‘ನಿಮ್ಮೆಲ್ಲರನ್ನು ಇನ್ನೂ ಹೆಚ್ಚು ಪ್ರೀತಿಸುವ ಹೃದಯ ನನಗೆ ಕೊಡೆ ತಾಯಿ’: ಎಫ್​ಐಆರ್​ ತಡೆ ಬಳಿಕ ಉಪೇಂದ್ರ ಮೊದಲ ಪ್ರತಿಕ್ರಿಯೆ

ಹೈಕೋರ್ಟ್​ ಆದೇಶದ ಬಳಿಕ ಉಪೇಂದ್ರ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಅವರು ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಸಂಪೂರ್ಣ ಪ್ರಾಸದ ಸಾಲುಗಳಿಂದ ಅವರು ತಮ್ಮ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ. ಅವರ ಈ ಪೋಸ್ಟ್​ ವೈರಲ್​ ಆಗಿದೆ. ನೆಟ್ಟಿಗರು ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ನಿಮ್ಮೆಲ್ಲರನ್ನು ಇನ್ನೂ ಹೆಚ್ಚು ಪ್ರೀತಿಸುವ ಹೃದಯ ನನಗೆ ಕೊಡೆ ತಾಯಿ’: ಎಫ್​ಐಆರ್​ ತಡೆ ಬಳಿಕ ಉಪೇಂದ್ರ ಮೊದಲ ಪ್ರತಿಕ್ರಿಯೆ
ಉಪೇಂದ್ರ
Follow us
ಮದನ್​ ಕುಮಾರ್​
|

Updated on: Aug 14, 2023 | 6:01 PM

ನಟ ಉಪೇಂದ್ರ (Upendra) ಅವರು ಆಡಿದ ಒಂದೇ ಒಂದು ಮಾತಿನಿಂದಾಗಿ ದೊಡ್ಡ ವಿವಾದ ಸೃಷ್ಟಿ ಆಗಿದೆ. ಸದ್ಯಕ್ಕೆ ಅವರೀಗ ನಿಟ್ಟುಸಿರು ಬಿಡುವಂತೆ ಆಗಿದೆ. ಜಾತಿ ನಿಂದನೆ ಆರೋಪದ ಮೇಲೆ ಉಪೇಂದ್ರ ವಿರುದ್ಧ ಕೇಸ್​ ದಾಖಲಾಗಿತ್ತು. ಆದರೆ ಅದನ್ನು ಪ್ರಶ್ನಿಸಿ ಅವರು ಹೈಕೋರ್ಟ್​ ಮೆಟ್ಟಿಲೇರಿದ್ದರು. ಸದ್ಯಕ್ಕೆ ಉಪೇಂದ್ರ ವಿರುದ್ಧ ದಾಖಲಾಗಿರುವ ಎಫ್​ಐಆರ್​ಗೆ (FIR) ತಡೆ ನೀಡುವಂತೆ ಹೈಕೋರ್ಟ್​ ಆದೇಶಿಸಿದೆ. ಈ ಘಟನೆ ಬಳಿಕ ಉಪೇಂದ್ರ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್​ (Upendra Twitter) ಮೂಲಕ ಅವರು ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಸಂಪೂರ್ಣ ಪ್ರಾಸದ ಸಾಲುಗಳಿಂದ ಅವರು ತಮ್ಮ ಮನದ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ. ಅವರ ಈ ಟ್ವೀಟ್​ ವೈರಲ್​ ಆಗಿದೆ. ನೆಟ್ಟಿಗರು ಹಲವು ರೀತಿಯಲ್ಲಿ ಇದಕ್ಕೆ ಕಮೆಂಟ್​ ಮಾಡುತ್ತಿದ್ದಾರೆ.

