭುತ ಕಾರ್ಯ, ಧನ್ಯವಾದಗಳು. ಇಂತಹ ಮತ್ತಷ್ಟು ಮಹತ್ಕಾರ್ಯಗಳು ತಮ್ಮಿಂದ ನಡೆಸಲು ಆ ಭಗವಂತ ತಮಗೆ ಶಕ್ತಿ ನೀಡಲಿ’ ಎಂದಿದ್ದಾರೆ.
Great initiative @TheNameIsYash ಧನ್ಯವಾದಗಳು ಯಶ್ ? ಇಂತಹ ಮತ್ತಷ್ಟು ಮಹತ್ಕಾರ್ಯಗಳು ತಮ್ಮಿಂದ ನಡೆಸಲು ಆ ಭಗವಂತ ತಮಗೆ ಶಕ್ತಿ ನೀಡಲಿ??? https://t.co/3W1i4kOMSY
— Upendra (@nimmaupendra) June 1, 2021
ಈ ಬಗ್ಗೆ ಯಶ್ ಮಂಗಳವಾರ ಬರೆದುಕೊಂಡಿದ್ದರು. ‘ಕಣ್ಣಿಗೆ ಕಾಣದ ವೈರಸ್ ಮನುಷ್ಯನ ಬದುಕನ್ನು ಹೆಚ್ಚು ಕಮ್ಮಿ ಬುಡಮೇಲು ಮಾಡಿದೆ. ಅದರಲ್ಲೂ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈ ಕಟ್ಟಿ ಕುಳಿತಿದೆ. ಹೌದು ಇದು ಬರೀ ಮಾತನಾಡುವ ಸಮಯವಲ್ಲ.. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ. ಹಾಗಾಗಿ ಸುಮಾರು 3000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5000 ರೂಪಾಯಿಗಳನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ’ ಎಂದು ಯಶ್ ಪತ್ರ ಆರಂಭಿಸಿದ್ದರು.
‘ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ. ಗೋವಿಂದು ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು,ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ. ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲಾ ಕಷ್ಟಗಳಿಗೂ ಪರಿಹಾರ ಎಂಬುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು.. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಸಹಾಯ ಮಾಡಿದರೆ.. ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎಂಬುದು ನನ್ನ ಆಶಯ’ ಎಂದು ಯಶ್ ಪತ್ರದಲ್ಲಿ ತಿಳಿಸಿದ್ದರು.
ಇದನ್ನೂ ಓದಿ: Yash: ಸಿನಿಮಾ ತಂತ್ರಜ್ಞರಿಗೆ ಯಶ್ ದೊಡ್ಡ ಸಹಾಯ; 1.5 ಕೋಟಿ ರೂ. ನೆರವು ನೀಡುತ್ತಿರುವ ರಾಕಿಂಗ್ ಸ್ಟಾರ್