ರಜನೀಕಾಂತ್​ರನ್ನು ಮಹಾಭಾರತದ ಪಾತ್ರಕ್ಕೆ ಹೋಲಿಸಿದ ಉಪೇಂದ್ರ

Upendra: ಉಪೇಂದ್ರ ನಟನೆಯ ‘ಯುಐ’ ಸಿನಿಮಾ ಡಿಸೆಂಬರ್ 20 ರಂದು ಬಿಡುಗಡೆ ಆಗುತ್ತಿದೆ. ಸಿನಿಮಾದ ಪ್ರಚಾರದಲ್ಲಿರುವ ಉಪ್ಪಿಗೆ ಹೋದಲ್ಲೆಲ್ಲ ಅವರು ರಜನೀಕಾಂತ್ ಜೊತೆ ನಟಿಸುತ್ತಿರುವ ‘ಕೂಲಿ’ ಸಿನಿಮಾದ ಬಗ್ಗೆ ಪ್ರಶ್ನೆಗಳು ಎದುರಾಗುತ್ತಿವೆ. ಸಂದರ್ಶನವೊಂದರಲ್ಲಿ ಉಪೇಂದ್ರ ಅವರು ರಜನೀಕಾಂತ್ ಅವರನ್ನು ದ್ರೋಣಾಚಾರ್ಯಗೆ ಹೋಲಿಸಿದ್ದಾರೆ.

ರಜನೀಕಾಂತ್​ರನ್ನು ಮಹಾಭಾರತದ ಪಾತ್ರಕ್ಕೆ ಹೋಲಿಸಿದ ಉಪೇಂದ್ರ
Upendra Rajinikanth
Follow us
ಮಂಜುನಾಥ ಸಿ.
|

Updated on: Dec 19, 2024 | 5:29 PM

ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ನಾಳೆ (ಡಿಸೆಂಬರ್ 20) ತೆರೆಗೆ ಬರಲಿದೆ. ಸಿನಿಮಾದ ಪ್ರಚಾರವನ್ನು ಬಲು ಜೋರಾಗಿ ಮಾಡುತ್ತಿದ್ದಾರೆ ಉಪೇಂದ್ರ. ಕನ್ನಡದ ಜೊತೆಗೆ ಹಿಂದಿ, ತೆಲುಗು, ತಮಿಳು ಭಾಷೆಗಳಲ್ಲಿಯೂ ‘ಯುಐ’ ಸಿನಿಮಾ ತೆರೆಗೆ ಬರುತ್ತಿದ್ದು, ಬೇರೆ ಬೇರೆ ರಾಜ್ಯಗಳಿಗೆ ಹೋಗಿ ಉಪ್ಪಿ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ. ಉಪ್ಪಿ ಹೋದಲ್ಲೆಲ್ಲ ‘ಯುಐ’ ಸಿನಿಮಾದ ಜೊತೆಗೆ ಅವರು ರಜನೀಕಾಂತ್ ಜೊತೆ ನಟಿಸುತ್ತಿರುವ ‘ಕೂಲಿ’ ಸಿನಿಮಾದ ಬಗ್ಗೆಯೂ ಪ್ರಶ್ನೆಗಳನ್ನು ಕೇಳಲಾಗುತ್ತಿದೆ.

ಇದೀಗ ಖ್ಯಾತ ಬಾಲಿವುಡ್ ಮ್ಯಾಗಜೀನ್ ಪಿಂಕ್​ವಿಲ್ಲಾಗೆ ಉಪೇಂದ್ರ ನೀಡಿರುವ ಸಂದರ್ಶನದಲ್ಲಿ ರಜನೀಕಾಂತ್ ಬಗ್ಗೆ ಉಪ್ಪಿ ಮಾತನಾಡಿದ್ದಾರೆ. ‘ರಜನೀಕಾಂತ್ ಬಗ್ಗೆ ಮಾತನಾಡಲು ಕಡಿಮೆ ಸಮಯ ಸಾಕಾಗುವುದಿಲ್ಲ. ಅದಕ್ಕಾಗಿ ಪ್ರತ್ಯೇಕ ಸಂದರ್ಶನವನ್ನೇ ಮಾಡಬೇಕು. ಆದರೆ ಅವರ ಬಗ್ಗೆ ಕಿರಿದಾಗಿ ಹೇಳಬೇಕೆಂದರೆ ಅವರಿಗಿರುವ ಜ್ಞಾನ, ಅವರ ಮಾತುಗಳು ಇನ್ನೂ ಸಾಕಷ್ಟು ವಿಷಯಗಳು ಅವರನ್ನು ನನ್ನ ಪಾಲಿನ ದ್ರೋಣಾಚಾರ್ಯರನ್ನಾಗಿ ಮಾಡಿದೆ’ ಎಂದಿದ್ದಾರೆ.

ಇದನ್ನೂ ಓದಿ:ಪ್ರಭಾಸ್, ರಜನೀಕಾಂತ್, ಶಾರುಖ್ ಖಾನ್ ಅನ್ನೂ ಹಿಂದಿಕ್ಕಿದ ಅಲ್ಲು ಅರ್ಜುನ್

ರಜನೀಕಾಂತ್ ಅವರನ್ನು ದ್ರೋಣಾಚಾರ್ಯರಿಗೆ ಹೋಲಿಸುವ ಮೂಲಕ ಉಪೇಂದ್ರ ಅವರು ರಜನೀಕಾಂತ್ ಅವರಿಗೆ ತಮ್ಮ ಗುರುವಿನ ಸ್ಥಾನ ನೀಡಿದ್ದಾರೆ. ಉಪೇಂದ್ರ ಅವರು ಈ ಹಿಂದೆ ಕೆಲವು ಬಾರಿ ರಜನೀಕಾಂತ್ ಅನ್ನು ಭೇಟಿಯಾಗಿದ್ದಾರೆ. ಅವರ ಬಗ್ಗೆ ಗೌರವದ ಮಾತುಗಳನ್ನಾಡಿದ್ದಾರೆ. ಇದೀಗ ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಕೂಲಿ’ ಸಿನಿಮಾವನ್ನು ತಮಿಳಿನ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್ ನಿರ್ದೇಶನ ಮಾಡುತ್ತಿದ್ದಾರೆ.

ಉಪೇಂದ್ರ ಬಹಳ ವರ್ಷಗಳ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿದಿದ್ದಾರೆ. ಉಪೇಂದ್ರ ನಿರ್ದೇಶನದ ‘ಯುಐ’ ಸಿನಿಮಾ ನಾಳೆ (ಡಿಸೆಂಬರ್ 20) ಬಿಡುಗಡೆ ಆಗುತ್ತಿದೆ. ಸಿನಿಮಾಕ್ಕೆ ಲಹರಿ ವೇಲು ಮತ್ತು ಕೆಪಿ ಶ್ರೀಕಾಂತ್ ಬಂಡವಾಳ ತೊಡಗಿಸಿದ್ದಾರೆ. ಸಿನಿಮಾಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಸಿನಿಮಾದ ಟ್ರೈಲರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್