‘ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ. ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ. ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹೃದಯಗಳು ಹಿಡಿದ ಪ್ರೀತಿಯ ಕೊಡೆ. ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹೃದಯ ನನಗೆ ಕೊಡೆ ತಾಯಿ… ನನಗೆ ಕೊಡೆ. ಧನ್ಯವಾದಗಳು’ ಎಂದು ಉಪೇಂದ್ರ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

ಉಪೇಂದ್ರ ಟ್ವೀಟ್​:

ಜಾತಿ, ಧರ್ಮಕ್ಕೆ ಸಂಬಂಧಿಸಿದ ವಿಚಾರಗಳು ಬಹಳ ಸೂಕ್ಷ್ಮವಾಗಿರುತ್ತವೆ. ಅದರಲ್ಲೂ ಸೆಲೆಬ್ರಿಟಿಗಳು ಮತ್ತು ಸಾರ್ವಜನಿಕ ವಲಯದಲ್ಲಿ ಇರುವ ವ್ಯಕ್ತಿಗಳು ಮಾತನಾಡುವಾಗ ಬಹಳ ಎಚ್ಚರಿಕೆಯಿಂದ ಇರಬೇಕು. ಇತ್ತೀಚೆಗೆ ಪ್ರಜಾಕೀಯದ ಕುರಿತು ಅಭಿಮಾನಿಗಳ ಜೊತೆ ಮಾತನಾಡಲು ಸೋಶಿಯಲ್​ ಮೀಡಿಯಾದಲ್ಲಿ ಲೈವ್​ ಬಂದಿದ್ದ ಉಪೇಂದ್ರ ಅವರು ಜಾತಿ ನಿಂದನೆ ಆಗಬಹುದಾದ ಒಂದು ಪದವನ್ನು ಬಳಸಿದ್ದರು. ಅದಕ್ಕೆ ಅನೇಕರು ಆಕ್ಷೇಪ ವ್ಯಕ್ತಪಡಿಸಿದರು. ಆ ಸಂಬಂಧವಾಗಿ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್​ ಠಾಣೆಯಲ್ಲಿ ದಾಖಲಾಗಿದ್ದ ಎಫ್​ಐಆರ್​ಗೆ ಹೈಕೋರ್ಟ್​ ತಡೆ ನೀಡಿದ್ದರಿಂದ ಉಪೇಂದ್ರ ಅವರಿಗೆ ಕೊಂಚ ನಿರಾಳ ಆಗಿದೆ.

ಇದನ್ನೂ ಓದಿ: ಜಾತಿ ನಿಂದನೆ ಆರೋಪದಲ್ಲಿ ಉಪೇಂದ್ರಗೆ ರಿಲೀಫ್; ನಟನ ವಿರುದ್ಧದ ಎಫ್‌ಐಆರ್​ಗೆ ಹೈಕೋರ್ಟ್ ತಡೆ

ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಒಂದು ವರ್ಗದ ಜನರು ಉಪೇಂದ್ರ ಅವರ ಪರವಾಗಿ ನಿಂತಿದ್ದಾರೆ. ಮತ್ತೊಂದು ವರ್ಗದ ಜನರು ಉಪ್ಪಿ ಹೇಳಿದ ಮಾತುಗಳನ್ನು ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಇಷ್ಟೆಲ್ಲ ನಡೆದ ಬಳಿಕ ಉಪೇಂದ್ರ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಒಟ್ಟಾರೆ ಬೆಳವಣಿಗಳ ನಂತರ ಉಪೇಂದ್ರ ಅವರ ನಿವಾಸಕ್ಕೆ ಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ: ಉಪೇಂದ್ರ ಹೇಳಿಕೆಗೆ ಹೆಚ್​ ಸಿ‌ ಮಹದೇವಪ್ಪ ಕಿಡಿ, ಕ್ರಮ ಕೈಗೊಳ್ಳಲಾಗುವುದು ಎಂದ ಸಮಾಜ ಕಲ್ಯಾಣ ಸಚಿವ

ಸಿನಿಮಾ ವಿಚಾರಕ್ಕೆ ಬರುವುದಾದರೆ, ಉಪೇಂದ್ರ ಅವರು ‘ಯುಐ’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಬಹುವರ್ಷಗಳ ಬಳಿಕ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಿನಿಮಾ ಎಂಬ ಕಾರಣಕ್ಕೆ ‘ಯುಐ’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಇನ್ನು, ‘ಬುದ್ಧಿವಂತ 2’ ಸಿನಿಮಾ ಕೂಡ ಬಿಡುಗಡೆಗೆ ಸಜ್ಜಾಗಿದೆ. ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಯಶಸ್ಸಿನಲ್ಲಿರುವ ನಿರ್ದೇಶಕ ಶಶಾಂಕ್ ಜೊತೆಗೆ ಉಪೇಂದ್ರ ಅವರೊಂದು ಸಿನಿಮಾ ಮಾಡಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